Anganawadi naukari : ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ 6 ಅಂಗನವಾಡಿ ಕಾರ್ಯಕರ್ತೆ ಹುದ್ದೆ, 3 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 43 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಸ್ಥಳೀಯ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 20 ರ ಸಂಜೆ 5.30 ಗಂಟೆಯೊಳಗೆ ಆನ್ಲೈನ್ ಮೂಲಕ ಅರ್ಜಿ ಗಳನ್ನು ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಸುಭಾಶನಗರ, ಮಿನಿ ವಿಧಾನಸೌಧದ ಹತ್ತಿರ, ಕೆ.ಆರ್. ಪೇಟೆ, ದೂರವಾಣಿ ಸಂಖ್ಯೆ 08230 262627 ಗೆ ಸಂಪರ್ಕಿಸಬಹುದು ಎಂದು ಸಿಡಿಪಿಓ ಅರುಣಕುಮಾರ ತಿಳಿಸಿದ್ದಾರೆ. ಕೊನೆಯ ದಿನಾಂಕದವರೆಗೆ ಕಾಯದೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
Anganawadi naukari ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಈ
https://karnemakaone.kar.nic.in/abcd/ApplicationForm_JA_org.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ತೆರೆದುಕೊಳ್ಳುವ ಪೇಜ್ ನಲ್ಲಿ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ತಾಲೂಕು ಆಯ್ಕೆ ಮಾಡಿಕೊಳ್ಳಬೇಕು. ನಂತರ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು. ಕೆಟಗೇರಿ ಆಯ್ಕೆ ಮಾಡಿಕೊಳ್ಳಬೇಕು. ಜಾತಿ ಪ್ರಮಾಣ ಪತ್ರ ಆಯ್ಕೆ ಮಾಡಿಕೊಳ್ಳಬೇಕು. ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬೇಕು.
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅರ್ಹ ಮಹಿಳೆಯರ ಬಳಿ ಆಧಾರ್ ಕಾರ್ಡ್ ಇರಬೇಕು. ವಿಧ್ಯಾಭ್ಯಾಸ ಅರ್ಹತೆ ಪ್ರಮಾಣ ಪತ್ರ ಇರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇರಬೇಕು. ಜನ್ಮದಿನಾಂಕದ ದಾಖಲೆ ಇರಬೇಕು. ಇತ್ತೀಚಿನ ಭಾವಚಿತ್ರ ಇರಬೇಕು.
ವಯೋಮಿತಿ
ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು 19-35 ವಯೋಮಿತಿಯೊಳಗಿನ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತರು ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ : ಎಷ್ಟು ಬೆಳೆ ಹಾನಿಯಾದರೆ ಎಷ್ಟು ವಿಮೆ ಸಿಗಲಿದೆ? ಇಲ್ಲಿದೆ ಮಾಹಿತಿ
ವಿಕಲಚೇತನರಿಗೆ 10 ವರ್ಷ ಗಳ ವಯೋಮಿತಿ ಸಡಿಲಿಕೆ ಇರುತ್ತದೆ.
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ವಿದ್ಯಾರ್ಹತೆ
ಕನಿಷ್ಠ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್.ಎಸ್.ಎಲ್.ಸಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು. ಒಂದು ವರ್ಷದ ನರ್ಸರಿ ಅಥವಾಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಸದರಿಯವರಿಗೆ ಬೋನಸ್ 5 ಅಂಕಗಳನ್ನು ನೀಡಲಾಗುವುದು.
ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ
ಚಿಕ್ಕಬಳ್ಳಾಪುರ ಜಿಲ್ಲೆಯ 21 ಗ್ರಾಮ ಪಂಚಾಯತಿಗಳ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ (ಅರಿವು ಕೇಂದ್ರ) ಗಳಲ್ಲಿ ಖಾಲಿಯಿರುವ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿಯ ಅಧಿಸೂಚನೆಯಲ್ಲಿನ ಅಧಿಸೂಚನೆಯಲ್ಲಿ ಹುದ್ದೆಯ ವಿವರ, ಅರ್ಜಿ ಸಲ್ಲಿಸುವ ವಿಧಾನ, ಶೈಕ್ಷಣಿಕ ಅರ್ಹತೆ, ಮೀಸಲಾತಿ ಮತ್ತು ಸೂಚನೆಗಳ ಬಗ್ಗೆ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಅವಧಿಯಲ್ಲಿ ಜಿಲ್ಲಾ ಪಂಚಾಯತಿಯ ಆಡಳಿತ ಶಾಖೆಯ ದೂರವಾಣಿ ಸಂಖ್ಯೆ 08156277016 ಹಾಗೂ ಆಡಳಿತ ಶಾಖೆ ಅಧೀಕ್ಷಕರು ದೂರವಾಣಿ ಸಂಖ್ಯೆ 8660860275 ರವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೂಡಲೇ ಅರ್ಹ ಫಲಾನುಭವಿಗಳು ಎಲ್ಲಾ ದಾಖಲೆೆೆೆೆೆೆೆಗಳೊಂದಿಗೆ ತಮ್ಮ ಹತ್ತಿರದ ನೆಟ್ ಸೆಂಟರ್ ನಲ್ಲಿ ಅರ್ಜಿ ಸಲ್ಲಿಸಲು ಕೋರಲಾಗಿದೆ.