Anganawadi naukari job apply ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

Written by Ramlinganna

Published on:

Anganawadi naukari job apply :  ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮೈಸೂರು ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾ  ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 58 ಅಂಗನವಾಡಿ ಕಾರ್ಯಕರ್ತೆ ಹಾಗೂ 315 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಗೌರವಧನ ಸೇವೆಯ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್ ಲ್ಲಿ ಅರ್ಜಿ ಸಲ್ಲಿಸಲು

https://karnemakaone.kar.nic.in/abcd/home.aspx

ವೆಬ್ಸೈಟ್ ಮೂಲಕ ಅರ್ಹ ಹೆಣ್ಣು ಮಕ್ಕಳು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 8 ರ ಸಂಜೆ 5.30 ಕನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ದೂರವಾಣಿ ಸಂಖ್ಯೆ 0821 2495432 ಅಥವಾ 2498031 ಗೆ ಸಂಪರ್ಕಿಸಲು ಕೋರಲಾಗಿದೆ.

Anganawadi naukari job apply ಹಾವೇರಿ ಜಿಲ್ಲೆಯಿಂದಲೂ ಅರ್ಜಿ ಆಹ್ವಾನ

ಹಾವೇರಿ ಜಿಲ್ಲೆಯಲ್ಲಿ 61 ಅಂಗನವಾಡಿ ಕಾರ್ಯಕರ್ತೆ ಹಾಗೂ 177 ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್ 17 ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ವಿದ್ಯಾರ್ಹತೆ

ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿ ಮತ್ತ ಸಹಾಯಕಿಯರ ಹುದ್ದೆಗೆ ಎಸ್.ಎಸ್.ಎಲ್.ಸಿ  ಉತ್ತೀರ್ಣರಾಗಿರಬೇಕು. 19 ರಿಂದ 35 ವಯೋಮಾನದೊಳಗಿರಬೇಕು. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಂಪರ್ಕಿಸಲು ಕೋರಲಾಗಿದೆ.

ಇದನ್ನೂ ಓದಿ  ನಿಮ್ಮ ಸರ್ವೆ ನಂಬರಿನಲ್ಲಿ ಇತರ ರೈತರ ಹೆಸರಿದೆಯೇ? ಇದ್ದರೆ ಎಷ್ಟು ಜಮೀನಿದೆ? ಚೆಕ್ ಮಾಡಿ

ಅಂಗನವಾಡಿ ಕಾರ್ಯಕರ್ತೆ ಬ್ಯಾಡಗಿ 3, ಹಾನಗಲ್ 13, ಹಾವೇರಿ-5, ಹಿರೇಕೆರೂರು – 12, ರಾಣೆಬೆನ್ನೂರ-20, ಸವಣೂರು-4, ಶಿಗ್ಗಾವಿ-4 ಹುದ್ದೆಗಗಳಿಗೆ ಹಾಗೂ ಸಹಾಯಕಿಯರ ಬ್ಯಾಡಗಿ 17, ಹಾನಗಲ್ 21, ಹಾವೇರಿ 29, ಹಿರೇಕೇರೂರ 27, ರಾಣೆಬೆನ್ನೂರ 34, ಸವಣೂರು 23 ಹಾಗೂ ಶಿಗ್ಗಾವಿಗೆ 26 ಹುದ್ದಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೊನೆಯ ದಿನಾಂಕದವರೆಗೆ ಕಾಯದೆ ಕೂಡಲೇ ಅರ್ಜಿ ಸಲ್ಲಿಸಲು ಕೋರಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲಾಗುವುದರಿಂದ ಕೊನೆಯಲ್ಲಿ ನೆಟ್ವರ್ಕ್ ಸಮಸ್ಯೆಯಾಗುವ ಸಾಧ್ಯತೆಯಿರುತ್ತದೆ. ಎಲ್ಲಾ ದಾಖಲೆಗಳೊಂದಿಗೆ ಆನ್ಲೈನ್ ಮೂಲಕ ನಿಮ್ಮ ಹತ್ತಿರದ ಗ್ರಾಮ    ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆ ಬೇಕು?

ಅರ್ಜಿ ಸಲ್ಲಿಸಲು ಜನನ ಪ್ರಮಾಣ ಪತ್ರ (ಎಸ್.ಎಸ್.ಎಲ್.ಸಿ ಅಥವಾ ಪಿಯುಸಿ ಅಂಕಪಟ್ಟಿ) ವಾಸಸ್ಥಳ ಪ್ರಮಾಣ ಪತ್ರ ಸಲ್ಲಿಸಬೇಕು. ವಿದ್ಯಾರ್ಹತೆ ಪ್ರಮಾಣ ಪತ್ರ ಸಲ್ಲಿಸಬೇಕು. ವಿಕಲಚೇತನರಿಗೆ 10 ವರ್ಶ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ ಸಲ್ಲಿಸಬೇಕು. ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ ಸಲ್ಲಿಸಬೇಕು. ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ ಸಲ್ಲಿಸಬೇಕು. ಆಧಾರ್ ಕಾರ್ಡ್ ಸಲ್ಲಿಸಬೇಕು. ಇತ್ತೀಚಿನ ಫೋಟೋ ಇರಬೇಕು.

ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?

ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ನಿಮ್ಮ ಜಿಲ್ಲೆ, ತಾಲೂಕು (ಶಿಶು ಅಭಿವೃದ್ಧಿ ಯೋಜನೆ) ಅಧಿಸೂಚನೆ ಸಂಖ್ಯೆ, ಹುದ್ದೆ ಹೆಸರು ಆಯ್ಕೆ ಮಾಡಬೇಕು. ನಂತರ ಅರ್ಜಿ  ಸಲ್ಲಿಸಲು ಬಯಸುವ ಅಂಗನವಾಡಿ ಕೇಂದ್ರ ಆಯ್ಕೆಮಾಡಬೇಕು. ನಂತರ ಆನ್ಲೈನ್ ಅರ್ಜಿ ಓಪನ್ ಆಗುತ್ತದೆ. ಅಲ್ಲಿ ಕೇಳಲಾದ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಿ ಸಲ್ಲಿಸಬೇಕು. ಎಲ್ಲಾ ಮಾಹಿತಿ ಸರಿಯಾಗಿ ಭರ್ತಿ ಮಾಡಿದ ನಂತರ ಅಪ್ಲೋಡ್ ಮಾಡಬೇಕು. ಪೂರ್ಣ ಅರ್ಜಿಯನ್ನು ಭರ್ತಿ ಮಾಡಿ ಅಪ್ಲೋಡ್ ಮಾಡಿದ ನಂತರ ರೆಫರೆಶನ್ಸ್ ಗಾಗಿ ಒಂದು ಪ್ರಿಂಟ್ ತೆಗೆದಿಟ್ಟುಕೊಳ್ಳಬೇಕು.

Leave a Comment