ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Written by Ramlinganna

Published on:

Anganawadi workers job here : ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಬೆಳಗಾವಿ ಜಿಲ್ಲೆಯ ಮೂಡಲಗಿ,ಕೋಲಾರ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅರಭಾವಿ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 9 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 48 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಹಾಗೂ ಲಿಂಗತ್ವ, ಅಲ್ಪಸಂಖ್ಯಾತ ಮಹಿಳೆಯರಿಂದ ಆಫನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾ ಕಚೇರಿಯಿಂದ ಅರ್ಜಿ ನಮೂನೆ ಪಡೆದು ಜೂನ್ 16 ರ ಸಂಜೆ 5.30 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬಹುದು. ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗದಿತ ದಿನಾಂಕ ಮತ್ತು ಸಮಯದೊಳಗೆ ಎಲ್ಲಾ ದಾಖಲಾತಿಗಳನ್ನೊಳಗೊಂಡ ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಅರಭಾವಿ ಮೂಡಲಗಿಯ ಕಚೇರಿಗೆ ಖುದ್ದಾಗಿ ಅಥವಾ ಅಂತಿಮ ದಿನಾಂಕ ಮತ್ತು ಸಮಯದೊಳಗೆ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾ ಕಚೇರಿಗೆ ತಲುಪುವಂತೆ ನೋಂದಾಯಿತ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಅರಭಾವಿ, ಕಾರ್ಯಾಲಯ ಮೂಡಲಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದೂರವಾಣಿ ಸಂಖ್ಯೆ 08334 200367 ಗೆ ಸಂಪರ್ಕಿಸಬಹುದು.

Anganawadi workers job here ಕೋಲಾರ ಜಿಲ್ಲೆಯಲ್ಲಿ ಅಂಗನವಾಡಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಕೋಲಾರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 42 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 194 ಸಹಾಯಕಿಯರ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಂದ ಆಫ್ಲೈನ್ ಮೂಲಕ ಮೇ 25 ರಿಂದ ಜೂನ್ 30 ರವರೆಗೆ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ ನಿಮ್ಮ ಜಮೀನನ ಖಾತಾ ನಿಮ್ಮ ಬಳಿಯಿರುವ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ

ವಿವರಗಳಿಗೆ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ವೇಳೆ ಸಂಪರ್ಕಿಸಬಹುದು ಎಂದು ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರೋತ್ಸಾಹ ಧನ ವಿತರಣೆಗೆ ಅರ್ಜಿ ಆಹ್ವಾನ

2026-27ನೇ ಸಾಲಿನಲ್ಲಿ ಉತ್ತೀರ್ಣರಾದ, ಎಸ್ಎಸ್ಎಲ್ಸಿ, ಪಿಯುಸಿ, ಬಿಇ, ಎಂಬಿಬಿಎಸ್, ಬಿಡಿಎಸ್, ಬಿಎಸ್ಸಿ ಪದವಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ  ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಜೂನ್ 6 ರವರೆಗೆ ಅರ್ಜಿಪಡೆದು ಅಗತ್ಯ ದಾಖಲೆಗಳೊಂದಿಗೆ ಜೂನ್ 9 ರ ಸಂಜೆ 4 ಗಂಟೆಯೊಳಗೆ ಪುರಸಭೆಗೆ ಸಲ್ಲಿಸಬಹುದು.

ಅಪೂರ್ಣವಾದ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಹಾಗೂ ಈಗಾಗಲೇ ಸವಲತ್ತು ಪಡೆದಿರುವವರು ಪುನಃ ಅರ್ಜಿ ಸಲ್ಲಿಸುವಂತಿಲ್ಲ. ಪರಿಶಿಷ್ಟ ಜಾತಿಗೆ ಸೇರಿದ ಎಸ್ಎಸ್ಎಲ್ಸಿ, ಪಿಯುಸಿ, ಮತ್ತು ಬಿಇ, ಎಂಬಿಬಿಎಸ್, ಬಿಡಿಎಸ್, ಬಿಎಸ್ಸಿ,ಅಗ್ಲಿಕಲ್ಚರ್, ಹಾರ್ಟಿಕಲ್ಚರ್ ಪದವಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲಾಗುವುದು.

ಪರಿಶಿಷ್ಟ ವರ್ಗಕ್ಕೆ ಸೇರಿದ ಎಸ್ಎಸ್ಎಲ್ಸಿ ಪಿಯುಸಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಹಾಗೂ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಕ್ರೀಡೆಯಲ್ಲಿ ಭಾಗವಹಿಸಿ ಜಯಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗುವುದು.

ಕಾನೂನು ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ

ಕಲಬುರಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯಾಲಯದಲ್ಲಿ ಗೌರವಧನ ಆಧಾರದ ಮೇಲೆ ಓರ್ವ ಕಾನೂನು ಸಲಹೆಗಾರರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿ ತಿಳಿಸಿದ್ದಾರೆ.

ಕಾನೂನು ಸಲಹೆಗಾರರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ 80 ಸಾವಿರ ರೂಪಾಯಿ ಮಾಸಿಕ ಗೌರವಧನ ನೀಡಲಾಗುವುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಲ್ಎಲ್ಬಿ ಕಾನೂನು ಪದವಿಧರನಾಗಿರಬೇಕು. ವಕೀಲವೃತ್ತಿಯಲ್ಲಿ ಸಿವಿಲ್ ಪ್ರಕರಣಗಳಲ್ಲಿ ಅಭ್ಯಾಸ ಮಾಡಿದ 5 ವರ್ಷದ ಅನುಭವದೊಂದಿಗೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ ಅಥವಾ ಬಾರ್ ಕೌನ್ಸಿಲ್ ಆಫ್ ಕರ್ನಾಟಕನಲ್ಲಿ ಎನರೋಲಮೆಂಟ್ ಮಾಡಿಸಿರಬೇಕು. ಕಲಬುರಗಿಯಲ್ಲಿ ವಕೀಲ್ ವೃತ್ತಿಯ ಕಚೇರಿ ಹೊಂದಿರಬೇಕು. ಮೇ 25 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮಂಡಳಿಯ ವೆಬ್ಸೈಟ್ www.hkrdb.kar.nic.in

ವೀಕ್ಷಿಸಬಹುದು.

Leave a Comment