ರೈತರೇ ಸ್ವತಃ ಬೆಳೆ ಸಮೀಕ್ಷೆ ಮಾಡಿಸಿ ಮುಂದೆ ಬೆಳೆ ಪರಿಹಾರ, ಬೆಳೆ ವಿಮೆ ಸೌಲಭ್ಯವನ್ನು ಪಡೆಯಬಹುದು. ಹೌದು ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಬೆಳೆ ಸಮೀಕ್ಷೆ ಯೋಜನೆ ಒಂದಾಗಿದೆ. ರೈತರು ಈಗ ಬೆಳೆ ಸಮೀಕ್ಷೆ ಆ್ಯಪ್ ಮೂಲಕ ತಮ್ಮ ಜಮೀನಿನ ಸರ್ವೆ ನಂಬರ್, ಹಿಸ್ಸಾ ನಂಬರ್ ವಾರು ಬೆಳೆದ ವಿವಿಧ ಬೆಳೆಗಳ ವಿವರ, ಕ್ಷೇತ್ರ, ಖುಸ್ಕಿ, ನೀರಾವರಿ ಮಾಹಿತಿಯನ್ನು ಛಾಯಾಚಿತ್ರ ಸಹಿತ ಬೆಳೆಯ ವಿವರಗಳನ್ನು ಬೆಳೆ ಸಮೀಕ್ಷೆ ಆ್ಯಪ್ ನಲ್ಲಿ ಅಪ್ಲೋಡ್ ಮಾಡಬಹುದು.
ಬೆಳೆ ಸಮೀಕ್ಷೆಯನ್ನು ರೈತರು ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು. ಗೂಗಲ್ ಪ್ಲೇ ಸ್ಟೋರ್ ನಲ್ಲಿ Kharif Farmer Crop 2022-23 ಎಂದು ಟೈಪ್ ಮಾಡಿ ಬೆಳೆ ಸಮೀಕ್ಷೆ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬಹುದು. ಅಥವಾ ರೈತರು ಈ
https://play.google.com/store/apps/details?id=com.csk.Khariffarmer22_23.cropsurvey
ಲಿಂಕ್ ಮೇಲೆ ಕ್ಲಿಕ್ ಮಾಡಿ ಇನ್ಸ್ ಸ್ಟಾಲ್ ಮಾಡಿಕೊಳ್ಳಬಹುದು.ನಂತರ ಆಧಾರ್ ಕಾರ್ಡ್ ನಲ್ಲಿರುವ ಕ್ಯೂ ಆರ್ ಕೋಡ್ ನ್ನು ಸ್ಕ್ಯಾನ್ ಮಾಡಿ ತಮ್ಮ ಮೊಬೈಲ್ ಸಂಖ್ಯೆಗೆ ಬರುವ ಓಟಿಪಿ ನೋಂದಾಯಿಸಿಕೊಂಡು ತಮ್ಮ ಜಮೀನಿನ ವಿವರಗಳನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ತದನಂತರ ತಮ್ಮ ಜಮೀನುಗಳಿಗೆ ತೆರಳಿ ಸಂಬಂಧಪಟ್ಟ ಸರ್ವೆ ನಂಬರಿನಲ್ಲಿ ಬೆಳೆದಿರುವ ಬೆಳೆಗಳ ಛಾಯಾಚಿತ್ರಗಳನ್ನು ತೆಗೆದು ಅಪ್ಲೋಡ್ ಮಾಡಬೇಕು.
ರೈತರೇಕೆ ಬೆಳೆ ಸಮೀಕ್ಷೆ ಮಾಡಿಸಬೇಕು?
ಕೃಷಿ, ರೇಷ್ಮೆ, ತೋಟಗಾರಿಕೆ ಬೆಳೆಗಳ ವಿಸ್ತೀರ್ಣ ಎಣಿಕೆ ಕಾರ್ಯಗಳಲ್ಲಿ ಬೆಳೆ ವಿಮೆ ಯೋಜನೆಯ ಸರ್ವೆ ನಂಬರ್ ವಾರು ಬೆಳೆ ಪರಿಶೀಲನೆ ಹಾಗೂ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು ಉಪಯೋಗವಾಗುತ್ತದೆ. ಸರ್ವೆ ನಂಬರ್ ಆಯ್ಕೆ ಮಾಡಲು ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಲು ಬೆಳೆ ಸಮೀಕ್ಷೆಯ ಕೆಲಸಕ್ಕೆ ಬರುತ್ತದೆ. ಅರ್ಹ ಫಲಾನುಭವಿಗಳನ್ನು ಗುರುತಿಸಲು, ಆರ್.ಟಿ.ಸಿ ಯಲ್ಲಿ ಬೆಳೆ ವಿವರಗಳನ್ನು ದಾಖಲಾತಿಗಾಗಿ ಬೆಳೆ ಸಮೀಕ್ಷೆ ಉಪಯೋಗವಾಗುತ್ತದೆ.
