ಅಂಗನವಾಡಿ ಕಾರ್ಯಕರ್ತೆಯರ ಆಯ್ಕೆ ಪಟ್ಟಿ ಪ್ರಕಟ ನಿಮ್ಮ ಹೆಸರು ಚೆಕ್ ಮಾಡಿ

Written by Ramlinganna

Published on:

Anganawadi selection list announced : ಕಲಬುರಗಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ-10 ಹಾಗೂ ಸಹಾಯಕಿಯರ-20 ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ, ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಕಲಬುರಗಿ ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ಕಲಬುರಗಿ (ಗ್ರಾಮೀಣ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದಾರೆ.

ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಇಚ್ಚಿಸುವವರುಮೇ 19 ರೊಳಗಾಗಿ ಕಚೇರಿ ಸಮಯದಲ್ಲಿ ಮಧ್ಯಾಹ್ನ 1.30 ಗಂಟೆಯೊಳಗಾಗಿ   ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಕಲಬುರಗಿ (ಗ್ರಾಮೀಣ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಆಕ್ಷೇಪಣೆ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.

Anganawadi selection list announced ಚಿತ್ತಾಪುರ ಅಂಗನವಾಡಿ ಸಹಾಯಕಿಯರ ಹುದ್ದೆಯ ತಾತ್ಕಾಲಿಕ ಪಟ್ಟಿ ಪ್ರಕಟ

2024-25ನೇ ಸಾಲಿಗೆ ಚಿತ್ತಾಪೂರ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ 10 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿ, ಕಲಬುರಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಆಯ್ಕೆ ಸಮಿತಿ ಸಭೆಯಲ್ಲಿ 10 ಅಂಗನವಾಡಿ ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಅನುಮೋದನೆ ನೀಡಿ, ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಚಿತ್ತಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ಚಿತ್ತಾಪೂರ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ..

ಸದರಿ ಅಂಗನವಾಡಿ ಸಹಾಯಕಿಯರ ಹುದ್ದೆಗೆ ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕ್ಷೇಪಣೆ ಸಲ್ಲಿಸಲು ಸಾರ್ವಜನಿಕರಿಗೆ ಕಾಲಾವಕಾಶವನ್ನು 2025ರ ಮೇ 19 ರವರೆಗೆ ಕಲ್ಪಿಸಲಾಗಿದೆ. ಆಕ್ಷೇಪಣೆ ಸಲ್ಲಿಸುವವರು ಸಮರ್ಪಕವಾದ ದಾಖಲಾತಿಗಳೊಂದಿಗೆ ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಚಿತ್ತಾಪೂರ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಆಕ್ಷೇಪಣೆ ಸಲ್ಲಿಸಬೇಕು. ಅವಧಿ ಮೀರಿ ಸಲ್ಲಿಸಿದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಆಳಂದ: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳ ತಾತ್ಕಾಲಿಕ ಪಟ್ಟಿ ಪ್ರಕಟ: ಅಕ್ಷೇಪಣೆ ಆಹ್ವಾನ

ಆಳಂದ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ-05 ಮತ್ತು ಸಹಾಯಕಿಯರ-25 ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ,  ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು  ಆಳಂದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು  ಆಳಂದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದಾರೆ.

ಇದನ್ನೂ ಓದಿ : ಯಾವ ಯಾವ ಸರ್ವೆ ನಂಬರಿಗೆ FID ಲಿಂಕ್ ಆಗಿವೆ? ಇಲ್ಲೇ ಚೆಕ್ ಮಾಡಿ

ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಇಚ್ಚಿಸುವವರು 2025ರ ಮೇ 17 ರೊಳಗಾಗಿ ಕಚೇರಿ ಸಮಯದಲ್ಲಿ ಮಧ್ಯಾಹ್ನ 1.30 ಗಂಟೆಯೊಳಗಾಗಿ   ಸಂಬಂಧಪಟ್ಟ ದಾಖಲಾತಿಗಳೊಂದಿಗೆ  ಆಳಂದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಆಕ್ಷೇಪಣೆ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.

ಚಿಂಚೋಳಿ: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಯ ತಾತ್ಕಾಲಿಕ ಪಟ್ಟಿ ಪ್ರಕಟ: ಅಕ್ಷೇಪಣೆ ಆಹ್ವಾನ

ಚಿಂಚೋಳಿ ಶಿಶು ಅಭಿವೃದ್ದಿ ಯೋಜನೆಯಲ್ಲಿ ಖಾಲಿ ಇರುವ 6 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 14 ಸಹಾಯಕಿಯರ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿ, ದಿನಾಂಕ:09-05-2025 ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ 6 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 12 ಸಹಾಯಕಿಯರ ಹುದ್ದೆಗಳಿಗೆ ಮಾತ್ರ ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗಿದೆ ಎಂದು ಚಿಂಚೋಳಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

ಈ  ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳ ಆಯ್ಕೆಪಟ್ಟಿಯನ್ನು ಚಿಂಚೋಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದ್ದು, ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಂಬಂಧಪಟ್ಟ ಸೂಕ್ತ ದಾಖಲಾತಿಗಳೊಂದಿಗೆ ಖುದ್ದಾಗಿ 2025ರ ಮೇ 20 ರೊಳಗಾಗಿ ಚಿಂಚೋಳಿ ತಾಲೂಕಿನ ಚಂದಾಪೂರದ ಪಟೇಲ್ ಕಾಲೋನಿಯಲ್ಲಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಆಕ್ಷೇಪಣೆ ಸಲ್ಲಿಸಬೇಕು. ಅವಧಿ ಮುಗಿದ ಮೇಲೆ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.

ಅಡಕಿಮೋಕ ತಾಂಡ ಮತ್ತು ಮೋಟಿಮೋಕ ತಾಂಡದ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಬಂದ ಅರ್ಜಿಗಳು ಅನರ್ಹವಾದ ಕಾರಣ ಹುದ್ದೆಗಳಿಗೆ ಮರು ಪ್ರಕಟಣೆ ಮಾಡಲಾಗಿದೆ. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಚಿಂಚೋಳಿ ತಾಲೂಕಿನ ಚಂದಾಪೂರ ಪಟೇಲ್ ಕಾಲೋನಿಯಲ್ಲಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಛೇರಿಗೆ ಸಂಪರ್ಕಿಸಲು ಕೋರಲಾಗಿದೆ.

ಜೇವರ್ಗಿ: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಯ ತಾತ್ಕಾಲಿಕ ಪಟ್ಟಿ ಪ್ರಕಟ: ಅಕ್ಷೇಪಣೆ ಆಹ್ವಾನ

ಜೇವರ್ಗಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಖಾಲಿ ಇರುವ 10 ಅಂಗನವಾಡಿ ಕಾರ್ಯಕರ್ತೆ 20 ಅಂಗನವಾಡಿ ಸಹಾಯಕಿಯರ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ ತಾತ್ಕಾಲಿಕವಾಗಿ ಆಯ್ಕೆ ಮಾಡಿ, ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಜೇವರ್ಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ ಎಂದು ಜೇವರ್ಗಿ ಶಿಶು ಅಬಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಸೂಕ್ತ ದಾಖಲೆಗಳೊಂದಿಗೆ 2025ರ ಮೇ 21ರ ಸಂಜೆ 5.30 ಗಂಟೆಯೊಳಗಾಗಿ ಜೇವರ್ಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಆಕ್ಷೇಪಣೆ ಸಲ್ಲಿಸಬೇಕೆಂದು

Leave a Comment