ಇಕೆವೈಸಿ ಪ್ರಕ್ರಿಯೆ ಸಕ್ಸೆಸ್ ಆಗಿದೆಯೇ ಇಲ್ಲೇ ಚೆಕ್ ಮಾಡಿ

Written by Ramlinganna

Updated on:

e-kyc is completed ಫಲಾನುಭವಿಗಳು ಹಾಗೂ ಈಗ ನೋಂದಣಿ ಮಾಡುವ ರೈತರು ಇಕೆವೈಸಿ ಮಾಡುವುದು ಕಡ್ಡಾಯವಾಗಿದೆ. ಇಕೆವೈಸಿ ಮಾಡಿಸಿದ ರೈತರೂ ತಮ್ಮ ಆಧಾರ್ ಕಾರ್ಡ್ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡಬಹುದು. ಹಾಗೂ ಇಕೆವೈಸಿ ಸಕ್ಸೆಸ್ ಆದನಂತರವೂ ಸ್ಟೇಟಸ್ ನಲ್ಲಿ ಏನೇನು ಮಾಹಿತಿ ಇರಬೇಕು? ಮೊಬೈಲ್ ನಲ್ಲೇ ಚೆಕ್ ಮಾಡಿ.

ಮೊಬೈಲ್ ನಲ್ಲಿ ಇಕೆವೈಸಿ ಹೇಗೆ ಮಾಡಬೇಕು?

ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯಡಿ ನೋಂದಾಯಿತ ಅರ್ಹ ಫಲಾನುಭವಿಗಳು ಕಡ್ಡಾಯವಾಗಿ ಇಕೆವೈಸಿ ಮಾಡಿಕೊಳ್ಳಬೇಕು. ಇಕೆವೈಸಿ ಮಾಡಿಸಲು ಈ

https://exlink.pmkisan.gov.in/aadharekyc.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಪಿಎಂ ಕಿಸಾನ್ ಯೋಜನೆಯ ಓಟಿಪಿ ಬೇಸಡ್ ಇಕೆವೈಸಿ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು ಆಧಾರ್ ಕಾರ್ಡ್ ನಂಬರ್ ಹಾಕಬೇಕು. ಬಳಿಕ ಆಧಾರ್ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ನಮೂದಿಸಬೇಕು. ಮೊಬೈಲ್ ಸಂಖ್ಯೆಗೆ ಬರುವ ಓಟಿಪಿ ನಮೂದಿಸಿ ಪ್ರಕ್ರಿಯೆ ಇಕೆವೈಸಿ ಪೂರ್ಣಗೊಳಿಸಬಹುದು. ಆಧಾರ್ ಸಂಖ್ಯೆಗೆ ಮೊಬೈಲ್ ನಂಬರ್ ಜೋಡಣೆಾಗದ ರೈತುರ ಅಥವಾ ಓಟಿಪಿ ಸೃಜನೆಯಾಗದ ರೈತರು ಹತ್ತಿರದ ಗ್ರಾಮ ಪಂಚಾಯತ್ ನಲ್ಲಿ ಹೊಸದಾಗಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಒನ್ ಸೇವಾ ಕೇಂದ್ರಗಳಲ್ಲಿ ಅಥವಾ ಸೈಬರ್ ಗಳಲ್ಲಿ ಇಕೆವೈಸಿ ಮಾಡಲು ಅವಕಾಶವಿರುತ್ತದೆ.  ಆದಕ್ಕಾರಣ ರೈತರು ಇಕೆವೈಸಿ ಮಾಡಿಸಬೇಕು. ಇಲ್ಲವಾದಲ್ಲಿ ಇಕೆವೈಸಿ ಮಾಡಿಸದಿರುವ ರೈತರಿಗೆ ಮುಂದಿನ 13ನೇ ಕಂತಿನ ಅನುದಾನ ವರ್ಗಾವಣೆಯಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ರೈತರು ಸಮೀಪದ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ  ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು.

