ಯಾವ ಜಿಲ್ಲೆಯಲ್ಲಿಎಷ್ಟು ಅಂಗನವಾಡಿ ಹುದ್ದೆಗಳು ಖಾಲಿಯಿವೆ?

Written by Ramlinganna

Updated on:

Anganawadi workers post vacant  ರಾಜ್ಯದ  ಎಲ್ಲಾ ಜಿಲ್ಲೆಗಳಿಂದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಖಾಲಿಯಿವೆ? ಇಲ್ಲಿದ ಮಾಹಿತಿ.

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಿಕಯರ ಹುದ್ದೆಗಳಿಗಾಗಿ ಕಾಯುತ್ತಿರುವ ಮಹಿಳೆಯರಿಗಿಲ್ಲಿದೆ ಸಂತಸದ ಸುದ್ದಿ. ಜಿಲ್ಲಾವಾರು ಅರ್ಜಿಗಳನ್ನು ಕರೆಯಲಾಗಿದೆ. ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳು ಖಾಲಿಯಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.

Anganawadi workers post vacant  ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆ ಖಾಲಿಯಿವೆೆ?

ಗದಗ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ 32 ಅಂಗನವಾಡಿ ಕಾರ್ಯಕರ್ತೆ ಹಾಗೂ 1 ಮಿನಿ ಕಾರ್ಯಕರ್ತೆ ಹಾಗೂ 93 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿಯಿವೆ. ಏಪ್ರೀಲ್ 25 ಅರ್ಜಿ ಸಲ್ಲಿಸಲು ಕೊನೆಯ ದಿನ.

ಗದಗ ಜಿಲ್ಲೆಯ ರೋಣ ತಾಲೂಕಿನಲ್ಲಿ 25 ಅಂಗನವಾಡಿ ಕಾರ್ಯಕರ್ತೆ. 45 ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ. ಏಪ್ರೀಲ್ 28 ರೊಳಗೆ ಅರ್ಜಿ ಸಲ್ಲಿಸಿ.

ಹಾವೇರಿ ಜಿಲ್ಲೆಯ ಹಿರೇಕೇರೂರ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಗಳ ಅಂಗನವಾಡಿ ಕೇಂದ್ರಗಳಲ್ಲಿ 15 ಅಂಗನವಾಡಿ ಕಾರ್ಯಕರ್ತೆ ಹಾಗೂ 51 ಸಹಾಯಕಿಯರ ಹುದ್ದೆಗಳು ಖಾಲಿಯಿವೆ. ಅರ್ಜಿ ಸಲ್ಲಿಸಲು ಏಪ್ರೀಲ್ 24 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ 08376 2822543ಗೆ ಸಂಪರ್ಕಿಸಬಹುದು.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಅಂಗನವಾಡಿ ಕಾರ್ಯಕರ್ತೆ-3, ಮಿನಿ ಅಂಗನವಾಡಿ ಕಾರ್ಯಕರ್ತೆ, 2 ಹಾಗೂ 25 ಸಹಾಯಕಿಯರ ಹುದ್ದೆಗಳು ಖಾಲಿಯಿವೆ. ಅರ್ಜಿ ಸಲ್ಲಿಸಲು ಏಪ್ರೀಲ್ 18 ಕೊನೆ ದಿನ. ಹೆಚ್ಚಿನ ಮಾಹಿತಿಗಾಗಿ 08154 255589 ಗೆ ಸಂಪರ್ಕಿಸಬಹುದು.

ಹುಬ್ಬಳ್ಳಿ ಗ್ರಾಮೀಣ ತಾಲೂಕಿನಲ್ಲಿ 9 ಅಂಗನವಾಡಿ ಕಾರ್ಯಕರ್ತೆ, 8 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿಯಿವೆ. ಏಪ್ರೀಲ್ 22 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಬಾಗಲಕೋಟೆ ತಾಲೂಕಿನಲ್ಲಿ 31 ಅಂಗನವಾಡಿ ಕಾರ್ಯಕರ್ತೆ, 81 ಸಹಾಯಕಿಯರ ಹುದ್ದೆಗಳು ಖಾಲಿಯಿವೆ. ಏಪ್ರೀಲ್್ 24 ಅರ್ಜಿ ಸಲ್ಲಿಸಲು ಕೊನೆ ದಿನ. ಹೆಚ್ಚಿನ ಮಾಹಿತಿಗಾಗಿ ಬಾಗಲಕೋಟೆ 08354 295293, ಜಮಖಂಡಿ 08353 220265 ಗೆ ಕರೆ ಮಾಡಬಹುದು.

