ಅಂಗನವಾಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Written by Ramlinganna

Published on:

Anganawadi teacher jobs :  ಬೆಳಗಾವಿ ಜಿಲ್ಲೆಯಾದ್ಯಂತ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹಾಗಾದರೆ ಯಾರು ಯಾರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು, ಎಲ್ಲಿ ಅರ್ಜಿಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂಬುದರ ಮಾಹಿತಿಯನ್ನು ಇಲ್ಲಿನೀಡಲಾಗಿದೆ.

ಬೆಳಗಾವಿ ಜಿಲ್ಲೆಯಾದ್ಯಂತ 558 ಅಂಗನವಾಡಿಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೊಮ ಇಸಿಸಿಇ / ತತ್ಸಮಾನ ಶಿಕ್ಷಣ ಪಡೆದಿರುವವರು ಅರ್ಜಿ ಸಲ್ಲಿಸಬಹುದು.  ಬೆಳಗಾವಿ ಜಿಲ್ಲೆಗೆ ಬರೋಬರಿ 558 ಅಂಗನವಾಡಿ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿದೆ.

Anganawadi teacher job  ಅರ್ಜಿ ಸಲ್ಲಿಸಲು ಬೇಕಾಗುವ ವಯೋಮಿತಿ

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಯಾವುದೇ ಹುದ್ದೆಗೆ ಅರ್ಜಿ ಹಾಕಲು ಕನಿಷ್ಠ 19 ವರ್ಷ ತುಂಬಿರಬೇಕು. 35 ವರ್ಷ ವಯಸ್ಸು ಮೀರಿರಬಾರದು.
ಇತರೆ ಹಿಂದುಳಿದ ವರ್ಗದವರಿಗೆ 3 ವರ್ಷ, ಎಸ್‌ಸಿ/ ಎಸ್‌ಟಿ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆ ನಿಯಮ ಅನ್ವಯವಾಗಲಿವೆ.

Anganawadi teacher jobs  ಆನ್ಲೈನ್ ಮೂಲಕ ಅರ್ಜಿಸಲ್ಲಿಸಿ

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ

https://karnemakaone.kar.nic.in/abcd/home.aspx

ಲಿಂಕ್ ಮೇಲೆ ಕ್ಲಿಕ್ ಮಾಡಿ. ನಂತರ ನಿಮ್ಮಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ಅಂದರೆ ಬೆಳಗಾವಿ ಜಿಲ್ಲೆಗೆ ಅರ್ಜಿ ಆಹ್ವಾನಿಸಲಾಗಿದ್ದರಿಂದ ಬೆಳಗಾವಿ ಎಂದು ಆಯ್ಕೆ ಮಾಡಿಕೊಳ್ಳಬೇಕು.  ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರದ ಆರ್‌ಡಿ ಸಂಖ್ಯೆ ನೀಡಬೇಕು.

ಇದನ್ನೂ ಓದಿ
ಆಸಕ್ತ ತಾಲ್ಲೂಕಿನಲ್ಲಿ ನಿಮ್ಮ ವರ್ಗಕ್ಕೆ ಹುದ್ದೆ ಇದ್ದರೆ, ಅರ್ಜಿ ಮುಂದುವರೆಸಬಹುದು. ನಂತರ ಅರ್ಜಿ ಸಲ್ಲಿಸಲು ಬಯಸುವ ಅಂಗನವಾಡಿ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬೇಕು. ಅಗತ್ಯ ದಾಖಲೆಗಳನ್ನು ಆಯಾ ಹೆಸರಿನ ಮುಂದೆ ಇರುವ ಆಯ್ಕೆ ಬಟನ್‌ ಕ್ಲಿಕ್‌ ಮಾಡಿ ಸ್ಕ್ಯಾನ್‌ ಮಾಡಿ ಅಪ್‌ಲೋಡ್ ಮಾಡಬೇಕು.