 e-kyc is completed ಇಕೆವೈಸಿ ಸಕ್ಸೆಸ್ ಆಗಿದೆಯೋ ಇಲ್ಲವೋ ಇಲ್ಲೆ ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ರೈತರು ಈ

https://pmkisan.gov.in/BeneficiaryStatus.aspx

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ರೈತರು ಮೊಬೈಲ್ ನಂಬರ್ ಹಾಕಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಬೇಕು. ಆಮೇಲೆ ಗೆಟ್ ಡಾಟ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ eKYC Done  ಮುಂದೆ Yes ಇರಲೇಬೇಕು. ನಂತರ  Eligibility ಮುಂದೆ  Yes ಇರಲೇಬೇಕು. ಇದಾದಮೇಲೆ Land Seeding ಎದುರುಗಡೆಯೂ Yes ಇರಲೇಬೇಕು. ಆಗ ಮಾತ್ರ ನಿಮಗೆ ಪಿಎಂ ಕಿಸಾನ್ ಯೋಜನೆಯ ಮುಂದಿನ ಕಂತಿನ ಹಣ ಬರುವ ಸಾಧ್ಟತೆಯಿದೆ.

ಇದನ್ನೂ ಓದಿ : ನಿಮ್ಮ ಜಮೀನಿನ ಅಕ್ಕಪಕ್ಕದ ಜಮೀನು ಯಾರ ಹೆಸರಿಗೆ ಎಷ್ಟು ಎಕರೆಯಿದೆ? ಮೊಬೈಲ್ ನಲ್ಲೆ ಚೆಕ್ ಮಾಡಿ

ಇಕೆವೈಸಿ ಮಾಡಿಸದೆ ಇರುವ ರೈತರಿಗೂ ಇನ್ನೂ ಕಾಲಾವಕಾಶವಿದೆ. ಏಕೆಂದರೆ ರೈತರು ಪಿಎಂ ಕಿಸಾನ್ ಯೋಜನೆಯಿಂದ ವಂಚಿತರಾಗಬಾರದು. ಹಾಗೂ ನಿಜವಾದ ಫಲಾನುಭವಿಗಳಿಗೆ ಈ ಯೋಜನೆಯ ಲಾಭ ಸಿಗಲೆಂದು ಇಕೆವೈಸಿ ಕಡ್ಡಾಯಗೊಳಿಸಿದೆ. ರೈತರು ಮೊಬೈಲ್ ನಲ್ಲಿ ಇಕೆವೈಸಿ ಮಾಡಿಸದಿದ್ದರೆ ತಮ್ಮ ಹತ್ತಿರದ ಗ್ರಾಮ ಒನ್ ಅಥವಾ ಸಿ.ಎಸ್.ಸಿ ಕೇಂದ್ರಗಳಲ್ಲಿಯೂ ಬಯೋಮೆಟ್ರಿಕ್ ಆಧಾರಿತ ಇಕೆವೈಸಿ ಮಾಡಿಸಿಕೊಳ್ಳಬಹುದು. ಈ ತಿಂಗಳ ಕೊನೆಯೊಳಗೆ ಪಿಎಂ ಕಿಸಾನ್ ಯೋಜನೆಯ 13ನೇ ಕಂತು ರೈತರ ಖಾತೆಯೊಳಗೆ ಜಮೆ ಮಾಡುವ ಸಾಧ್ಯತೆಯಿದೆ.

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಪ್ರತಿ ವರ್ಷ ಮೂರು ಕಂತುಗಳಲ್ಲಿ ನಾಲ್ಕು ತಿಂಗಳಿಗೊಮ್ಮೆ2 ಸಾವಿರ ರೂಪಾಯಿ ಒಟ್ಟು 6 ಸಾವಿರ ರೂಪಾಯಿ ರೈತರ ಖಾತೆಗೆ ಜಮೆಯಾಗಲಿದೆ.

Leave a Comment