Krishi Bhagya ಸ್ಕೀಮ್ ಮತ್ತೇ ಜಾರಿ: ಇಲ್ಲಿದೆ ಮಾಹಿತಿ

Written by Ramlinganna

Updated on:

Again implement krishibhagya scheme : ಕೃಷಿ ಭಾಗ್ಯ ಯೋಜನೆಯನ್ನು ಮತ್ತೇ ಜಾರಿ ಮಾಡಲು ಗುರುವಾರ ನಡೆದ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಭಾಷಣದಲ್ಲಿ ನೀಡಿದ ಭರವಸೆಯಂತೆ ಕೃಷಿ ಭಾಗ್ಯ ಯೋಜನೆಯನ್ನು ಮತ್ತೇ ಜಾರಿ ಮಾಡಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.

ಅವರು ಸಚಿವ ಸಂಪುಟ ಸಭೆಯ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸಿದ್ದರಾಮಯ್ಯವರು ಈ ಹಿಂದಿನ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಕೃಷಿ ಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದರು. ಆದರೆ ನಂತರ ಬಂದ ಸರ್ಕಾರಗಳು ಈ ಯೋಜನೆಯನ್ನು ಕೈಬಿಟ್ಟಿದ್ದವು. ಇದರಿಂದಾಗಿ ರೈತರಿಗೆ ಸರ್ಕಾರದ ಯೋಜನೆಯ ಲಾಭ ಸಿಗುತ್ತಿರಲಿಲ್ಲ. ಇದರಿಂದಾಗಿ ರೈತರು ನಿರಾಶೆಗೊಂಡಿದ್ದರು.ಹಾಗಾಗಿ ಮತ್ತೇ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

2023-24ನೇ ಸಾಲಿನಲ್ಲಿ 24 ಜಿಲ್ಲೆಗಳ 106 ತಾಲೂಕುಗಳಲ್ಲಿ ಈ ಯೋಜನೆ ಅನುಷ್ಠಾನಗೊಳ್ಳಲಿದೆ. ಮಳೆ ಆಧಾರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ಮಾರ್ಪಡಿಸುವುದು ಯೋಜನೆಯ ಉದ್ದೇಶವಾಗಿದೆ. ಮಳೆ ನೀರಿನ ಸಮರ್ಪಕ ಸಂಗ್ರಹಣೆ ಹಾಗೂ ಉಪಯುಕ್ತಬಳಕೆ ಮೂಲಕ ಉತ್ಪಾದಕತೆ ವೃದ್ಧಿಸಲಾಗುವುದು.ಕೃಷಿ ಆದಾಯ ಹೆಚ್ಚಳಹಾಗೂ ಮಳೆ ನೀರು ವ್ಯರ್ಥವಾಗದಂತೆ ಆಯ್ದ ಸ್ಥಳಗಳಲ್ಲಿ ಕೃಷಿ ಹೊಂಡಗಳನ್ನು ನಿರ್ಮಿಸಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಈ ಯೋಜನೆಯ ಪ್ರಮುಖ ಅಂಶವಾಗಿದೆ ಎಂದು ಹೇಳಿದರು.

ಇದನ್ನೂ ಓದಿ : ನಿಮ್ಮ ಜಮೀನು ಯಾರ ಹೆಸರಿನೊಂದಿಗೆ ಎಷ್ಟು ಎಕರೆ ಜಂಟಿಯಾಗಿದೆ? ಇಲ್ಲೇ ಚೆಕ್ ಮಾಡಿ

ಈ ಸಾಲಿಗೆ ಯೋಜನೆಗೆ 200 ಕೋಟಿ ಅನುದಾನ ನೀಡಲಾಗುವುದು. ಪೂರಕ ಅಂದಾಜಿನಲ್ಲಿ100 ಕೋಟಿ ಒದಗಿಸಲಾಗಿದೆ. ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆಯಿಂದ ಉಳಿದ100 ಕೋಟಿ ಪಡೆಯಲಾಗುವುದು. ಮಳೆಯಾಶ್ರಿತ ಪ್ರದೇಶಗಳಲ್ಲಿಈ ಯೋಜನೆ ಜಾರಿ ಮಾಡಲಾಗುವುದು.ಇದಕ್ಕಾಗಿ 5 ಒಣಹವೆ ಹವಾಮಾನದ ಜಿಲ್ಲೆಗಳನ್ನೇ ಆಯ್ಕೆ ಮಾಡಲಾಗಿದೆ ಎಂದು ಅವರು ವಿವರಿಸಿದರು.

