ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

Written by Ramlinganna

Published on:

Anganawadi workers online job : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಇ ಇಲಾಖೆಯಿಂದ 2022-23 ಮತ್ತು 2023-24ನೇ ಸಾಲಿಗೆ ಜಿಲ್ಲೆಯ ಸಿರವಾರ ತಾಲೂಕಿನ ಅಂಗನವಾಡಿ ಕೇಂದ್ರ ಸಂಖ್ಯೆ 12 ಹಾಗೂ ಅತ್ತನೂರು ಅಂಗನವಾಡಿ ಕೇಂದ್ರ ಸಂಖ್ಯೆ 5 ರಲ್ಲಿ ಅಂಗನವಾಡಿ ಕಂ. ಕೃಷ್ ಕೇಂದ್ರಗಳ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಇದೇ ಮಾರ್ಚ್ 30 ರೊಳಗಾಗಿ ಅರ್ಜಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಿರವಾರದಲ್ಲಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸಿರವಾರ ಇವರನ್ನು ಕಚೇರಿ ವೇಳೆಯಲ್ಲಿ ಭೇಟಿ ನೀಡಬಹುದಾಗಿದೆ. ಅಥವಾ ಮೊಬೈಲ್ ನಂಬರ್ 7619281523 ಗೆ ಸಂಪರ್ಕಿಸಲು ಕೋರಲಾಗಿದೆ.

Anganawadi workers online job ಮುತ್ತಗಾ ಕೇಂದ್ರದ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ

ಶಹಾಬಾದ್ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ 12 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 39 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ದಿನಾಕ 18-02-2026 ರಂದು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು.

ಇದರಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಾಗಿ ಪ್ರಕಟಿಸಲಾದ ಪಟ್ಟಿಯ ಕ್ರಮ ಸಂಖ್ಯೆ 11 ರಲ್ಲಿ ಮುತ್ತಗಾ 1ನೇ ಅಂಗನವಾಡಿ ಕೇಂದ್ರವೆಂದು ತಪ್ಪಾಗಿ ಪ್ರಕಟಿಸಲಾಗಿದ್ದು, ಇದನ್ನು ಮುತ್ತಗಾ-2ನೇ ಅಂಗನವಾಡಿ ಕೇಂದ್ರವೆಂದು ತಿದ್ದುಪಡಿ ಮಾಡಿ ಓದಿಕೊಳ್ಳಬೇಕೆಂದು ಶಹಾಬಾದ್ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

ಅಲ್ಲದೇ ಖಾಲಿಯಿರುವ ಮುತ್ತಗಾ-2 ನೇ ಕೇಂದ್ರದ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮಹಿಳಾ ಅಭ್ಯರ್ಥಿಗಳು

https://karnemakaone.kar.nic.in/abcd/

ವೆಬ್ಸೈಟ್ ದಲ್ಲಿ ಆನ್ಲೈನ್ ಮೂಲಕ ಮಾರ್ಚ್ 16 ರ ಸಂಜೆ 5.30 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಶಹಾಬಾದ್ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

ಕಲಬುರಗಿ (ನಗರ) ಅಂಗನವಾಡಿ ಸಹಾಯಕಿಯರ ಹುದ್ದೆಗಳ ಮರು ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಕಲಬುರಗಿ (ನಗರ) ಶಿಶು ಅಭಿವೃದ್ಧಿ ಯೋಜನೆಯಲ್ಲಿ 2022-23ನೇ ಸಾಲಿನಲ್ಲಿ ಖಾಲಿ ಇರುವ 57 ಅಂಗನವಾಡಿ ಸಹಾಯಕಿಯರ ಹುದ್ದೆಗಳ ಆಯ್ಕೆಗಾಗಿ ಆಫ್‌ಲೈನ್ ಮೂಲಕ ಹಾಗೂ 2024-25ನೇ ಸಾಲಿನಲ್ಲಿ ಖಾಲಿ ಇರುವ 92 ಅಂಗನವಾಡಿ ಸಹಾಯಕಿಯರ ಹುದ್ದೆಗಳ ಆಯ್ಕೆಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.

2022-23ನೇ ಸಾಲಿನ ಆಕ್ಷೇಪಣೆಯಿಂದ ಬಾಕಿ ಉಳಿದ 01 ಅಂಗನವಾಡಿ ಕೇಂದ್ರದ ಸಹಾಯಕಿ ಹುದ್ದೆಗೆ ಮರು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಹಾಗೂ 2024-25ನೇ ಸಾಲಿನ ಆಕ್ಷೇಪಣೆಯಿಂದ ಬಾಕಿ ಉಳಿದ 10 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಮರು ತಾತ್ಕಾಲಿಕವಾಗಿ ಆಯ್ಕೆ ಮಾಡಿ ಅಭ್ಯರ್ಥಿಗಳ ಪಟ್ಟಿಯನ್ನು ಕಲಬುರಗಿ (ನಗರ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ಕಲಬುರಗಿ ನಗರ  ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ ಗೃಹಲಕ್ಷ್ಮೀ 27ನೇ ಕಂತಿನ ಹಣ ನಿಮಗೆ ಜಮೆಯಾಯಿತೇ? ಹೀಗೆ ಚೆಕ್ ಮಾಡಿ

ಮಾರ್ಚ್ 25ರ ಸಂಜೆ  5.30 ಗಂಟೆಯೊಳಗಾಗಿ ಕಲಬುರಗಿ (ನಗರ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಕಛೇರಿ ವೇಳೆಯಲ್ಲಿ ಕಛೇರಿಯಲ್ಲಿ ಆಕ್ಷೇಪಣೆ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.

ಚಿಂಚೋಳಿ ಅಂಗನವಾಡಿ ಕಾರ್ಯಕರ್ತೆಯರ  ಹುದ್ದೆಯ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಚಿಂಚೋಳಿ ಶಿಶು ಅಭಿವೃದ್ಧಿ ಯೋಜನೆಯ 2022-23ನೇ ಸಾಲಿನಲ್ಲಿ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿ, ದಿನಾಂಕ:14-01-2026 ರಂದು  ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯಲ್ಲಿ 01 ಅಂಗನವಾಡಿ ಕಾರ್ಯಕರ್ತೆ ಹುದ್ದೆ (ಭವಾನಿ ನಗರ ಚಿಂಚೋಳಿ) ತಾತ್ಕಾಲಿಕವಾಗಿ ಆಯ್ಕೆ ಮಾಡಿ ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಸದರಿ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಅದೇ ರೀತಿ ಖಾನಾಪೂರ-2ನೇ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಮರು ಪ್ರಕಟಣೆ ಮಾಡಲು ಆಯ್ಕೆ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಚಿಂಚೋಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳ ಕುರಿತು ಆಕ್ಷೇಪಣೆಗಳಿದ್ದಲ್ಲಿ  ಸಂಬAಧಿಸಿದ ಸೂಕ್ತ ದಾಖಲಾತಿಗಳೊಂದಿಗೆ ಖುದ್ದಾಗಿ 2026ರ ಮಾರ್ಚ್ 24ರ ರೊಳಗಾಗಿ ಚಿಂಚೋಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.  ಅವಧಿ ಮುಗಿದ ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಚಿಂಚೋಳಿ ಚಂದಾಪೂರ ಪಟೇಲ್ ಕಾಲೋನಿಯಲ್ಲಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ

Leave a Comment