ವಾಯುಭಾರ ಕುಸಿತ ಇಂದಿನಿಂದ 13 ಜಿಲ್ಲೆಗಳಲ್ಲಿ ಮಳೆ

Written by Ramlinganna

Published on:

Again rain alert : ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆಯಿದೆ. ಹೌದು, ಡಿಸೆಂಬರ್ 13 ರಿಂದ ಮತ್ತೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಮ್ಮ ಯೂಟೂಬ್ ಚಾನೆಲ್ ಸಬಸ್ಕ್ರೈಬ್ ಮಾಡಿ ಕೃಷಿ ಮಾಹಿತಿ ಪಡೆಯಿರಿ

ಚಳಿಗಾಲ ಆರಂಭದಲ್ಲೂ ರಾಜ್ಯದಲ್ಲಿ ಮಳೆ ಬೀಳಲು ಆರಂಭಿಸಿದೆ. ಪೆಂಗಲ್ ಚಂಡಮಾರುತ ಮರೆಯಾಗುತ್ತಿದ್ದಂತೆಯೇ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಇದರಿಂದ ರಾಜ್ಯದ 13 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಬಾರಿ ಹವಾಮಾನ ವೈಪರೀತ್ಯಗಳ ಕಾರಣದಿಂದ ಆಗಾಗ ವ್ಯಾಪಕವಾಗಿ ಸುರಿಯುತ್ತಿದೆ. ಸದ್ಯ ಹಿಂದೂ ಮಹಾಸಾಗರ ಹಾಗೂ ಬಂಗಾಳಕೊಲ್ಲಿಯ ಆಗ್ನೆಯ ಭಾಗದಲ್ಲಿ ಮತ್ತೆ ವಾಯುಭಾರ ಸೃಷ್ಟಿಯಾಗಿದೆ. ಇದರಿಂದಾಗಿ ಡಿಸೆಂಬರ್ 14 ರವರೆಗೆ ರಾಜ್ಯದ ಕೆಲವು ಭಾಗದಲ್ಲಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ಮುನ್ಸೂಚನೆ ನೀಡಿದೆ.

ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಹವಾಮಾನದಲ್ಲಿ ಅಷ್ಟಾಗಿ ಬದಲಾವಣೆ ಆಗುವುದಿಲ್ಲ. ಮಬ್ಬು ವಾತಾವರಣ ತುಂತುರು ಮಳೆ ಜೊತೆಗೆ ಆಗಾಗ ಬಿಸಿಲು ಕಾಣಬಹುದು. ಅಷ್ಟೊತ್ತಿಗಾಗಲೇ ಬಂಗಾಳಕೊಲ್ಲಿ ಹಾಗೂ ಹಿಂದೂ ಮಹಾಸಾಗರದಲ್ಲಿರುವ ಎರಡು ಪ್ರತ್ಯೇಕ ವಾಯುಭಾರ ಕುಸಿತಗಳು ತೀವ್ರಗೊಂಡು ಚಂಡಮಾರುತವಾಗಿ ಬದಲಾಗುವ ಸಾಧ್ಯತೆ ಇದೆ. ಇದರಿಂದಾಗಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಎರಡು ದಿನ ಪ್ರತ್ಯೇಕ ದಿನಗಳಲ್ಲಿ ಭಾರಿ ಮಳೆ ಆರ್ಭಟ ಶುರುವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ Bele vime jame ಆಗಬೇಕಾದರೆ ರೈತರೇನು ಮಾಡಬೇಕು?

ಡಿಸೆಂಬರ್  13 ರಂದು 8 ಜಿಲ್ಲೆಗಳಿಗೆ ಹಾಗೂ ಡಿಸೆಂಬರ್ 14 ರಂದು 9 ಜಿಲ್ಲೆಗಳಲ್ಲಿ ಗರಿಷ್ಠ 110 ಮಿ.ಮೀಟರ್ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ  ಯೆಲ್ಲೋ ಅಲರ್ಟ್ ಘೋಷಿಸಿದೆ.

Again rain alert  ಡಿಸೆಂಬರ್ 13 ಮತ್ತು 14 ರಂದು ಎಲ್ಲೆಲ್ಲಿ ಮಳೆಯಾಗಲಿದೆ?

ಡಿಸೆಂಬರ್ 13 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಹಾಗೂ ಡಿಸೆಂಬರ್ 14 ರಂದು ಕೊಡಗು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಮತ್ತೆ ಚಿಕ್ಕಮಗಳೂರು ಜಿಲ್ಲೆಗಳಿಗೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾದ್ಯತೆಯಿದೆ.

Rain start from December ಮೇಘದೂತ್ ಆ್ಯಪ್  ನಲ್ಲಿ ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

ಮಳೆ ಮಾಹಿತಿ ಬೇಕೆ? ಈ ನಂಬರಿಗೆ ಕರೆ

ನಿಮ್ಮೂರಿನಲ್ಲಾಗುವ ಮಳೆಯ ಮಾಹಿತಿ ಬೇಕೆ? ವರುಣಮಿತ್ರ ಉಚಿತ ಸಹಾಯವಾಣಿ ನಂಬರ್ ಗೆ ಕರೆ ಮಾಡಿ ಹೌದು, 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮುಂದಿನ 48 ಗಂಟೆಗಳ ಅವಧಿಯಲ್ಲಿ ಮಳೆಯಾಗುತ್ತೋ ಇಲ್ಲವೋ ಎಂಬ ಮಾಹಿತಿ ಸಿಗುತ್ತದೆ. ಇದರೊಂದಿಗೆ ಗಾಳಿಯ ವೇಗ ಮಳೆಯ ಪ್ರಮಾಣ ಸೇರಿದಂತೆ ಹವಾಮಾನ ವರದಿಯ ಇನ್ನಿತರ ಮಾಹಿತಿ ಸಿಗಲಿದೆ.

Leave a Comment