Anganawadi job notification : ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆಯರು – 11, ಮಿನಿ ಅಂಗನವಾಡಿ ಕಾರ್ಯಕರ್ತೆಯರು -8 ಹಾಗೂ ಸಹಾಯಕಿಯರ 47 ಹುದ್ದೆಗಳನ್ನು ಗೌರವ ಸೇವೆಯ ಆಧಾರದ ಮೇಲೆ ಭರ್ತಿ ಮಾಡಲು ಸ್ಥಳೀಯ ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಸ್ಥಳೀಯರು ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ, ಎರಡನೇ ಮಹಡಿ, ತಾಲೂಕು ಪಂಚಾಯತ್ ಕಾರ್ಯಾಲಯ, ಚಿಂತಾಮಣಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಕಚೇರಿ ದೂರವಾಣಿ ಸಂಖ್ಯೆ08154 255589 ಗೆ ಸಂಪರ್ಕಿಸಬಹುದು ಎಂದು ಚಿಂತಾಮಣಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Anganawadi job notification ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಈ
https://karnemakaone.kar.nic.in/abcd/ApplicationForm_JA_org.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ತೆರೆದುಕೊಳ್ಳುವ ಪೇಜ್ ನಲ್ಲಿ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು. ಕೆಟಗೇರಿ ಆಯ್ಕೆ ಮಾಡಿಕೊಳ್ಳಬೇಕು. ಜಾತಿ ಪ್ರಮಾಣ ಪತ್ರ ಆಯ್ಕೆ ಮಾಡಿಕೊಳ್ಳಬೇಕು. ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬೇಕು.
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅರ್ಹ ಮಹಿಳೆಯರ ಬಳಿ ಆಧಾರ್ ಕಾರ್ಡ್ ಇರಬೇಕು. ವಿಧ್ಯಾಭ್ಯಾಸ ಅರ್ಹತೆ ಪ್ರಮಾಣ ಪತ್ರ ಇರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇರಬೇಕು. ಜನ್ಮದಿನಾಂಕದ ದಾಖಲೆ ಇರಬೇಕು. ಇತ್ತೀಚಿನ ಭಾವಚಿತ್ರ ಇರಬೇಕು.
ರೈತರ ಮನೆಯಲ್ಲಿ ಸಿಕ್ಕ ಬೆಳ್ಳಿ ನಾಣ್ಯಗಳು ಪ್ರಾಮಾಣಿಕ ರೈತನ ಅದ್ಭುತ ಕಥೆ ಈ ಕೆಳಗಿನ ಫೋಟೋ ಮೇಲೆ ಕ್ಲಿಕ್ ಮಾಡಿ
ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು 19-35 ವಯೋಮಿತಿಯೊಳಗಿನ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಬಹುದು. ವಿಕಲಚೇತನರಿಗೆ 10 ವರ್ಷ ಗಳ ವಯೋಮಿತಿ ಸಡಿಲಿಕೆ ಇರುತ್ತದೆ.
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ವಿದ್ಯಾರ್ಹತೆ
ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್.ಎಸ್.ಎಲ್.ಸಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು. ಒಂದು ವರ್ಷದ ನರ್ಸರಿ ಅಥವಾಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಸದರಿಯವರಿಗೆ ಬೋನಸ್ 5 ಅಂಕಗಳನ್ನು ನೀಡಲಾಗುವುದು.
ಇದನ್ನೂ ಓದಿ : ಪಿಎಂ ಕಿಸಾನ್ ಸ್ಟೇಟಸ್ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
ಬೆಂಗಳೂರಿನ ಪ್ರಧಾನ ನೇಮಕಾತಿ ವಲಯ ಕಚೇರಿ ಹಾಗೂ ಬೆಳಗಾವಿ ಸೇನಾ ನೇಮಕಾತಿ ಕಚೇರಿಯಿಂದ ಕೊಪ್ಪಳ ಜಿಲ್ಲಾ ಕ್ರೀಡಾಂಗಣದಲ್ಲಿ ನವೆಂಬರ್ 26 ರಿಂದ ಡಿಸೆಂಬರ್ 8 ರವರೆಗೆ ಅಗ್ನಿವೀರ ನೇಮಕಾತಿ ರ್ಯಾಲಿಯನ್ನು ಆಯೋಜಿಸಲಾಗಿದೆ ಎಂದು ಬೆಳಗಾವಿ ಆರ್ಮಿ ರಿಕ್ರೂಟಿಂಗ್ ಕಚೇರಿಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್ ಮನ್, 10ನೇ ತರಗತಿ ತೇರ್ಗಡೆ, ಅಗ್ನಿವೀರ್ ಟ್ರೇಡ್ಸ್ ಮೆನ್ 8 ನೇ ತರಗತಿ ತೇರ್ಗಡೆ, ಅಗ್ನಿವೀರ್ ಕ್ಲರ್ಕ್, ಸ್ಟೋರ್ ಕೀಪರ್ ಟೆಕ್ನಿಕಲ್ ವಿಭಾಗಗಳಿಗೆ ನೇಮಕಾತಿಗಾಗಿ ರ್ಯಾಲಿ ನಡೆಯಲಿದ್ದು, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಗಳ ಅಭ್ಯರ್ಥಿಗಳಿಗೆ ಈ ನೇಮಕಾತಿ ರ್ಯಾಲಿ ಆಯೋಜಿಸಲಾಗಿದೆ.
Agniveer job notification
ಆನ್ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶವನ್ನು https://joinindianarmy.nic.in/ ವೆಬ್ಸೈಟ್ ದಲ್ಲಿ ಪ್ರಕಟಿಸಲಾಗಿದೆ. 2024ರ ಅಕ್ಟೋಬರ್ 10 ರಿಂದ ಶಾರ್ಟ್ ಲಿಸ್ಟಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರವೇಶ ಕಾರ್ಡನ್ನು ನೀಡಲಾಗುತ್ತದೆ. ಅಭ್ಯರ್ಥಿಗಳು ಪ್ರವೇಶ ಕಾರ್ಡಗಳನ್ನು ಭಾರತೀಯ ಸೇನಾ ನೇಮಕಾತಿಯ ವೆಬ್ಸೈಟ್ ದಲ್ಲಿ ವೈಯಕ್ತಿಕ ಖಾತೆ ಮತ್ತು ನೋಂದಾಯಿತ ಇ-ಮೇಲೆ ಐಡಿಯನ್ನು ಲಾಗಿನ್ಮಾಡುವ ಮೂಲಕ ಪಡೆಯಬಹುದಾಗಿದೆ.
ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳ ಆಮೀಶಕ್ಕೊಳಗಾಗಬಾರದು. ನೇಮಕಾತಿ ಪರೀಕ್ಷೆ ಹಾಗೂ ಅಂತಿಮ ಅರ್ಹತೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.