Anganawadi workers job notification ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಗದಗ ಜಿಲ್ಲೆಯಲ್ಲಿ ಶಿಶು ಅಭಿವೃದ್ಧಿ ಯೋಜನೆಯಡಿ ಖಾಲಿಯಿರುವ 5 ಅಂಗನವಾಡಿ ಕಾರ್ಯಕರ್ತೆ ಹಾಗೂ 25 ಅಂಗನವಾಡಿ ಸಹಾಯಕಿಯರು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Anganawadi workers job notification ಅಂಗನವಾಡಿ ಹುದ್ದೆಗೆ ಅರ್ಜಿ ಎಲ್ಲಿ ಸಲ್ಲಿಸಬೇಕು?
ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದೆ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಳೇ ಕಲಕೇರಿ ರಸ್ತೆ, ಅರಣ್ಯ ಇಲಾಖೆ ಕಚೇರಿ ಪಕ್ಕದಲ್ಲಿರುವ ತಾಲೂಕು ಬಾಲಭವನ ಕಟ್ಟಡದ ಮುಂಡರಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಾರ್ಯಾಲಯ ಸಂಪರ್ಕಿಸಬಹುದು.
ಜೂನ್ 7 ರಂದು ನೇರ ಸಂದರ್ಶನ
ಹಾಸನ ಜಿಲ್ಲೆಯ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಜೂನ್ 7 ರಂದು ಸಮಯ ಬೆಳಗ್ಗೆ 9.30 ರಿಂದ 1.30 ರವರೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ.
ಹಾಸನ ಜಿಲ್ಲಾ ವ್ಯಾಪ್ತಿಯ ಹೆಸರಾದ ಕಂಪನಿ ಎ.ಹೆಚ್.ಪಿ ಅಪರೇಲ್ಸ್ ಪ್ರೈವೆಟ್ ಲಿಮಿಟೆಡ್ ಹಾಸನ, ಕಂಪನಿಯಲ್ಲಿ ಖಾಲಿಯಿರುವ ಆಪರೇಟರ್ (ವೇತನ 11300 ರಿಂದ 113500), ಎಲೆಕ್ಟ್ರಿಶಿಯನ್ (ವೇತನ 13000-15000) , ಬಾಯ್ಲರ್ ಹೆಲ್ಪರ್ (ವೇತನ 13000), ಹಾಗೂ ಹೆಲ್ಪರ್ (ವೇತನ 11250 – 15000) ವಿವಿಧ ಹುದ್ದೆಗಳಿಗೆ ನೇರ ಸಂದರ್ಶದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಮತ್ತ ಬಯೋಡಾಟಾ ಪ್ರತಿಗಳೊಂದಿಗೆ ಕಚೇರಿಗೆ ಹಾಜರಾಗಿ ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಸನ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08172 296374, 9901230339, 8105923266, 8722606874ಅನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು. ಹಾಗೂ ಎ.ಹೆಚ್. ಪಿ ಆಪರೇಲ್ಸ್ (ಶಾಹಿ ಎಕ್ಸಪೋರ್ಟ್) ಪ್ರೈವೆಟ್ ಲಿಮಿಟೆಡ್ ಹೊಳೆನರಸೀಪುರ ರಸ್ತೆ, ನಂದಗೋಕುಲ ಕನ್ವೆಶನ್ ಹಾಲ್ ಹತ್ತಿರ ಸಂದರ್ಶನ ನಡೆಯುತ್ತದೆ ಎಂದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಡಪತ್ರಿ ವಿತರಣೆಗೆ ಅರ್ಜಿ ಆಹ್ವಾನ
ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ತಾಡಪತ್ರಿ ಹಂಚಲು ಅರ್ಜಿ ಆಹ್ವಾನಿಸಲಾಗಿದೆ.
