ದೇಶದಲ್ಲಿ ಕೊರೋನಾ ಸೋಂಕು ದಿನೇ ದಿನೇ ಹಚ್ಚಾಗುತ್ತಿದ್ದರಿಂದ ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ ಲಸಿಕೆ (all above 18 years will be eligible to get covid 19 vaccine) ನೀಡಲು ಕೇಂದ್ರ ಸರ್ಕಾರವೂ ಮಹತ್ವದ ನಿರ್ಧಾರ ಪ್ರಕಟಿಸಿದೆ.

ಅತಿ ಕಡಿಮೆ ಅವಧಿಯಲ್ಲಿ ದೇಶದ ಗರಿಷ್ಠ ಜನತೆಗೆ ವ್ಯಾಕ್ಸಿನ್ ನೀಡುವ ನಿಟ್ಟಿನಲ್ಲಿ ಕೇಂದ್ರ ಕ್ರಮ ಕೈಗೊಳ್ಳುತ್ತಿದೆ. 3ನೇ ಹಂತದ ಲಸಿಕಾ ಕಾರ್ಯಕ್ರಮದಡಿ ಲಸಿಕೆ ನೀಡುವಿಕೆ ಕಾರ್ಯಕ್ಕೆ ವೇಗ ನೀಡಲಾಗಿದೆ

1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರೂ ಕೋವಿಡ್-19 ಲಸಿಕೆ ಪಡೆಯಲು ಅರ್ಹರಾಗಿರುತ್ತಾರೆ.  ರಾಜ್ಯಗಳು, ಖಾಸಗಿ ಆಸ್ಪತ್ರೆಗಳು ಮತ್ತು ಕೈಗಾರಿಕಾ ಸಂಸ್ಥೆಗಲು ಉತ್ಪಾದಕರಿಂದ ನೇರವಾಗಿ ಡೋಸೆಜ್ ಗಳನ್ನು ಪಡೆಯಬಹುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬೆಳಿಗ್ಗೆಕ್ಕೆ ಕೊರೋನಾ ಪರಿ ಸ್ಥಿತಿ ಕುರಿತು ಸಭೆ ನಡೆಸಿದ ಬಳಿಕ ಆರೋಗ್ಯ ಸಚಿವಾಲಯ ಈ ನಿರ್ಧಾರ ಪ್ರಕಟಿಸಿ, ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.

ಆರಂಭದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ತೀರ್ಮಾನಿಸಲಾಗಿತ್ತು. ನಂತರ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗಿತ್ತು. ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಮೇ 1 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋರೋನಾ ಲಸಿಕೆ ನೀಡಲು ಕ್ರಮಕೈಗೊಳ್ಳಲಾಗಿದೆ.

ಮುಂದಿನ ತಿಂಗಳು ಪ್ರಾರಂಭವಾಗುವ ಲಸಿಕಾ ಅಭಿಯಾನದ ಮೂರನೇ ಹಂತದ ಅಡಿಯಲ್ಲಿ ಲಸಿಕೆ ತಯಾರಕರು ತಮ್ಮ ಮಾಸಿಕ ಕೇಂದ್ರ ಡ್ರಗ್ಸ್ ಲ್ಯಾಬೊರೇಟರಿ (ಸಿಡಿಎಲ್) ಯ ಶೇ. 50 ರಷ್ಟು ಪ್ರಮಾಣವನ್ನು ಕೇಂದ್ರ ಸರ್ಕಾರಕ್ಕೆ ಪೂರೈಸುತ್ತಾರೆ. ಮತ್ತು ಉಳಿದ ಶೇ. 50 ರಷ್ಟು ಪ್ರಮಾಣವನ್ನು ರಾಜ್ಯ ಸರ್ಕಾರಗಳಿಗೆ ಮತ್ತು ಮುಕ್ತ ಮಾರುಕಟ್ಟೆಗೆ ಪೂರೈಸಬಹುದಾಗಿದೆ.

ಅಲ್ಲದೆ ದೇಶದಲ್ಲಿ ಎರಡನೇ ಹಂತದ ಲಸಿಕೆ ಅಭಿಯಾನ ಆರಂಭವಾಗಿದ್ದು, 60 ವರ್ಷ ಮೇಲ್ಪಟ್ಟ ಎಲ್ಲರಿಗೆ ಹಾಗೂ 45 ವರ್ಷ ಮೇಲ್ಪಟ್ಟು ಮಧುಮೇಹದಂಥ ಪೂರ್ವ ಕಾಯಿಲೆಗಳನ್ನು ಹೊಂದಿರುವವರಿಗೆ ನೀಡಲಾಗುತ್ತಿದೆ. ಏಪ್ರಿಲ್‌ 1ರಿಂದ 45 ವರ್ಷಕ್ಕಿಂತ ಮೇಲಿನ ಎಲ್ಲರಿಗೂ ಲಸಿಕೆ ನೀಡಲು ಆರಂಭಿಸಲಾಗಿತ್ತು. ಈಗ ಮೇ 1 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟವರೆಲ್ಲರೂ ಲಸಿಕೆ ಪಡೆಯಬಹುದು.

ಈ ಮೊದಲು ತಿಳಿಸಿದಂತೆ 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ಜನರಿಗೆ ಹಾಗೂ ಕೊರೊನಾ ವಾರಿಯರ್ಸ್‌ಗೆ ಉಚಿತವಾಗಿ ಲಸಿಕೆ ನೀಡಿಕೆ ಮುಂದುವರಿಯಲಿದೆ. ಆರೋಗ್ಯ ಕಾರ್ಯಕರ್ತರು, ಕೋವಿಡ್‌ ವಾರಿಯರ್ಸ್‌ ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಸರಕಾರದ ಲಸಿಕಾ ಕೇಂದ್ರಗಳಲ್ಲಿ ಉಚಿತವಾಗಿ ಲಸಿಕೆ ನೀಡುವುದು ಮುಂದುವರಿಯಲಿದೆ.

Leave a Reply

Your email address will not be published. Required fields are marked *