ಅಂಗನವಾಡಿ ಕಾರ್ಯಕರ್ತೆಯರ ಆಯ್ಕೆ ಪಟ್ಟಿ ಪ್ರಕಟ

Written by Ramlinganna

Updated on:

Anganawadi workers provisional list  ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಕರೆದ ಅರ್ಜಿಗೆ ಸಂಬಂಧಪಟ್ಟಂತೆ ಈಗ ತಾತ್ಕಾಲಿಕ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಆಕ್ಷೇಪಣೆಗೆ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಕಲಬುರಗಿ (ಗ್ರಾಮೀಣ) ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಖಾಲಿಯಿರುವ 18 ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರ ತಾತ್ಕಾಲಿಕ ಮತ್ತು ಗೌರವಧನ ಆಧಾರಿತವಾಗಿರುವ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಆಯ್ಕೆ ಸಮಿತಿಯ ಅನುಮೋದನೆ ಮೇರೆಗೆ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಕಲಬುರಗಿ (ಗ್ರಾಮೀಣ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಆಗಸ್ಟ್ 22 ರಂದು ಪ್ರಕಟಿಸಲಾಗಿದೆ ಎಂದು ಕಲಬುರಗಿ (ಗ್ರಾಮೀಣ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

ಸದರಿ ತಾತ್ಕಾಲಿಕ ಆಯ್ಕೆ  ಪಟ್ಟಿಗೆ ಆಕ್ಷೇಪಣೆಗಳೆನ್ನಾದರೂ ಇದ್ದಲ್ಲಿ 2023 ರ ಆಗಸ್ಟ್ 30 ರ ಸಂಜೆ 5.30 ಗಂಟೆಯೊಳಗಾಗಿ ಕಲಬುರಗಿ (ಗ್ರಾಮೀಣ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಸಂಬಂಧಪಟ್ಟ ಮೂಲ ದಾಖಲಾತಿಗಳೊಂದಿಗೆ ಖುದ್ದಾಗಿ ಕಚೇರಿಗೆ ಬಂದು ಆಕ್ಷೇಪಣೆ ಸಲ್ಲಿಸಬೇಕು. ನಂತರ ಬಂದ ಆಕ್ಷೇಪಣೆಗಳನ್ನು ಸ್ವೀಕರಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

Anganawadi workers provisional list  ಶಹಾಬಾದ್ ಅಂಗನವಾಡಿ ಕಾರ್ಯಕರ್ತೆಯರ ತಾತ್ಕಾಲಿಕ ಪಟ್ಟಿ ಪ್ರಕಟ

ಕಲಬುರಗಿ ಜಿಲ್ಲೆಯ ಶಹಾಬಾದ್ ತಾಲೂಕಿನ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಖಾಲಿಯಿರುವ 12 ಅಂಗನವಾಡಿ ಕೇಂದ್ರಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರ ತಾತ್ಕಾಲಿಕ ಮತ್ತು ಗೌರವಧನ ಆಧಾರಿತವಾಗಿರುವ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಆಯ್ಕೆ ಸಮಿತಿಯ ಅನುಮೋದನೆ ಮೇರೆಗೆ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಶಹಾಬಾದ್ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಕಚೇರಿಯಲ್ಲಿ ಆಗಸ್ಟ್ 22 ರಂದು ಪ್ರಕಟಿಸಲಾಗಿದೆ ಎಂದು ಶಹಾಬಾದ್ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ ಬೆಳೆ ಹಾನಿ, ಬೆಳೆ ವಿಮೆ ಹಾಗೂ ಪಿಎಂ ಕಿಸಾನ್ ಸ್ಟೇಟಸ್ ಹೀಗೆ ಚೆಕ್ ಮಾಡಿ

ಸದರಿ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳೆನ್ನಾದರೂ ಇದ್ದಲ್ಲಿ2023ರ ಆಗಸ್ಟ್ 30 ರ ಸಂಜೆ 5.30 ಗಂಟೆಯೊಳಗಾಗಿ ಶಹಾಬಾದ್ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಸಂಬಂಧಪಟ್ಟ ಮೂಲ ದಾಖಲಾತಿಗಳೊಂದಿಗೆ ಖುದ್ದಾಗಿ ಕಚೇರಿಗೆ ಬಂದು ಆಕ್ಷೇಪಣೆ ಸಲ್ಲಿಸಬೇಕು. ನಂತರ ಬಂದ ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಚಿತ್ತಾಪುರ ಅಂಕನವಾಡಿ ಕಾರ್ಯಕರ್ತೆಯರ ತಾತ್ಕಾಲಿಕ ಪಟ್ಟಿ ಪ್ರಕಟ