ಎನ್.ಡಿ.ಆರ್.ಎಫ್, ಎಸ್.ಬಿ. ಆರ್. ಎಫ್ ಅಡಿಯಲ್ಲಿ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಹಾನಿಗೊಳಗಾದ ಬೆಳೆಯ ವಿಸ್ತೀರ್ಣದ ವಿವರ ಹಾಗೂ ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವ ಸಂದರ್ಭದಲ್ಲಿ ಬೆಳೆ ಸಮೀಕ್ಷೆ ಬಳಸಬಹುದು.
ಇದನ್ನೂ ಓದಿ : ಮೊಬೈಲ್ ನಲ್ಲೇ ಜಮೀನಿನ ಹಳೆಯ ಪಹಣಿಗಳನ್ನು ನೋಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
ರೈತರು ಹೆಚ್ಚಿನ ಆಸಕ್ತಿಯೊಂದಿಗೆ ಪ್ರಸಕ್ತ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯದಲ್ಲಿ ಪಾಲ್ಗೊಂಡು ತಮ್ಮ ಜಮೀನಿನಲ್ಲಿರುವ ಕೃಷಿ, ತೋಟಗಾರಿಕೆ, ಅರಣ್ಯ, ರೇಷ್ಮೆ ಇತರೆ ಬೆಳೆಗಳ ವಿವರಗಳನ್ನು ಬೆಳೆ ಸಮೀಕ್ಷೆ ಆ್ಯಪ್ ನಲ್ಲಿ ನಮೂದಿಸಬೇಕಾಗುತ್ತದೆ.
ರೈತರಿಗೆ ಬೆಳೆ ಸಮೀಕ್ಷೆ ಮಾಡಲು ಬರದಿದ್ದರೆ ಯಾರಿಂದ ಸಮೀಕ್ಷೆ ಮಾಡಿಸಬೇಕು?
ಆಯಾ ಗ್ರಾಮದಲ್ಲಿರುವ ವಿದ್ಯಾವಂತರ ಯುವಕರನ್ನು ಖಾಸಗಿ ನಿವಾಸಿಗಳೆಂದು ಗುರುತಿಸಲಾಗಿದ್ದು, ಅವರ ಸಹಾಯದಿಂದಲೂ ಬೆಳೆ ಸಮೀಕ್ಷೆ ಆ್ಯಪ್ ನಲ್ಲಿ ತಾವು ಬೆಳೆದ ಬೆಳೆಯನ್ನು ದಾಖಲಿಸಬಹುದು. ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ವಿವರಗಳನ್ನು ರೈತರೇ ಖುದ್ದು ಅಥವಾ ಖಾಸಗಿ ನಿವಾಸಿಗಳ ಸಹಾಯ ಪಡೆದು ನಮೂದಿಸಲು ಅವಕಾಶ ನೀಡಲಾಗಿದೆ.
ಬೆಳೆ ಸಮೀಕ್ಷೆಗೆ ಕುರಿತಂತೆ ಮಾಹಿತಿ ಕೇಳಲು ಈ ಅಧಿಕಾರಿಗಳಿಗೆ ಸಂಪರ್ಕಿಸಿ
ಹೆಚ್ಚಿನ ಮಾಹಿತಿಗಾಗಿ ರೈತರು ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಸಹಾಯಕ ತೋಟಗಾರಿಕೆ ಅಧಿಕಾರಿಗಳು, ರೇಷ್ಮೆ ಇಲಾಖೆ ಅಧಿಕಾರಿಗಳಿಗೆ ಸಂಪರ್ಕಿಸಬಹುದು.
2022-23ನೇ ಸಾಲಿನ ಮುಂಗಾರು ಹಂಗಾಮು ಬೆಳೆ ಸಮೀಕ್ಷೆ ಈಗಾಗಲೇ ಆರಂಭವಾಗಿದ್ದು, ರೈತರು ಯಾವುದೇ ರೀತಿಯ ಗೊಂದಲಕ್ಕೀಡಾಗದೆ ರೈತರು ಸ್ವತಃ ಮೊಬೈಲ್ ಮೂಲಕ ಬೆಳೆ ಸಮೀಕ್ಷೆ ಮಾಡಬಹುದು. ಬೆಳೆ ಸಮೀಕ್ಷೆ ಕುರಿತಂತೆ ರೈತರು ಬೆಳೆ ಸಮೀಕ್ಷೆ.ಯ ಸಹಾಯವಾಣಿಗೆ ಕರೆ ಮಾಡಬಹುದು. ಸಹಾಯವಾಣಿ ಸಂಖ್ಯೆ 8448447715 ಗೆ ಕರೆ ಮಾಡಬಹುದು.