ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿಯಿರುವ 200ಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಮೈಸೂರು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 9 ಶಿಶು ಅಭಿವೃದ್ಧಿ ಯೋಜನೆಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 83 ಅಂಗನವಾಡಿ ಕಾರ್ಯಕರ್ತೆ, 14 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 153 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಗೌರವ ಸೇವೆಯ ಆಧಾರದ ಮೇಲೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲುವ ಪ್ರಕ್ರಿಯೆ ಮಾರ್ಚ್ 18 ರಿಂದ ಆರಂಭವಾಗಿದೆ. ಏಪ್ರೀಲ್ 14 ರವರೆಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಪಿಯುಸಿ ತೇರ್ಗಡೆ ಹೊಂದಿರಬೇಕು. ಹಾಗೂ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು. ಜೊತೆಗೆ ಆದ್ಯತೆಯಾಗಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಸರ್ಕಾರದ ಅಂಗೀಕೃತ ಸಂಸ್ಥೆಗಳಿಂದ ಅಥವಾ ಡಿಎಸ್ಇಆರ್ಟಿಯಿಂದ ಇಸಿಸಿಇ ಡಿಪ್ಲೋಮಾ ಕೋರ್ಸ್, ಜೆಒಸಿ ಕೋರ್ಸ್, ಎನ್.ಟಿ.ಟಿ ಕೋರ್ಸ್ ಹಾಗೂ ಅಂಗನವಾಡಿ ಚಟುವಟಿಕೆಗೆ ಸಂಬಂಧಿಸಿದಂತೆ ಡಿಪ್ಲೋಮಾ ನ್ಯೂಟ್ರಿಶಿಯನ್, ಹೋಂ ಸೈನ್ಸ್ ಸರ್ಟಿಫಿಕೇಟ್ ಕೋರ್ಸ್, ಒಂದು ವರ್ಷದ ನರ್ಸರಿ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿದವರಿಗೆ ಆದ್ಯತೆ ನೀಡಲಾಗುವುದು.

ಇದನ್ನೂ ಓದಿ ನಿಮ್ಮ ಜಮೀನಿನ ಮೇಲೆ ನಿಮಗೆ ಗೊತ್ತಿಲ್ಲದೆ ಬೆಳೆ ಸಾಲ ಪಡೆಯಲಾಗಿದೆಯೇ? ಇಲ್ಲೇ ಚೆಕ್ ಮಾಡಿ

ಪ್ರಮಾಣ ಪತ್ರ /  ಅಂಕಪಟ್ಟಿಯ ಗರಿಷ್ಠ 625ಕ್ಕೆ ಕನಿಷ್ಠ 219 ಅಂಕಗಳನ್ನು ಹೊಂದಿದಲ್ಲಿ ಅಂತಹ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು.

ಹೆಚ್ಚಿನ ವಿವರಕ್ಕೆ ಸಂಬಂಧಿಸಿದ ಕಾರ್ಯಕರ್ತೆ/ಸಹಾಯಕಿಯರ ಸದಸ್ಯ ಆಯ್ಕೆ ಸಮಿತಿಯ ಯೋಜನಾಧಿಕಾರಿಗಳನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೈಸೂರು ಗ್ರಾಮಾಂತರ ಪ್ರದೇಶದಲ್ಲಿ ಅಂಗನಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಮೈಸೂರು ಅಂಗನವಾಡಿ ಶಿಶು ಅಭಿವೃದ್ಧಿ  ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ 7 ಅಂಗನವಾಡಿ ಕಾರ್ಯಕರ್ತೆ, 1 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 16 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ Anganwadi ಕಾರ್ಯಕರ್ತೆಯರ ಹುದ್ದೆಗೆ ವಿವಿಧ ಜಿಲ್ಲೆಗಳಿಂದ ಅರ್ಜಿ ಆಹ್ವಾನ- ಇಂದೇ ಅರ್ಜಿ ಸಲ್ಲಿಸಿ

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏಪ್ರೀಲ್ 17 ಕಡೆಯ ದಿನಾಂಕವಾಗಿದೆ ಎಂದು ಮೈಸೂರು ಗ್ರಾಮಾಂತರ ಯೋಜನೆಯ ಶಿಶು ಅಭಿವೃದ್ಧಿಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತುಮಕೂರು ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನಾಡಿ ಕೇಂದ್ರಗಳಲ್ಲಿ ಖಾಲಿಯಿರುವ 7 ಅಂಗನವಾಡಿ ಕಾರ್ಯಕರ್ತೆ ಾಗೂ 36 ಸಹಾಯಕಿಯರ ಹುದ್ದೆಗಳನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ.ಯನ್ನು ಏಪ್ರೀಲ್ 6 ರೊಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ, ಸಾಮರ್ಥ್ಯ ಸೌಧ, ತಾಲೂಕು ಪಂಚಾಯತಿ ಆವರಣ, ಚಿಕ್ಕನಾಯಕನಹಳ್ಳಿ ಇವರಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿತಾಗಿ ದೂರವಾಣಿ ಸಂಖ್ಯೆ 08133268245 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹೊಲಿಗೆ ತರಬೇತಿಗೆ ಅರ್ಜಿ ಆಹ್ವಾನ

ಕೋಲಾರ ಜಿಲ್ಲೆಯ ಹಿಂದುಳಿದ ವರ್ಗಗಳ ಯುವ ಜನರಿಗೆ ಅಲ್ಪಾವಧಿ ಕೋರ್ಸ ಗಳ ಮೂಲಕ ಕೌಶಲ್ಯ ತರಬೇತಿ ನೀಡಲು ಅಮೃತ ಮುನ್ನಡೆ ಎಂಬ ಹೊಸ ಯೋಜನೆಯಯಲ್ಲಿ ಅಪೆರೆಲ್ ಟ್ರೇನಿಂಗ್ ಆ್ಯಂಡ್ ಡಿಸೈನ್ ಸೆಂಟರ್ ನಿಂದ ಮೂರು ತಿಂಗಳ ಕಾಲ ಉಚಿತ ತರಬೇತಿಗೆ ಅರ್ಹ ಹಿಂದುಳಿದ ವರ್ಗದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 18 ರಿಂದ 45 ವರ್ಷಗಳ ವಯೋಮಾನದವರಾಗಿರಬೇಕು. ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದವರಿಗೆ ಶೇ. 100 ರಷ್ಟು ಉದ್ಯೋಗವನ್ನು ಒದಗಿಸಲಾಗುವುದು.

ಆಧಾರ್ ಕಾರ್ಡ್, ವಿದ್ಯಾರ್ಹತೆ ದಾಖಲೆ, ಜಾತಿ ಆದಾಯ ಪ್ರಮಾಣ ಪತ್ರ, ನಾಲ್ಕು ಫೋಟೋ ಹೊಂದಿರಬೇಕು. ಹೆಚ್ಚಿನ ಮಾಹಿತಿತಾಗಿ 08152 220222, 9740704590 ಗೆ ಸಂಪರ್ಕಿಸಲು ಕೋರಲಾಗಿದೆ.

Leave a Reply

Your email address will not be published. Required fields are marked *