Anganawadi workers job ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಚಾಮರಾಜನಗರ ಜಿಲ್ಲೆಯಲ್ಲಿ 2024-25 ನೇ ಸಾಲಿನಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳನ್ನು ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ನಮ್ಮ ಯೂಟೂಬ್ ಚಾನೆಲ್ ಸಬಸ್ಕ್ರೈಬ್ ಮಾಡಿ ಇಂತಹ ಮಾಹಿತಿ ಪಡೆಯಿರಿ
ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಅರ್ಹತೆಗಳು, ಇತರೆ ವಿವರಗಳನ್ನು ತಿಳಿದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ. ಈ ಹುದ್ದೆಗಳಿಗೆ ಅರ್ಜಿ ಹಾಕಿದವರಿಗೆ ಯಾವುದೇ ಪರೀಕ್ಷೆ ಇರುವುದಿಲ್ಲ. ಬದಲಾಗಿ ವಿದ್ಯಾರ್ಹತೆ ಅಂಕಗಳು, ಅಂಗನವಾಡಿ ಹತ್ತಿರದ ಗ್ರಾಮ, ಸಂದರ್ಶನದಲ್ಲಿ ತೋರಿದ ಕಾರ್ಯಕ್ಷಮತೆ, ಮೀಸಲಾತಿ ಆಧಾರದಲ್ಲಿ ಆಯ್ಕೆ ಮಾಡಲಾಗುತ್ತದೆ.
2024-25 ನೇ ಸಾಲಿನಲ್ಲಿ ಚಾಮರಾಜನಗರ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯಡಿ 11 ಅಂಗನವಾಡಿ ಕಾರ್ಯಕರ್ತೆ, 23 ಸಹಾಯಕಿಯರ ಹುದ್ದೆ, ಗುಂಡ್ಲುಪೇಟೆ ತಾಲೂಕಿನಲ್ಲಿ 18 ಅಂಗನವಾಡಿ ಕಾರ್ಯಕರ್ತೆ, 45 ಸಹಾಯಕಿಯರ ಹುದ್ದೆ, ಕೊಳ್ಳೇಗಾಲ ತಾಲೂಕಿನಲ್ಲಿ 14 ಅಂಗನವಾಡಿ ಕಾರ್ಯಕರ್ತೆ, 23 ಸಹಾಯಕಿಯರ ಹುದ್ದೆ, ಸಂತೇಮರಹಳ್ಳಿಯಲ್ಲಿ 8 ಅಂಗನವಾಡಿ ಕಾರ್ಯಕರ್ತೆ, 19 ಸಹಾಯಕಿಯರ ಹುದ್ದೆ, ಹನೂರು ತಾಲೂಕಿನಲ್ಲಿ 22 ಅಂಗನವಾಡಿ ಕಾರ್ಯಕರ್ತೆ, 24 ಸಹಾಯಕಿಯರ ಹುದ್ದೆ ಹಾಗೂ ಯಳಂದೂರು ತಾಲೂಕಿನಲ್ಲಿ 4 ಅಂಗನವಾಡಿ ಕಾರ್ಯಕರ್ತೆ, 8 ಸಹಾಯಕಿಯರ ಹುದ್ದೆ ಸೇರಿದಂತೆ ಒಟ್ಟು 219 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.
Anganawadi workers job ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
ಆಸಕ್ತ ಮಹಿಳೆಯರು ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಫೆಬ್ರವರಿ 7 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ?
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ ಕೆಳಗಿನ
karnemakaone.kar.nic.in/abcd/home.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಸಬ್ಮಿಟ್ ಅಪ್ಲಿಕೇಶನ್ ಫಾರ್ ದ ಪೋಸ್ಟ್ ಆಫ್ ಅಂಗನವಾಡಿ ವರ್ಕರ್ಸ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಜಿಲ್ಲೆ, ಚಾಮರಾಜನಗರ ಆಯ್ಕೆ ಮಾಡಬೇಕು. ನಂತರ ಪ್ರಾಜೆಕ್ಟ್ ಆಯ್ಕೆ ಮಾಡಿ ಯಲ್ಲಿ ನಿಮ್ಮ ತಾಲೂಕು ಆಯ್ಕೆಮಾಡಿಕೊಳ್ಳಬೇಕು. ನಂತರ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು. ಇದಾದ ನಂತರ ನಿಮ್ಮ ಜಾತಿ ಆಯ್ಕೆ ಮಾಡಿಕೊಳ್ಳಬೇಕು.
