ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

Written by Ramlinganna

Published on:

Anganawadi teachers job notification : ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಾಗ ಅಪೂರ್ಣಗೊಂಡವರು ಮತ್ತೇ ಅರ್ಜಿ ಸಲ್ಲಿಸಲು ಕೋರಲಾಗಿದೆ.

ನಮ್ಮ ಯೂಟೂಬ್ ಚಾನೆಲ್ ಸಬಸ್ಕ್ರೈಬ್ ಮಾಡಿ ಇಂತಹ ಮಾಹಿತಿ ಪಡೆಯಿರಿ

ಹೌದು, ಕಲಬುರಗಿ ಜಿಲ್ಲೆಯ ಆಫಜಲ್ಪುರ, ಆಳಂದ, ಚಿಂಚೋಳಿ, ಚಿತ್ತಾಪುರ, ಕಲಬುರಗಿ ಗ್ರಾಮಾಂತರ, ಕಲಬುರಗಿ ನಗರ, ಜೇವರ್ಗಿ ಸೇಡಂ ಹಾಗೂ ಶಹಾಬಾದ್ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಗ್ರಾಮ ಪಂಚಾಯತಿ, ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ ಒಟ್ಟು 61 ಅಂಗನವಾಡಿ ಕಾರ್ಯಕರ್ತೆ ಹಾಗೂ 238 ಅಂಗನವಾಡಿ ಸಹಾಕಿಯರ ಗೌರವ ಸೇವೆ ಹುದ್ದೆಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ವೆಬ್ ಸೈಟ್ ದಲ್ಲಿ ಒಟ್ಟು 4 ವಿವಿಧ ಹಂತಗಳಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಆದರೆ ಇದರಲ್ಲಿ ಕೆಲವರಿಗೆ 1ನೇ ಹಂತದಲ್ಲಿಯೇ ಅಪ್ಲಿಕೇಶನ್ ಸಕ್ಸೆಸಫುಲಿ ಅಪ್ಲೋಡೆಡ್ ಎಂಬ ಮೆಸೇಜ್ ಅವರ ಮೊಬೈಲಿಗೆ ಸ್ವೀಕೃತವಾಗಿರುವುದರಿಂದ ಅರ್ಜಿಗಳನ್ನು ಪೂರ್ಣಗೊಳಿಸಿರುವುದಿಲ್ಲಎಂದು ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಈ ನಾಲ್ಕು ಹಂತಗಳನ್ನು ಪೂರ್ಣಗೊಳಿಸದೇ ಅಪೂರ್ಣವಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ವೆಬ್ ಸಟ್ ದಲ್ಲಿ ತಮ್ಮ ಅರ್ಜಿಗಳನ್ನು ಪೂರ್ಣಗೊಳಿಸಲು ಇಲಾಖೆಯ ವತಿಯಿಂದಲೇ ಡಿಸೆಂಬರ್ 26 ರಿಂದ ಜನವರಿಗೆ 5 ರವರೆಗೆ ಸಂಜೆ 5.30 ಗಂಟೆಯವರೆಗೆ ಅವಕಾಶ ನೀಡಲಾಗಿದೆ.

ಅಭ್ಯರ್ಥಿಗಳು ಒಂದನೇ ಹಂತದಲ್ಲಿ ಆನ್ಲೈನ್ ತಂತ್ರಾಂಶದಲ್ಲಿ ನಿಗದಿತ ಅರ್ಜಿ ನಮೂನೆಯಲ್ಲಿ ಮಾಹಿತಿ ತುಂಬಬೇಕು. ಎರಡನೇ ಹಂತದಲ್ಲಿತಮ್ಮ ಭಾವಚಿತ್ರ ಸಹಿಯನ್ನು ಅಪ್ಲೋಡ್ ಮಾಡಬೇಕು. ಮೂರನೇ ಹಂತ ತಮ್ಮ ದಾಖಲಾತಿಗಳನ್ನು ಅಪ್ವೋಡ್ ಮಾಡಬೇಕು. ನಾಲ್ಕನೇ ಹಂತದಲ್ಲಿ ತಮ್ಮ ಆಧಾರ್ ಸಂಖ್ಯೆ ನಮೂದಿಸಿ ಇ ಹಸ್ತಾಕ್ಷರದೊಂದಿಗೆ ಅರ್ಜಿಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯಲ್ಲಿ 2342 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 3442 ಸಹಾಯಕಿಯರ ಹುದ್ದೆಗಳಿಗೆ ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುತ್ತದೆ.

ಮೇಲ್ಕಂಡ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಅಂಗನವಾಡಿ ಸಹಾಯಕಿಯರ  ಗೌರವಧನ ಹುದ್ದೆಗಳಿಗೆ ಸಂಬಂಧಿಸಿದಂತೆ ಈ ಹಿಂದೆ ದಿನಾಂಕ 5-7-2024 ರಂದು ಅಧಿಸೂಚನೆ ಹೊರಡಿಸಿ, ದಿನಾಂಕ 7-7-20254 ರಿಂದ 7-802024 ರವರೆಗೆ ಹಾಗೂ 14-8-2024ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ  ವಿಸ್ತರಿಸಲಾಗಿತ್ತು. ಪ್ರಸ್ತುತ ಅರ್ಜಿ ಸಲ್ಲಿಸುವ ಕಾಲಾವಧಿ ಮುಗಿದಿರುತ್ತದೆ.

