ಫ್ರೂಟ್ಸ್ ತಂತ್ರಾಂಶದಲ್ಲಿ ನಿಮ್ಮ ಹೆಸರು ನೋಂದಾಯಿಸಿ

Written by Ramlinganna

Updated on:

land details in FRUITS : ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ತಮ್ಮ ಹೆಸರಿನೊಂದಿಗೆ ಜಮೀನಿನ ಸರ್ವೆ ನಂಬರ್ ಗಳನ್ನು ಸೇರಿಸಿದರೆ ಮಾತ್ರ ನಿಮಗೆ ಬರ ಪರಿಹಾರ ಹಣ ಜಮೆಯಾಗುವುದು.

ಹೌದು, ಶಿವಮೊಗ್ಗ ಜಿಲ್ಲಾದ್ಯಂತ ಫ್ರೂಟ್ಸ್ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ರೈತರು ತಮ್ಮ ಜಮೀನಿನ ಎಲ್ಲಾ ಪಹಣಗಳಿಗೆ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ಜಾತಿ ಪ್ರಮಾಣ ಪತ್ರ ಮತ್ತು ಬ್ಯಾಂಕ್ ವಿವರಗಳನ್ನು ಕೂಡಲೇ ಜೋಡಣೆ ಮಾಡುವಂತೆ ಶಿವಮೊಗ್ಗ ಜಿಲ್ಲಾಧಿಕಾರಿಆರ್. ಸೆಲ್ವಮಣಿ ತಿಳಿಸಿದ್ದಾರೆ.

ಬರ ಪರಿಹಾರ, ಬೆಳೆ ವಿಮೆ, ಬೆಂಬಲ ಬೆಲೆ ಯೋಜನೆ ಹಾಗೂ ಇನ್ನಿತರ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಹೊಂದಿರುವುದು ಕಡ್ಡಾಯವಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 5,11,258 ಕೃಷಿ ಯೋಗ್ಯ ತಾಕುಗಳಿದ್ದು, ಅವುಗಳಲ್ಲಿ ಈಗಾಗಲೇ 3, 28, 807 ತಾಕುಗಳನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನೋದಂಣಿ ಮಾಡಲಾಗಿದ್ದು, 1,90, 749 ತಾಕುಗಳ ನೋಂದಣಿ ಬಾಕಿ ಇದೆ.

ಇದನ್ನೂ ಓದಿ : ಗೃಹಲಕ್ಷ್ಮೀ ಹಣ ಯಾರಿಗೆ ಜಮೆ ಆಗುತ್ತದೆ? ಯಾರಿಗೆ ಜಮೆಯಾಗಲ್ಲ? ಇಲ್ಲಿದೆ ಮಾಹಿತಿ

ಶಿವಮೊಗ್ಗ ಭದ್ರಾವತಿ,ತೀರ್ಥಹಳ್ಳಿ, ಸಾಗರ, ಹೊಸ ನಗರ, ಶಿಕಾರಿಪುರ ಹಾಗೂ ಸೊರಬ ತಾಕುಗಳನ್ನು ಈಗಾಗಲೇ ಬರಪೀಡಿತ ಎಂದು ಘೋಷಣೆಯಾಗಿರುವುದರಿಂದ ಕೃಷಿ ಇಲಾಖೆಯ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರುವ ಒಟ್ಟು ವಿಸ್ತೀರ್ಣ ಮತ್ತು ಬೆಳೆ ಸಮೀಕ್ಷೆ ದತ್ತಾಂಶದ ಆಧಾರದ ಮೇಲೆ ಬೆಳೆ ನಷ್ಟ ಪರಿಹಾರ ನೇರವಾಗಿ ರೈತರ ಖಾತೆಗೆ ವರ್ಗಾವಣೆ ಆಗುತ್ತದೆ. ಎಲ್ಲಾರೈತರು ತಾವು ಹೊಂದಿರುವ ಜಮೀನಿನ ಎಲ್ಲಾ ಸರ್ವೆ ನಂಬರ್ ಗಳನ್ನು ಈ ತಂತ್ರಾಂಶದಲ್ಲಿ ದಾಖಲು ಮಾಡುವಂತೆ ತಿಳಿಸಿದ್ದಾರೆ.