ಒಂದು ವೇಳೆ ನೀವು ಪರಿಶಿಷ್ಟ ಜಾತಿಯವರಾಗಿದ್ದರೆ ಜಾತಿ ಆಯ್ಕೆ ಮಾಡಿಕೊಳ್ಳಬೇಕು. ನಂತರ ಆರ್.ಡಿ. ಸಂಖ್ಯೆ ನಮೂದಿಸಬೇಕು. ಇದಾದ ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಅಲ್ಲಿಕೇಳಲಾದ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆಗಳು ಬೇಕು?
ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ ಎಸ್‌ಎಸ್‌ಎಲ್‌ಸಿ / ಪಿಯುಸಿ ಅಂಕಪಟ್ಟಿ ಸಲ್ಲಿಸಬೇಕು. ವಿದ್ಯಾರ್ಹತೆ ಬಗ್ಗೆ ಪ್ರಮಾಣ ಪತ್ರ, ವಾಸಸ್ಥಳ ದೃಢೀಕರಣ ಪತ್ರ, . ಮೀಸಲಾತಿ ಮತ್ತು ಜಾತಿ ಪ್ರಮಾಣ ಪತ್ರ ಹೊಂದಿರಬೇಕು.ವಿಕಲಚೇತನರಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.. ವಿಧವೆಯಾಗಿದ್ದಲ್ಲಿ ಪತಿಯ ಮರಣ ಪ್ರಮಾಣ ಪತ್ರ ಸಲ್ಲಿಸಬೇಕು. ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯಾಗಿದ್ದಲ್ಲಿ ಉಪವಿಭಾಗಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರ ಸಲ್ಲಿಸಬೇಕು. . ಯೋಜನಾ ನಿರಾಶ್ರಿತರಾಗಿದ್ದಲ್ಲಿ ಪ್ರಮಾಣ ಪತ್ರ ಸಲ್ಲಿಸಬೇಕು. . ವಿಚ್ಛೇದಿತರಾಗಿದ್ದಲ್ಲಿ ಪ್ರಮಾಣ ಪತ್ರ ಸಲ್ಲಿಸಬೇಕು.
ಶೈಕ್ಷಣಿಕ ವಿದ್ಯಾರ್ಹತೆ
ಅಂಗನವಾಡಿ ಕಾರ್ಯಕರ್ತೆ: 12ನೇ ತರಗತಿ / ಡಿಪ್ಲೊಮ ಇಸಿಸಿಇ / ತತ್ಸಮಾನ ಶಿಕ್ಷಣ ಪಾಸಾಗಿರಬೇಕು.
ಅಂಗನವಾಡಿ ಸಹಾಯಕಿ: 10ನೇ ತರಗತಿ ಪಾಸಾಗಿರಬೇಕು.
ವಯೋಮಿತಿ
ಅರ್ಜಿ ಸಲ್ಲಿಸಲು ಕನಿಷ್ಠ 19 ವರ್ಷ ಆಗಿರಬೇಕು. 35 ವರ್ಷ ವಯಸ್ಸು ಮೀರಿರಬಾರದು.
ಇದನ್ನೂ ಓದಿ ನಿಮ್ಮ ಜಮೀನಿನ ಸರ್ವೆ ಸ್ಕೆಚ್ ಮೊಬೈಲ್ ನಲ್ಲಿ ಹೀಗೆ ಪಡೆಯಿರಿ
ಇತರೆ ಹಿಂದುಳಿದ ವರ್ಗದವರಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ ವರ್ಗಾವಾರು ವಯಸ್ಸಿನ ಸಡಿಲಿಕೆ ಇರಲಿದೆ.
ಮೇಲೆ ತಿಳಿಸಿದ ಎಲ್ಲಾ ದಾಖಲೆಗಳೊಂದಿಗೆ ಕೊನೆಯ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.