ಕೃಷಿ ಭಾಗ್ಯ ಯೋಜನೆಯಡಿ ರೈತರಿಗೆ ಏನೇನು ನೀಡಲಾಗುವುದು?

ಮಳೆ ನೀರಿನ ಸಮರ್ಥ ಬಳಕೆ ಮತ್ತು ಸಂರಕ್ಷಿತ ನೀರಾವರಿಗೆ ತನ್ಮೂಲಕ ಸುಧಾರಿತ ಬೆಳೆ ಉತ್ಪಾದನಾ ಪದ್ದತಿ ಅಳವಡಿಸಲು ರೈತರನ್ನು ಪ್ರೋತ್ಸಾಹಿಸಲು ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ಪ್ಯಾಕೇಜ್ ರೂಪದಲ್ಲಿ ಕೃಷಿ ಹೊಂಡ, ಪಾಲಿಥಿನ್ ಹೊದಿಕೆ, ಪಂಪ್ ಸೆಟ್, ಲಘು ನೀರಾವರಿ ಘಟಕ, ಕೃಷಿ ಹೊಂಡದ ಸುತ್ತಲು ನೆರಳು ಪರದೆ ಘಟಕಗಳಿಗೆ ಸಹಾಯಧನ ನೀಡಲಾಗುವುದು.

Again implement krishibhagya scheme ಕೃಷಿ ಭಾಗ್ಯ ಯೋಜನೆಯಡಿ ನೀಡಲಾಗುವ ಸಬ್ಸಿಡಿಗಳ ಮಾಹಿತಿ

ಕೃಷಿ ಭಾಗ್ಯ ಯೋಜನೆಯಡಿಯಲ್ಲಿಕೃಷಿ ಹೊಂಡ ಹಾಗೂ ಇತರ ಘಟಕಗಳ ಅನುಷ್ಠಾನಕ್ಕೆ ಸಬ್ಸಿಡಿ ನೀಡಲಾಗುವುದು. ಹೌದು, ಕೃಷಿ ಹೊಂಡ ನಿರ್ಮಾಣಕ್ಕೆ ಸಾಮಾನ್ಯ ಜನರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ. 90 ರಷ್ಟು ಸಬ್ಸಿಡಿ ನೀಡಲಾಗುವುದು.

ನೀರು ಇಂಗದಂತೆ ತಡೆಯಲು ಪಾಲಿಥಿನ್ ಹೊದಿಕೆ / ಪರ್ಯಾ ಮಾದರಿಗಳಿಗೆ ಗರಿಷ್ಠ 50 ಸಾವಿರರೂಪಾಯಿ ನೀಡಲಾಗುವುದು. ಹೊಂಡದಿಂದ ನೀರು ಎತ್ತಲು ಡೀಸೆಲ್ ಪಂಪ್ ಸೆಟ್ 3 ರಿಂದ 5 ಹೆಚ್ ಪಿ ಗೆ ಸಾಮಾನ್ಯ ಜನರಿಗೆ ಶೇ. 50 ರಷ್ಟು ಸಬ್ಸಿಡಿ ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುತ್ತಿದೆ. ನೀರನ್ನು ಬೆಳೆಗೆ ಹಾಯಿಸಲು ಲಘು ನೀರಾವರಿ (ತುಂತುರು ಅಥವಾ ಹನಿ ನೀರಾವರಿ)ಗೆ ಸಾಮಾನ್ಯ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು. ಕೃಷಿ ಹೊಂಡದಸುತತ್ಲೂ ನೆರಳು ಪರದೆ ನಿರ್ಮಿಸಲು ಶೇ. 50 ರಷ್ಟು ಸಹಾಯಧನ ನೀಡಲಾಗುವುದು.

ಕೃಷಿ ಹೊಂಡ ಕುರಿತಂತೆ ಹಾಗೂ ಯೋಜನೆಯಡಿ ಸಬ್ಸಿಡಿಗಳ ಕುರಿತು ಹೆಚ್ಚಿನ ಮಾಹಿತಿಗೆ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಲು ಕೋರಲಾಗಿದೆ.

Leave a Comment