ಫ್ರೂಟ್ಸ್ ತಂತ್ರಾಂಶದಲ್ಲಿ ಎಫ್ಐಡಿ ಮಾಡಿಸಲು ಅರ್ಜಿ ಆಹ್ವಾನ

2023-24ನೇ  ಸಾಲಿನಿಂದ ರೈತರು ಸರ್ಕಾರದ ಯಾವುದೇ ಇಲಾಖೆಯಿಂದ ಯಾವುದೇ ಸೌಲಭ್ಯ ಪಡೆಯಲು ಫ್ರೂಟ್ಸ್ ತಂತ್ರಾಂಶದಲ್ಲಿ ಪಹಣಿ ಜೋಡಣೆ ಮಾಡುವುದು ಕಡ್ಡಾಯವಾಗಿದೆ. 2023-24ರ ಮುಂಗಾರು ಹಂಗಾಮಿನಲ್ಲಿ ಹಾಸನ ಜಿಲ್ಲೆಯ ಎಲ್ಲಾ 8 ತಾಲೂಕುಗಳು ಬರ ಪೀಡಿತ ತಾಲೂಕುಗಳೆಂದು ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಬರದಿಂದ ಹಾನಿಯಾಗಿರುವ ಬೆಳೆಗಳಿಗೆ ಪರಿಹಾರ ಪಾವತಿಸಲು ಬೆಳೆ  ಹಾನಿಯಾದ ಸರ್ವೆ ನಂಬರ್ ವಿವರ ಕಡ್ಡಾಯವಾಗಿ ಫ್ರೂಟ್ಸ್ ತಂತ್ರಾಂಶದಲ್ಲಿ ಜೋಡಣೆಯಾಗಿರಬೇಕು. ಹಾಗೂ ಸದರಿ ಸರ್ವೆ ನಂಬರ್ ನ ಬೆಳೆಯು ಮುಂಗಾರು ಬೆಳೆ ಸಮೀಕ್ಷೆ 2023 ರಲ್ಲಿ ದಾಖಲಾಗಿರುವುದು ಕಡ್ಡಾಯವಾಗಿದೆ. ಆದ್ದರಿಂದ ರೈತರು ತಾವು ಹೊಂದಿರುವ ಒಟ್ಟು ವಿಸ್ತೀರ್ಣದ ಎಲ್ಲಾ ಸರ್ವೆ ನಂಬರ್ ಗಳ ವಿವರಗಳನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ತಪ್ಪದೆ ಜೋಡಣೆ ಮಾಡಬೇಕು.

land details in FRUITS ನಿಮ್ಮ ಹೆಸರಿಗೆ ಫ್ರೂಟ್ಸ್ ಐಡಿ ಆಗಿದೆಯೇ? ಇಲ್ಲೇ ಚೆಕ್ ಮಾಡಿ

ನಿಮ್ಮ ಹೆಸರಿಗೆ ಫ್ರೂರ್ಟ್ ಐಡಿ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈ

https://fruitspmk.karnataka.gov.in/MISReport/GetDetailsByAadhaar.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿ ಸರ್ಚ್ ಮೇಲೆ ಕ್ಲಿಕ್ ಮಾಡಿ ಫ್ರೂಟ್ಸ್ ಐಡಿ ಆಗಿರುವುದನ್ನು ಚೆಕ್ ಮಾಡಿಕೊಳ್ಳಬಹುದು.

ಫ್ರೂಟ್ಸ್ ಐಡಿ ಆಗದೆ ಇದ್ದರೆ ರೈತರು  ರೈತ ಸಂಪರ್ಕ ಕೇಂದ್ರ, ಅಥವಾ ತಾಲೂಕಿನ ಕೃಷಿ, ತೋಟಗಾರಿಕೆ, ರೇಷ್ಮೆಅಧಿಕಾರಿಗಳ ಕಚೇರಿಗೆ ಸಂಪರ್ಕಿಸಿ ಅಗತ್ಯ ದಾಖಲೆ ನೀಡಿ ಫ್ರೂಟ್ಸ್ ಐಡಿ ಮಾಡಿಸಿಕೊಳ್ಳಬಹುದು. ನಿಮ್ಮ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಪುಸ್ತಕ, ಪಹಣಿ, ಮೊಬೈಲ್ ನಂಬರ್ ಹಾಗೂ ಜಾತಿ ಆದಾಯ ಪ್ರಮಾಣ ಪತ್ರ ನೀಡಿ ರೈತರು ಫ್ರೂಟ್ಸ್ ಐಡಿಯನ್ನು ಮಾಡಿಸಿಕೊಳ್ಳಬೇಕು. ನಂತರ ತಮ್ಮ ಜಮೀನಿನ ಎಲ್ಲಾ ದಾಖಲೆಗಳು ಜೋಡಣೆಯಾಗಿವೆಯೋ ಇಲ್ಲವೋ ಎಂಬುದನ್ನು ಪರಿಶೀಲಿಸಿಕೊಳ್ಳಬಹುದು.

Leave a Comment