ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Written by Ramlinganna

Published on:

Anganawadi online job apply : ರಾಜ್ಯದ ವಿವಿಧ ಜಿಲ್ಲೆಗಳ ವ್ಯಾಪ್ತಿಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟು ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳು ಖಾಲಿಯಿವೆ ಎಂಬುದರ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ..

ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳ ಭರ್ತಿಗೆ ಆನ್ಲನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ (ಗ್ರಾಮೀಣ) ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಖಾಲಿ ಇರುವ 13 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 56 ಅಂಗನವಾಡಿ ಸಹಾಯಕಿಯರ ಗೌರವದನ ಸೇವೆಯ ಹುದ್ದೆಗಳಿಗೆ ಸೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ಮಾರ್ಚ್ 23 ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ (ಗ್ರಾಮೀಣ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

ಕೆಲವು ದಿನಗಳಿಂದ ವೆಬ್ಸೈಟ್ ನಲ್ಲಿ 2ನೇ ಮತ್ತು 3ನೇ ಹಂತದಲ್ಲಿ ಅರ್ಜಿ ಸ್ವೀಕರಿಸುತ್ತಿಲ್ಲವೆಂದು ಹಾಗೂ ಫೋಟೋ ಮತ್ತು ದಾಖಲಾತಿಗಳು ಅಪ್ಲೋಡ್ ಮಾಡುವಲ್ಲಿ ತಾಂತ್ರಿಕ ಸಮಸ್ಯೆಗಳು ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.

ಅರ್ಹ ಮಹಿಳಾ ಅಭ್ಯರ್ಥಿಗಳು ವೆಬ್ಸೈಟ್ ದಲ್ಲಿ ಆನ್ಲೈನ್ ಮೂಲಕ ಮಾರ್ಚ್ 23 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಈ ಹಿಂದೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಮಾರ್ಚ್ 16 ರಂದು ನಿಗದಿಪಡಿಸಲಾಗಿತ್ತು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ (ಗ್ರಾಮೀಣ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

Anganawadi online job apply ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಚಿಂಚೋಳಿ ಸಮಗ್ರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ವ್ಯಾಪ್ತಿಯಲ್ಲಿ 2025-26 ರಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಭರ್ತಿಗೆ ಸಂಬಂಧಿಸಿದಂತೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ಮಾರ್ಚ್ 23 ರವರೆಗೆ ವಿಸ್ತರಿಸಲಾಗಿದೆ ಎಂದು ಚಿಂಚೋಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

ಆದರೆ ಇತ್ತೀಚಿನ ಕೆಲವು ದಿನಗಳಿದ ವೆಬ್ಸೈಟ್ ನಲ್ಲಿ 2ನೇ ಹಾಗೂ 3ನೇ ಹಂತದಲ್ಲಿ ತಾಂತ್ರಿಕ ಸಮಸ್ಯೆಗಳು ಎದುರಾಗಿದ್ದು, ವಿಶೇಷವಾಗಿ ಫೋಟೋ ಮತ್ತು ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಲು ಅಡಚಣೆ ಉಂಟಾಗುತ್ತಿರುವ ಕುರಿತು ಸಾರ್ವಜನಿಕರಿಂದ ದೂರು  ಬಂದಿರುವ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.

ಅರ್ಹ ಮಹಿಳಾ ಅಭ್ಯರ್ಥಿಗಳು

https://karnemakaone.kar.nic.in/abcd/

ವೆಬ್ಸೈಟ್ ದಲ್ಲಿ ಆನ್ಲೈನ್ ಮೂಲಕ ಮಾರ್ಚ್ 23 ರ ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು. ಈ ಹಿಂದೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ಮಾರ್ಚ್ 16 ರವರೆಗೆ ನಿಗದಿಪಡಿಸಲಾಗಿತ್ತು.

ತುಮಕೂರು ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದ ಖಾಲಿಯಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿ ಸಂಬಂಧ ತಾತ್ಕಾಲಿಕವಾಗಿ ಆಯ್ಕೆಯಾಗಿರುವ ಹುದ್ದೆಗಳ ಭರ್ತಿ ಸಂಬಂಧ ತಾತ್ಕಾಲಿಕವಾಗಿ ಆಯ್ಕೆಯಾಗಿರುವ ಅಭ್ಯರ್ಥಿಗಳ ಕುರಿತು ಆಕ್ಷೇಪಣೆ ಸಲ್ಲಿಸಲು ಮಾರ್ಚ್ 23ರವರೆಗೆ ಕಾಲಾವಕಾಶ ನೀಡಲಾಗಿದೆ.

ಇದನ್ನೂ ಓದಿ ನಿಮ್ಮ ಜಮೀನಿನ ಪೋಡಿ ನಕ್ಷೆ ಮೊಬೈಲ್ ನಲ್ಲಿ ಪಡೆಯುವುದು ಹೇಗೆ ಇಲ್ಲಿದೆ ಮಾಹಿತಿ

ತುರುವೇಕೆರೆ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿದ್ದ 5 ಅಂಗನವಾಡಿ ಕಾರ್ಯಕರ್ತೆ ಹಾಗೂ 75 ಸಹಾಯಕಿಯರ ಹುದ್ದೆ, ಶಿರಾ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿದ್ದ 26 ಅಂಗನವಾಡಿ ಕಾರ್ಯಕರ್ತೆ ಹಾಗೂ 103 ಸಹಾಯಕಿಯರ ಹುದ್ದೆ, ತುಮಕೂರು ಜಿಲ್ಲೆಯ ಕುಣಿಗಲ್ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿದ್ದ 8 ಅಂಗನವಾಡಿ ಕಾರ್ಯಕರ್ತೆ ಹಾಗೂ 68 ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.

ಆಕ್ಷೇಪಣೆ ಯನ್ನು ಆಯಾ ತಾಲೂಕು ಶಿಶು ಅಭಿವೃದ್ಧಿ ಯೋಜನಾ ಕಚೇರಿಗೆ ಮಾರ್ಚ್ 23 ರ ಸಂಜೆ 5.30  ಗಂಟೆಯೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ತುರುವೆಕೇರೆ ತಾಲೂಕು ಶಿಶು ಅಭಿವೃದ್ಧಿ ಯೋಜನಾ ಕಚೇರಿ ದೂರವಾಣಿ ಸಂಖ್ಯೆ 08139 288468 ಗೆ ಸಂಪರ್ಕಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ

Leave a Comment