ಸ್ಥಳೀಯ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ರಾಶಿ ಮಾಡುವಾಗ ಉಪಯೋಗಿಸಲು ತಾಡಪತ್ರಿಗಳು ಲಭ್ಯವಿದೆ. ಸಾಮಾನ್ಯ ರೈತರು ಎಫ್ಐಡಿ ಸಂಖ್ಯೆ, ಆಧಾರ್ ಕಾರ್ಡ್, ಪಹಣಿ ಹಾಗೂ ಭಾವಚಿತ್ರ ಲಗತ್ತಿಸಿ ಅರ್ಜಿ ಸಲ್ಲಿಸಬೇಕು ಎಂದು ಕೃಷಿ ಅಧಿಕಾರಿ ಟಿ.ಎ. ಸೋಲಾಪುರ ತಿಳಿಸಿದ್ದಾರೆ.
ಇದನ್ನೂ ಓದಿ : ಪಿಎಂ ಕಿಸಾನ್ ಹಣ ಜಮೆಯಾಗಲು ಇಕೆವೈಸಿ ಕಡ್ಡಾಯ- ಇಕೆವೈಸಿ ಆಗಿದೆಯೇ? ಮೊಬೈಲ್ ನಲ್ಲೇ ಚೆಕ್ ಮಾಡಿ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರು ಅರ್ಜಿಯೊಂದಿಗೆ ಜಾತಿ ಪ್ರಮಾಣ ಪತ್ರದ ಝರಾಕ್ಸ್ ಪ್ರತಿ ಲಗತ್ತಿಸಿ ಅರ್ಜಿ ಸಲ್ಲಿಸಬೇಕು. ಕಳೆದ ಮೂರು ವರ್ಷಗಳ ಒಳಗೆ ತಾಡಪತ್ರಿ ಪಡೆದ ರೈತರು ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಜೂನ್ 20 ರ ಒಳಗಡೆ ಸಂಪರ್ಕಕ್ಕೆ ಅಱ್ಜಿ ಸಲ್ಲಿಸಲು ತಿಳಿಸಲಾಗಿದೆ.
ಗ್ರಾಪಂಯವರು ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಮೀನುಗಾರಿಕೆ ಇಲಾಖೆಯಿಂದ ಅರ್ಹ ರೈತರಿಂದ ಅರ್ಜಿ ಆಹ್ವಾನ
ಮಂಡ್ಯ ಜಿಲ್ಲೆಯಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ 2023-2024ನೇ ಸಾಲಿನ ರಾಜ್ಯವಲಯ ಯೋಜನೆಗಳಡಿ ಸಹಾಯ ಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹರಿಗೆ ಜಲಾಶಯ, ನದಿ ಭಾಗದ, ಕೆರೆಗಳ ವ್ಯಾಪ್ತಿಯ ವೃತ್ತಿಪರ ಮೀನುಗಾರಿಕೆಗೆ ಮೀನು ಹಿಡಿಯುವ ಬಲೆ ಅಥವಾ ಫೈಬರ್ ಹರಿಗೋಲು ಖರೀದಿಗೆ ಸಹಾಯಧನ ನೀಡಲಾಗುವುದು.
ಮೀನುಮರಿ ಖರೀದಿಸಲು ನೆರವು ಯೋಜನೆಯಡಿ ಕೆರೆ, ಜಲಾಶಯಗಳ ಅಂಚಿನ ಕೊಳಗಳಲ್ಲಿ ಮೀನುಮರಿ ಪಾಲನೆಗೆ ನೆರವು , ಕೆರೆಯನ್ನು ಗುತ್ತಿಗೆಗೆ ಪಡೆದು ಮೀನುಗಾರಿಕೆಗೆ ಸಹಾಯಧನ ನೀಡಲಾಗುವುದು.
ಅರ್ಹ ಫಲಾನುಭವಿಗಳು ಆನ್ಲೈನ್ ಮೂಲಕ ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸಬಹುದು. ಆಯಾ ತಾಲೂಕಿನ ಮೀನುಗಾರಿಕೆ ಇಲಾಖೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.