ಇದನ್ನೂ ಓದಿ : ಪಿಎಂ ಕಿಸಾನ್ 14ನೇ ಕಂತು ಜಮೆಯಾಗಲು ಈ ಮಾಹಿತಿಗಳು ಸರಿಯಿರಬೇಕು : ಮೊಬೈಲ್ ನಲ್ಲೇ ಚೆಕ್ ಮಾಡಿ

ಮೈಸೂರು ಜಿಲ್ಲೆಯಲ್ಲಿ 83 ಅಂಗನವಾಡಿ ಕಾರ್ಯಕರ್ತೆ, 14 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 153 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿಯಿವೆ. ಏಪ್ರೀಲ್ 14 ಅರ್ಜಿ ಸಲ್ಲಿಕೆಗೆ ಕೊನೆಯ ದಿನ.

ಮೈಸೂರು ಗ್ರಾಮಾಂತರ ಪ್ರದೇಶದಲ್ಲಿ 7 ಅಂಗನವಾಡಿ ಕಾರ್ಯಕರ್ತೆ, 1 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 16 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿಯಿವೆ. ಏಪ್ರೀಲ್ 17 ಅರ್ಜಿ ಸಲ್ಲಿಕೆಗೆ ಕೊನೆ ದಿನ.

ಮೈಸೂರು ಜಿಲ್ಲೆಯ ಟಿ. ನರಸಿಪುರ ತಾಲೂಕಿನ ವ್ಯಾಪ್ತಿಯಲ್ಲಿ 6 ಅಂಗನವಾಡಿ ಕಾರ್ಯಕರ್ತೆ, 15 ಅಂಗನವಾಡಿ ಸಹಾಯಕಿಯರ ಹುದ್ದೆಗಳು, ಹೆಚ್ಚಿನ ಮಾಹಿತಿಗೆ 08227 297276 ಗೆ ಕರೆ ಮಾಡಿ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನಲ್ಲಿ ಅಭ್ಯರ್ಥಿಗಳು ಏಪ್ರೀಲ್ 17 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 08221 226168 ಗೆ ಕರೆ ಮಾಡಿ.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ವ್ಯಾಪ್ತಿಯಲ್ಲಿ 7 ಅಂಗನವಾಡಿ ಕಾರ್ಯಕರ್ತೆ, 36 ಸಹಾಯಕಿಯರ ಹುದ್ದೆಗಳು ಖಾಲಿಯಿವೆ. ಏಪ್ರೀಲ್ 6 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ 08133268245 ಗೆ ಸಂಪರ್ಕಿಸಬಹುದು.

ಚಕ್ಕಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ 7, ಸಹಾಯಕಿಯರ 38 ಹುದ್ದೆಗಳು ಖಾಲಿಯಿವೆ. ಏಪ್ರೀಲ್ 18 ರೊಳಗೆ ಅರ್ಜಿ ಸಲ್ಲಿಸಿ.  ಹೆಚ್ಚಿನ ಮಾಹಿತಿಗಾಗಿ 08156271161 ಗೆ ಕರೆ ಮಾಡಿ.

ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ವ್ಯಾಪ್ತಿಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಏಪ್ರೀಲ್ 18 ರೊಳಗೆ ಅರ್ಜಿ ಸಲ್ಲಿಸಿ. ಹೆಚ್ಚಿನ ಮಾಹಿತಿಗೆ 08370 284532 ಗೆ ಕರೆ ಮಾಡಬಹುದು.