ಚಿತ್ತಾಪುರ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಖಾಲಿ 7 ಅಂಗನವಾಡಿ ಕೇಂದ್ರಗಳ ಅಂಗನವಾಡಿ ಕಾರ್ಯಕರ್ತೆಯರ ತಾತ್ಕಾಲಿಕ ಮತ್ತು ಗೌರವಧನ ಆಧಾರಿತವಾಗಿರುವ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಆಯ್ಕೆ ಸಮಿತಿಯ ಅನುಮೋದನೆ ಮೇರೆಗೆ ಅಭ್ಯರ್ಥಿಗಳ ತಾತ್ಕಾಲಿಕ ಅಯ್ಕೆ ಪಟ್ಟಿಯನ್ನು ಚಿತ್ತಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ 2023ರ ಆಗಸ್ಟ್ 22 ರಂದು ಪ್ರಕಟಿಸಲಾಗಿದೆ ಎಂದು ಚಿತ್ತಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

ಸದರಿ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳೆನ್ನಾದರೂ ಇದ್ದಲ್ಲಿ 2023 ರ ಆಗಸ್ಟ್ 30 ರ ಸಂಜೆ 5.30 ಗಂಟೆಯೊಳಗೆ ಚಿತ್ತಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಸಂಬಂಧಪಟ್ಟ ಮೂಲ ದಾಖಲಾತಿಗಳೊಂದಿಗೆ ಖುದ್ದಾಗಿ ಕಚೇರಿಗೆ ಬಂದು ಆಕ್ಷೇಪಣೆ ಸಲ್ಲಿಸಬೇಕು. ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಸೇಡಂನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

ಸೇಡಂ ಶಿಶು ಅಭಿವೃದ್ಧಿ ಯೋಜನೆಯಲ್ಲಿ 2022-23ನೇ ಸಾಲಿಗೆ ಖಾಲಿರುವ 5 ಜನ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹುದ್ದೆಗಳ ಆಯ್ಕೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಸೇಡಂ ಶಿಶು ಆಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

ಸೇಡಂ ಶಿಶು ಅಭಿವೃದ್ಧಿ  ಯೋಜನೆಯಲ್ಲಿ ಖಾಲಿಯಿರುವ ಕುರುಕುಂಟಾ -2 , ಬೀದರಚೇಡ, ಕಿಶನತಾಂಡಾ-2, ಊಡಗಿ-5 ಹಾಗೂ ಮುನಕನಪಲ್ಲಿ 2 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ತಾತ್ಕಾಲಿಕವಾಗಿ ಅಭ್ಯರ್ಥಿಗಳು ಆಯ್ಕೆಯಾಗಿರುತ್ತಾರೆ.

ಆಯ್ಕೆಯಾದ ಅಭ್ಯರ್ಥಿಗಳ ವಿದ್ಯಾರ್ಹತೆ, ವಾಸಸ್ಥಳ, ವಯಸ್ಸು ಹಾಗೂ ಇನ್ನಿತರ ಯಾವುದಾದರೂ ಆಕ್ಷೇಪಣೆ ಇದ್ದಲ್ಲಿ ಲಿಖಿತ ರೂಪದಲ್ಲಿ ಪೂರಕ ದಾಖಲೆಗಳೊಂದಿಗೆ ಆಗಸ್ಟ್ 29 ರೊಳಗೆ ಸೇಡಂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಆಕ್ಷೇಪಣೆ ಸಲ್ಲಿಸಬೇಕು.

ಮೂಲ ದಾಖಲಾತಿಗಳ ನೈಜತೆಯ ಪರಿಶೀಲನೆ ಷರತ್ತಿಗೆ ಒಳಪಟ್ಟು ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳ ಶಾಲಾ ದಾಖಲಾತಿಗಳ ಸಂಬಂಧಪಟ್ಟ ಶಾಲೆಯ ಮುಖ್ಯಸ್ಥರಿಂದ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳ ಪರಿಶೀಲನೆಗೆ ಒಳಪಡಿಸಿ ಅಂತಿಮ ಆಯ್ಕೆ ಮಾಡಲಾಗುತ್ತದೆ. ಆಕ್ಷೇಪಣೆಗಳಿದ್ದಲ್ಲಿ ಆಗಸ್ಟ್29ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

Leave a Comment