Anganawadi teacher jobs  ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಹಾಕಲು ಬೇಕಾದ ಅಗತ್ಯ ದಾಖಲೆಗಳು

ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ / ಪಿಯುಸಿ ಅಂಕಪಟ್ಟಿ.
ವೈಯಕ್ತಿಕ ಕೆಲವು ವಿವರಗಳು
ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ.
ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ.
ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ.
ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ.
ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ.
ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ.
ವಾಸಸ್ಥಳ ದೃಢೀಕರಣ ಪತ್ರ ಸಲ್ಲಿಸಬೇಕು.

ಏಪ್ರಿಲ್ 25 ರಂದು ಮಿನಿ ಉದ್ಯೋಗ ಮೇಳ

ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ಏಪ್ರಿಲ್ 25ರಂದು ಬೆಳಿಗ್ಗೆ 9 ಗಂಟೆಯಿದ ಮಧ್ಯಾಹ್ನ 1 ಗಂಟೆಯವರೆಗೆ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಹೆಚ್.ಸಿ.ಎಲ್. ದಲ್ಲಿ ಟ್ರೆನಿ ಹುದ್ದೆಗೆ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 20 ವರ್ಷದೊಳಗಿರಬೇಕು. ಚೈತನ್ಯ ಫೈನಾನ್ಸ್ದಲ್ಲಿ ಫೀಲ್ಡ್ ಆಫೀಸರ್ ಬ್ರಾö್ಯಂಚ್ ಮ್ಯಾನೇಜರ್ ಹುದ್ದೆಗೆ ಪಿಯುಸಿ/ ಐಟಿಐ/ ಡಿಪ್ಲೋಮಾ/ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 27 ವರ್ಷದೊಳಗಿರಬೇಕು. ಫೀಲ್ಡ್ ಆಫೀಸರ್ ಹುದ್ದೆಗೆ ಪಿಯುಸಿ/ ಐಟಿಐ/ ಡಿಪ್ಲೋಮಾ, ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.

ಇದನ್ನೂ ಓದಿ Aadharcard ನಂಬರಿನಿಂದ ನಿಮ್ಮ ಇಕೆವೈಸಿ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ

ಕೆ.ಎನ್.ಎನ್.ಡಿ. ಯಲ್ಲಿ ಎಸಿ ಟೆಕ್ನಿಶಿಯನ್ ಹುದ್ದೆಗೆ ಐಟಿಐ/ಡಿಪ್ಲೋಮಾ ಪಾಸಾಗಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು. ಜಿ.ಟಿ.ಟಿ.ಐ. ದಲ್ಲಿ ಟ್ರೆöನಿ ಹುದ್ದೆಗೆ ಎಸ್,ಎಸ್.ಎಲ್.ಸಿ/ ಪಿಯುಸಿ/ ಐಟಿಐ/ ಡಿಪ್ಲೋಮಾ, ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು. ಎಸ್.ಆರ್.ವಿ. ಎಲೆಕ್ಟಾçನಿಕ್ಸ್ ದಲ್ಲಿ ಟೆಕ್ನಿಶಿಯನ್ / ಹೆಲ್ಪರ್ ಹುದ್ದೆಗೆ ಐಟಿಐ/ ಡಿಪ್ಲೋಮಾ ಪಾಸಾಗಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.

ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್ (ಬಯೋಡೆಟಾ) ಭಾವಚಿತ್ರಗಳು ಹಾಗೂ ಆಧಾರ್‌ಕಾಡ್  ದಾಖಲೆದೊಂದಿಗೆ ಮೇಲ್ಕಂಡ ದಿನದಂದು ನಡೆಯುವ ಮಿನಿ ಉದ್ಯೋಗಮೇಳದಲ್ಲ್ಲಿ ಭಾಗವಹಿಸಬೇಕು. ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08472-274846, ಮೊಬೈಲ್ ಸಂಖ್ಯೆ 9620095270 ಗೆ ಸಂಪರ್ಕಿಸಲು ಕೋರಲಾಗಿದೆ.

Leave a Comment