ವಿವಿಧ ಜಿಲ್ಲೆಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಆಫ್ಲೈನ್ ಹಾಗೂ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಯಲಹಂಕ, ಬೆಂಗಳೂರು ಉತ್ತರ ತಾಲೂಕು ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ 98 ಅಂಗನವಾಡಿ ಕಾರ್ಯಕರ್ತೆ ಹಾಗೂ 204 ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಆಗಸ್ಟ್ 5 ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದು. ಅಭ್ಯರ್ಥಿಗಳ ಆಯ್ಕೆ ಮಾಡಲು ಸರ್ಕಾರದ ಮಾರ್ಗಸೂಚಿ ಮತ್ತು ಆಯ್ಕೆಯ ಮಾನದಂಡಗಳು ಅನ್ವಯಿಸುತ್ತದೆ. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ಅರ್ಜಿ ಸಲ್ಲಿಸಲು ಇನ್ನೂ ಕೇವಲ ನಾಲ್ಕು ದಿನ ಉಳಿದಿದ್ದರಿಂದ ತಡಮಾಡದೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ವಿದ್ಯಾರ್ಹತೆ
ಕಾರ್ಯಕರ್ತೆ ಹುದ್ದೆಗೆ ಕನಿಷ್ಟ ಪಿಯುಸಿ ತೇರ್ಗಡೆ ಹೊಂದಿರಬೇಕು ಮತ್ತು ಎಸ್.ಎಸ್.ಎಲ್.ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
ಸಹಾಯಕಿಯ ಹುದ್ದೆಗೆ ಕನಿಷ್ಟ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ತರಬೇತಿಯಲ್ಲಿ ಉತ್ತೀರ್ಣರಾಗಿರಬೇಕು.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು
ಅರ್ಜಿ ನಮೂನೆಯನ್ನು (ತಾಲೂಕಿನ ವ್ಯಾಪ್ತಿಯಲ್ಲಿರುವ ಕಚೇರಿಯಲ್ಲಿ ಪಡೆಯುವುದು), ಇತ್ತೀಚಿನ ಭಾವಚಿತ್ರ ಇರಬೇಕು. ವಾಸಸ್ಥಳ ದೃಢೀಕರಣ ಪತ್ರ ಸಲ್ಲಿಸಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು. ಆಧಾರ್ ಕಾರ್ಡ್ ಸಲ್ಲಿಸಬೇಕಾಗುತ್ತದೆ. ಅರ್ಜಿಯಲ್ಲಿ ಅಭ್ಯರ್ಥಿಯ ಮೊಬೈಲ್ ನಂಬರ್ ನಮೂದಿಸಬೇಕು. ಅರ್ಜಿಯಲ್ಲಿ ತಮ್ಮ ಅಂಕಪಟ್ಟಿ ಸೇರಿದಂತೆ ಇನ್ನಿತರ ದಾಖಲೆಗಳನ್ನು ಲಗತ್ತಿಸುವುದು ಕಡ್ಡಾಯವಾಗಿರುತ್ತದೆ.
ಅರ್ಜಿ ಹಾಗೂ ಹುದ್ದೆಗಳ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಿನಿ ವಿಧಾನಸೌಧ,(ನೆಲಮಹಡಿ) ಯಲಹಂಕ, ಬೆಂಗಳೂರು ಉತ್ತರ ತಾಲೂಕು, ಬೆಂಗಳೂರು 560064, ದೂರವಾಣಿ ಸಂಖ್ಯೆ080 28462513 ಇಲ್ಲಿ ಸಂಪರ್ಕಿಸಲು ಕೋರಲಾಗಿದೆ.
ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಬಿಜಾಪುರ ಜಿಲ್ಲೆಯ ಬಸವನಬಾಗೇವಾಡಿ, ಕೋಲ್ಹಾರ, ನಿಡಗುಂದಿ ತಾಲೂಕಿನಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ : Gruha jyothi status ಗೃಹ ಜ್ಯೋತಿ ಸ್ಟೇಟಸ್ ಮೊಬೈಲ್ ನಲ್ಲೇ ಚೆಕ್ ಮಾಡಿ
ಬಸವನಬಾಗೇವಾಡಿ, ಕೊಲ್ಹಾರ, ನಿಡಗುಂದಿ ತಾಲೂಕಿನಲ್ಲಿ ಖಾಲಿಯಿರುವ 44 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 80 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆಫ್ಲೈನ್ ಮೂಲಕ ಭರ್ತಿ ಮಾಡಲು ಜುಲೈ 26 ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದ ನಿರ್ದೇಶನದಂತೆ ಜಿಲ್ಲಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ನೇಮಕಾತಿ ಆಯ್ಕೆ ಸಮಿತಿ ಅಧ್ಯಕ್ಷರ ತೀರ್ಮಾನದಂತೆ ಪಾರದರ್ಶಕತೆಯಿಂದ ಗೌರವಧನದ ಆಧಾರದ ಮೇಲೆ ಈ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲು ನಿರ್ಧಾರ ಮಾಡಲಾಗಿದೆ.
ಜುಲೈ 26 ರಂದು ಹೊರಡಿಸಿದ ಅಧಿಸೂಚನೆ ಹಿಂಪಡೆಯಲಾಗಿದೆ. ಈಗಾಗಲೇ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆನ್ಲನ್ ಮೂಲಕ ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು. ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅರ್ಜಿಗಳ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯದಿಂದ ಕಚೇರಿ ಸಮಯದಲ್ಲಿ ಹಿಂಪಡೆದುಕೊಳ್ಳಬೇಕೆಂದು ಸಿಡಿಪಿಒ ನಿರ್ಮಲಾ ಸುರಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆ ಬೇಕು? ಅರ್ಜಿ ಎಲ್ಲಿ ಸಲ್ಲಿಸಬೇಕೆಂಬುದರ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಬಸವನಬಾಗೇವಾಡಿ, ಕೊಲ್ಹಾರ ನಿಡಗುಂದಿ ತಾಲೂಕಿನಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯದಲ್ಲಿ ಸಂಪರ್ಕಿಸಬಹುದು.
ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಹಾಗಾಗಿ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅರ್ಜಿಗಳನ್ನು ಹಿಂಪಡೆದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ.
Good job