ಇದನ್ನೂ ಓದಿ : ಉದ್ಯೋಗ ಖಾತ್ರಿ jobcard ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲೇ ಚೆಕ್ ಮಾಡಿ

ಅಪೂರ್ಣವಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮೇಲ್ಕಂಡ ನಿಗದಿಪಡಿಸಿರುವ ದಿನಾಂಕದೊಳಗಾಗಿ ಅರ್ಜಿಗಳನ್ನು ಪೂರ್ಣಗೊಳಿಸದಿದ್ದಲ್ಲಿ ಅರ್ಜಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಲು ಕೋರಲಾಗಿದೆ.

Anganawadi teachers job notification ಚಿಂಚೋಳಿಯಿಂದ ಅರ್ಜಿ ಸಲ್ಲಸಿದವರಿಗೆ ಜ. 5 ರವರೆಗೆ ಕಾಲಾವಕಾಶ

ಚಿಂಚೋಳಿ ಶಿಶು ಅಭಿವೃದ್ಧಿ ಯೋಜನೆಯಡಿ 2024-25ನೇ ಸಾಲಿನಲ್ಲಿ 6 ಅಂಗನವಾಡಿ ಕಾರ್ಯಕರ್ತೆ ಹಾಗೂ 14 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಸಂಬಂಧಿಸಿದಂತೆ ವೆಬ್ಸೈಟ್ ದಲ್ಲಿಅರ್ಜಿ ಸಲ್ಲಿಸಲು ಒಟ್ಟು 4 ವಿವಿಧ ಹಂತಗಳಿದ್ದು, ಇದರಲ್ಲಿ ಕೆಲವರಿಗೆ1ನೇ ಹಂತದಲ್ಲಿಯೇ ಅಪ್ಲಿಕೇಶನ್ ಸಕ್ಸೆಸಫುಲಿ ಅಪ್ಲೋಡೆಡ್ ಎಂಬ ಮೆಸೇಜ್ ಅವರು ಮೊಬೈಲ್ ಗಳಿಗೆ ಸ್ವೀಕೃತವಾಗಿರುವದರಿಂದ ಅರ್ಜಿಗಳನ್ನು ಪೂರ್ಣಗೊಳಿಸಿರುವುದಿಲ್ಲ. ಆದ್ದರಿಂದ ಅಪೂರ್ಣವಾಗಿ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳಿಗೆ ಅರ್ಜಿ  ಪೂರ್ಣಗೊಳಿಸಲು ಜನವರಿ 25 ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಚಿಂಚೋಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳುತಿಳಿಸಿದ್ದಾರೆ.

ಈ ಹಿಂದೆ  ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 14 ರಂದು ಕೊನೆಯ ದಿನವಾಗಿಕತ್ತು. ಒಟ್ಟು 445 ಹುದ್ದೆಗಳಲ್ಲಿ180 ಅರ್ಜಿಗಳು ಪೂರ್ಣಗೊಂಡಿದ್ದು, 265 ಅರ್ಜಿಗಳು ವಿವಿಧ ಕಾರಣಗಳಿಂದ ಅಪೂರ್ಣವಾಗಿದೆ. ಅದೇ ರೀತಿ ಸಹಾಯಕಿಯ ಹುದ್ದೆಗಳಗಿೆ 220 ಅರ್ಜಿಗಳು ಬಂದಿದ್ದು, 107 ಅರ್ಜಿಗಳು ಪೂರ್ಣಗೊಂಡಿದ್ದು, 113 ಅರ್ಜಿಗಳು ಅಪೂರ್ಣಗೊಂಡಿವೆ. ಅಪೂರ್ಣವಾಗಿರುವ ಅರ್ಜಿಗಳನ್ನು ಜನವರಿ 5ರವರೆಗೆ ಕಾಲವಾಕಾಶ ನೀಡಲಾಗಿದೆ.

ಅಪೂರ್ಣವಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಮಾಹಿತಿಯುಳ್ಳ ಪಟ್ಟಿಯನ್ನು ಅಂಗನವಾಡಿ ಕೇಂದ್ರವಾರು ಲಗತ್ತಿಸಲಾಗಿದೆ. ಅಪ್ರೂಣವಾಗಿರುವ ಅರ್ಜಿಗಳನ್ನುಕೊನೆಯ ದಿನಾಂಕದೊಳಗೆಅರ್ಜಿ ಸಲ್ಲಿಸಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ https://karnemakaone.kar.nic.in/abcd ಲಿಂಕ್ ಮೇಲೆ  ಕ್ಲಿಕ್ ಮಾಡಬಹುದು ಹೆಚ್ಚಿನ ಮಾಹಿತಿಗಾಗಿ 08475273308ಗೆ ಸಂಪರ್ಕಿಸಲು ಕೋರಲಾಗಿದೆ.

Leave a Comment