ಕೊಡಗು ಜಿಲ್ಲೆಯ ಪೊನ್ನಂಪೇಟೆ ಹಾಗೂ ವಿರಾಜಪೇಟೆ ತಾಲೂಕಿನಲ್ಲಿ 11 ಅಂಗನವಾಡಿ ಕಾರ್ಯಕರ್ತೆ ಹಾಗೂ 22 ಅಂಗನವಾಡಿ ಸಹಾಯಕಿಯರ ಹುದ್ದಗಳಿಗೆ ಅರ್ಜಿ ಆಹ್ವಾನ. ಹೆಚ್ಚಿನ ಮಾಹಿತಿಗೆ 08274 201878 ಗೆ ಕರೆ ಮಾಡಬಹುದು.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನಲ್ಲಿ 9 ಅಂಗನವಾಡಿ ಕಾರ್ಯಕರ್ತೆ, 1 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 46 ಸಹಾಯಕಿಯರ ಹುದ್ದೆಗೆ  ಅರ್ಜಿ ಆಹ್ವಾನ. ಏಪ್ರೀಲ್ 6 ರೊಳಗೆ ಅರ್ಜಿ ಸಲ್ಲಿಸಿ. ಹೆಚ್ಚಿನ ಮಾಹಿತಿಗೆ 08135277578 ಗೆ ಕರೆ ಮಾಡಿ.

ಇದನ್ನೂ ಓದಿ : ನಿಮ್ಮ ಪ್ಯಾನ್ ಕಾರ್ಡ್ ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಆಗಿದೆಯೋ ಇಲ್ಲವೋ? ಮೊಬೈಲ್ ನಲ್ಲೇ ಚೆಕ್ ಮಾಡಿ

ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನಲ್ಲಿ 1 ಮಿನಿ ಅಂಗನವಾಡಿ ಕಾರ್ಯಕರ್ತೆ 14 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಏಪ್ರೀಲ್ 5 ರೊಳಗೆ ಅರ್ಜಿ ಹಾಕಿ.

ಬಾಗಲಕೋಟೆ ತಾಲೂಕಿನಲ್ಲಿ 22 ಅಂಗನವಾಡಿ ಕಾರ್ಯಕರ್ತೆ ಹಾಗೂ 44 ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ. ಏಪ್ರೀಲ್ 24 ಅರ್ಜಿ ಸಲ್ಲಿಕೆಗೆ ಕೊನೆಯ ದಿನ.ಹೆಚ್ಚಿನ ಮಾಹಿತಿಗೆ 08351295080 ಗೆ ಸಂಪರ್ಕಿಸಬಹುದು.

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ವ್ಯಾಪ್ತಿಯಲ್ಲಿ 32 ಅಂಗನವಾಡಿ ಕಾರ್ಯಕರ್ತೆ ಹಾಗೂ 84 ಸಹಾಯಕಿಯರ ಹುದ್ದೆಗೆ ಅರ್ಜಿ ಕರೆಯಲಾಗಿದೆ. ಹೆಚ್ಚಿನ ಮಾಹಿತಿಗೆ 08357295009 ಗೆ ಕರೆ ಮಾಡಬಹುದು.

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನಲ್ಲಿ 7ಅಂಗನವಾಡಿ ಕಾರ್ಯಕರ್ತೆ, 4 ಮಿನಿ ಅಂಗನವಾಡಿ ಕಾರ್ಯಕರ್ತೆ, 12 ಸಹಾಯಕಿಯರ ಹುದ್ದೆಗಳು ಖಾಲಿಯಿವೆ.

ಚಳ್ಳಕೇರಿ ತಾಲೂಕಿನಲ್ಲಿ 42 ಅಂಗನವಾಡಿ ಕಾರ್ಯಕರ್ತೆ, 70 ಸಹಾಯಕಿಯರ ಹುದ್ದೆಗಳು. ಹಿರಿಯೂರು ತಾಲೂಕಿನಲ್ಲಿ 5 ಅಂಗನವಾಡಿ ಕಾರ್ಯಕರ್ತೆ, 33 ಸಹಾಯಕಿಯರ ಹುದ್ದೆಗಳು ಖಾಲಿಯಿವೆ. ಏಪ್ರೀಲ್ 26 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಹೊಸದುರ್ಗ ತಾಲೂಕಿನವರು 08199200018 , ಚಳ್ಳಕೇರೆ ತಾಲೂಕಿನವರು 08195 200042, ಹಿರಿಯೂರು ತಾಲೂಕಿನವರು 08193263512 ಗೆ ಕರೆ ಮಾಡಿ.

Leave a Comment