ದೊಡ್ಡಬಳ್ಳಾಪುರ, ಚಿತ್ರದುರ್ಗ, ಕಲಬುರಗಿ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಖಾಲಿಯಿುರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ದೊಡ್ಡಬಳ್ಳಾಪುರ ಜಿಲ್ಲೆಯ ಹೊಸಕೋಟೆ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿಯರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 15 ಅಂಗನವಾಡಿ ಕಾರ್ಯಕರ್ತೆ ಹಾಗೂ 36 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಗೌರವಧನ ಆಧಾರದ ಮೇಲೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ನಿಗದಿ ಪಡಿಸಿದ ವಿದ್ಯಾರ್ಹತೆ ಹೊಂದಿರುವ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಕಚೇರಿ ವೇಳೆಯಲ್ಲಿ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಹೊಸಕೋಟ ಇಲ್ಲಿ ಪಡೆಯಬಹುದು. ಅರ್ಜಿಗಳನ್ನು ಏಪ್ರೀಲ್ 24 ರವರೆಗೆ ಭರ್ತಿ ಮಾಡಿ ಕಚೇರಿಯಲ್ಲಿ ಸಲ್ಲಿಸಲು ಕೋರಲಾಗಿದೆ.
ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗದಿತ ದಿನಾಂಕದೊಳಗೆ ಎಲ್ಲಾ ದಾಖಲಾತಿಗಳೊಂದಿಗೆ ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ಶಿಶು ಅಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಟಿಎಪಿಸಿಎಂಎಸ್ ಆವರಣ, ಹೊಸಕೋಟೆ ಇಲ್ಲಿ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ : ಯಾವ ಜಿಲ್ಲೆಯಲ್ಲಿ ಎಷ್ಟು ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳು ಖಾಲಿಯಿವೆ? ಇಲ್ಲಿದೆ ಮಾಹಿತಿ
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080 27931493 ಹಾಗೂ ಹೊಸಕೋಟೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕು ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿಯಿರುವ 20 ಅಂಗನವಾಡಿ ಕಾರ್ಯಕರ್ತೆ ಮತ್ತು 34 ಸಹಾಯಕಿಯರ ಹುದ್ದೆಗಳಿಗೆ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈಗಾಗಲೇ ಮಾರ್ಚ್ 27 ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಏಪ್ರೀಲ್ 27 ರ ಸಂಜೆ 5.30 ರವರೆಗೆ ಅರ್ಜಿ ಸಲ್ಲಿಕೆಗೆ ಕಾಲಾವಕಾಶ ಕಲ್ಪಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿಯೋಜನಾಧಿಕಾರಿಗಳ ಕಚೇರಿ, ಸಂಬಂಧಿಸಿದ ಗ್ರಾಮ ಪಂಚಾಯತ್ ಕಚೇರಿ, ಶಾಲೆ, ರೈತ ಸಂಪರ್ಕೇ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸ್ಥಳೀಯ ಅಂಗನವಾಡಿ ಕೇಂದ್ರಗಳಲ್ಲಿಯೂ ಪ್ರಕಟಿಸಿರುವ ಪ್ರಕಟಣೆ ನೋಡಬಹುದು ಎಂದು ಮೊಳಕಾಲ್ಮೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿಂಚೋಳಿ ತಾಲೂಕಿನಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕಲಬುರಗಿ ಜಿಲ್ಲಯ ಚಿಂಚೋಳಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಖಾಲಿಯಿರುವ 29 ಅಂಗನವಾಡಿ ಕಾರ್ಯಕತ್ರೆ ಹಾಗೂ 47 ಅಂಗನಮಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಆಪ್ ಲೈನ್ ಮೂಲಕ ಸಲ್ಲಿಸಬೇಕೆಂದು ಚಿಂಚೋಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹ ಮಹಿಳಾ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಚಿಂಚೋಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ ಏಪ್ರೀಲ್ 24 ರೊಳಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಚಿಂಚೋಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಅಥವಾ ದೂರವಾಣಿ ಸಂಖ್ಯೆ 08475 273317 ಗೆ ಸಂಪರ್ಕಿಸಲು ಕೋರಲಾಗಿದೆ.
ಶಹಾಬಾದ್ ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ಕಲಬುರಗಿ ಜಿಲ್ಲೆಯ ಶಹಾಬಾದ್ ತಾಲೂಕಿನಲ್ಲಿ ಖಾಲಿಯಿರುವ 13 ಅಂಗನವಾಡಿ ಕಾರ್ಯಕರ್ತೆ, 40 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಮಹಿಳಆ ಅಭ್ಯರ್ಥಿಗಳಿಂದ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಶಹಾಬಾದ್ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.
ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಏಪ್ರೀಲ್ 27 ರೊಳಗೆ ಸಲ್ಲಿಸಲು ಕೋರಲಾಗಿದೆ. ಹೆಚ್ಚಿ ಮಾಹಿತಿಗಾಗಿ ಶಹಾಬಾದ್ ಶಿಶು ಅಭಿವೃದ್ಧಇ ಯೋಜನಾಧಿಕಾರಿಗಳ ಕತೇರಿ ಹಾಗೂ ಮೊಬೈಲ್ ನಂಬರ್ 9632465520 ಗೆ ಸಂಪರ್ಕಿಸಲು ಕೋರಲಾಗಿದೆ