ಅಂಗನವಾಡಿ ಕಾರ್ಯಕರ್ತೆಯರ ಆಯ್ಕೆ ಪಟ್ಟಿ ಪ್ರಕಟ

Written by Ramlinganna

Updated on:

Anganawadi provisional selection list ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಆಕ್ಷೇಪಣೆಗಳಿದ್ದಲ್ಲಿ ಸೆಪ್ಟೆಂಬರ್ 15 ರೊಳಗೆ ಸಲ್ಲಿಸಲು ಕೋರಲಾಗಿದೆ.

ಹೌದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಶಿಶು ಅಭಿವೃದ್ಧಿ ವ್ಯಾಪ್ತಿಯ 42 ಅಂಗನವಾಡಿ ಕಾರ್ಯಕರ್ತೆಯರು, 70 ಅಂಗನವಾಡಿ ಸಹಾಯಕಿಯರು ಹಾಗೂ ಮೊಳಕಾಲ್ಮೂರು ವ್ಯಾಪ್ತಿಯ 20 ಅಂಗನವಾಡಿ ಕಾರ್ಯಕರ್ತೆಯರು, 34 ಸಹಾಯಕಿಯರು ಮತ್ತು ಹಿರಿಯೂರು ವ್ಯಾಪ್ತಿಯ 5 ಅಂಗನವಾಡಿ ಕಾರ್ಯಕರ್ತೆ,1 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 32 ಅಂಗನವಾಡಿ ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.

ಚಳ್ಳೆಕೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಹಾಗೂ  ಮೊಳಕಾಲ್ಮೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಕಚೇರಿ ಹಾಗೂ ಹಿರಿಯೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಆಯ್ಕೆ ಪಟ್ಟಿಯನ್ನು ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ತಾತ್ಕಾಲಿಕ ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಸಂಬಂಧಿಸಿದ ಸೂಕ್ತ ದಾಖಲಾತಿಗಳೊಂದಿಗೆ ಸೆಪ್ಟೆಂಬರ್ 15 ರಂದು ಸಂಜೆ 5.30 ರೊಳಗೆ ಆಯಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳಿಗೆ ಸಲ್ಲಿಸಬಹುದು. ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Anganawadi provisional selection list ಅಡುಗೆ ಸಹಾಯಕ ಸಿಬ್ಬಂದಿ ನೇಮಕಕ್ಕೆ ಅರ್ಜಿ ಆಹ್ವಾನ

ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟದ ಪುರಸಭೆ ವ್ಯಾಪ್ತಿಯ ವಾರ್ಡ್ ನಂಬರ್ 18 ರಲ್ಲಿ ಇರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆ ನಂ. 1 ಕ್ಕೆ ಅಡುಗೆ ಸಹಾಯಕ ಸಿಬ್ಬಂದಿ ಹುದ್ದೆಯನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ : ನಿಮ್ಮ ಜಮೀನಿನ ಒರಿಜಿನಲ್ ಸರ್ವೆ ಟಿಪ್ಪಣಿ ಪುಸ್ತಕ ಒಂದೇ ನಿಮಿಷದಲ್ಲಿ ಮೊಬೈಲ್ ನಲ್ಲೇ ಚೆಕ್ ಮಾಡಿ

ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 20 ರೊಳಗಾಗಿ ತಮ್ಮಅರ್ಜಿಯನ್ನು ದ್ವಿ ಪ್ರತಿಯಲ್ಲಿ ತಯಾರಿಸಿ, ಈ ಕಾರ್ಯಾಲಯದಲ್ಲಿ ಅರ್ಜಿ ಸಲ್ಲಿಸಲು ಸೂಚಿಸಿದೆ. ಹಾಗೂ ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ಪುರಸಭೆ ಕಾರ್ಯಾಲಯದಲ್ಲಿ ಬಿಸಿಯೂಟದ ಯೋಜನೆಯ ವಿಷಯ ನಿರ್ವಾಹಕರನ್ನುಸಂಪರ್ಕಿಸಬಹುದು ಎಂದು ಪುರಸಭೆ ಮುಖ್ಯಾಧಿಕಾರಿ ಸಂಗನಬಸಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೆಪ್ಟೆಂಬರ್ 11 ಕ್ಕೆ ಉದ್ಯೋಗ ಮೇಳ

ಚಿತ್ರದುರ್ಗ ಜಿಲ್ಲೆಯ ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಸೆಪ್ಟೆಂಬರ್ 11 ರಂದು ಬೆಳಗ್ಗೆ 9 ರಿಂದ 5 ಗಂಟೆಯವರೆಗೆ ತುಮಕೂರು ಜಿಲ್ಲೆಯ ಶಿರಾ ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಆವರಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿಎ, ಬಿಕಾಂ, ಬಿಎಸ್.ಸಿ, ಬಿಇ, ಬಿಸಿಎ, ಎಂಸಿಎ, ಎಂಕಾಂ ಹಾಗೂ ಇತರೆ ಎಲ್ಲಾ ಅರ್ಹ ಪದವೀಧರ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಶೈಕ್ಷಣಿಕ ದಾಖಲೆಗಳ ಝರಾಕ್ಸ್ ಪ್ರತಿ, ಪಾಸ್ ಪೋರ್ಟ್ ಫೋಟೋ, ಆಧಾರ್ ಕಾರ್ಡ್ ಹಾಗೂ ಬಯೋಡಾಟಾದೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಂಡು ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳಬಹುದು.

ಆಸಕ್ತ ಅಭ್ಯರ್ಥಿಗಳು https://skilconnect.kaushalkar.com/candidatereg

ಇಲ್ಲಿ ಉಚಿತವಾಗಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9606492216 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಕೆ ಗೋಪಾಲರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಚಿತ ಲ್ಯಾಪ್ ಟಾಪ್ ವಿತರಣೆಗೆ ಅರ್ಜಿ ಆಹ್ವಾನ

ಕರ್ನಾಟಕ ಕಟ್ಟ ಮಮತ್ತು ಇಥರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರ ಮಕ್ಕಳ ಪೈಕಿ 2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ, ದ್ವಿತೀಯ ಪಿಯುಸಿ (ಕಲಾ, ವಾಣಿಜ್ಯ, ವಿಜ್ಞಾನ) ವಿದ್ಯಾರ್ಥಿಗಳಿಂದ ಉಚಿತ ಲ್ಯಾಪ್ ಟಾಪ್ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಭರ್ತಿ ಮಾಡಿದ ಅರ್ಜಿಯನ್ನು ಸೆಪ್ಟೆಂಬರ್ 22 ರೊಳಗೆ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಗಳ ಕಚೇರಿ ಹಾಗೂ ಕಾರ್ಮಿಕ ನಿರೀಕ್ಷಕರ ಕಚೇರಿ ಸಂಪರ್ಕಿಸಬಹುದು.

Leave a Comment