ಅಂಗನವಾಡಿ ಕಾರ್ಯಕರ್ತೆಯರ ಆಯ್ಕೆ ಪಟ್ಟಿ ನಿಮ್ಮಹೆಸರಿದೆಯೇ ಚೆಕ್ ಮಾಡಿ

Written by Ramlinganna

Published on:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಆಯಾ ಶಿಶಿ ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ.

ಹೌದು, ಚಾಮರಾಜನಗರ ಜಿಲ್ಲೆಯ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಈ ಸಂಬಂಧ ಆಕ್ಷೇಪಣೆಗಳಿದ್ದಲ್ಲಿ ಡಿಸೆಂಬರ್ 8 ರವರೆಗೆ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಗಳ ಕಚೇರಿಯಲ್ಲಿ ಸಲ್ಲಿಸಬಹುದೆಂದು ಚಾಮರಾಜನಗರ ಜಿಲ್ಲೆಯ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉದ್ಯೋಗಿನಿ ಯೋಜನೆಯಡಿ ಅರ್ಜಿ ಆಹ್ವಾನ

ಮಹಿಳಾ ಮತ್ತುಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2023-24ನೇ ಸಾಲಿನ ಉದ್ಯೋಗಿನಿ ಯೋಜನೆಯ ಅರ್ಜಿ ಆಹ್ವಾನಿಸಲಾಗಿದೆ.

ಉದ್ಯೋಗಿನಿ ಯೋಜನೆಯ ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕ್ ಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾಗುತ್ತಿದೆ.

ವಯೋಮಿತಿ 18 ರಿಂದ 55 ವಯೋಮಾನದೊಳಗಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಜಾತಿ ಮತ್ತು ಆದಾಯ ಮಿತಿ 2 ಲಕ್ಷ ಆಗಿರುತ್ತದೆ.

ಘಟಕ ವೆಚ್ಚ 1 ಲಕ್ಷ ರೂಪಾಯಿಯಿಂದ  3 ಲಕ್ಷ ರೂಪಾಯಿಗಳವರೆಗೆ ಸಿಗುತ್ತದೆ. ಸಹಾಯಧನ ಶೇ. 50 ರಷ್ಟು ಇರುತ್ತದೆ.

ಇದನ್ನೂ ಓದಿ : ನಿಮಗೆಷ್ಟು ಬೆಳೆ ವಿಮೆ ಹಣ ಜಮೆಯಾಗಿದೆ? ಮೊಬೈಲ್ ನಲ್ಲೇ ಸ್ಟೇಟಸ್ ಚೆಕ್ ಮಾಡಿ

ಸಾಮಾನ್ಯ ವರ್ಗದವರಿಗೆ ಆದಾಯ ಮಿತಿ 1.50 ಲಕ್ಷ ರೂಪಾಯಿಗಳಾಗಿರುತ್ತದೆ.  ಘಟಕ ವೆಚ್ಚ ಕನಿಷ್ಠ 1 ಲಕ್ಷದಿಂದ 3 ಲಕ್ಷ ರೂಪಾಯಿಗಳಾಗಿರುತ್ತದೆ. ಸಾಮಾನ್ಯ ವರ್ಗದವಿಗೆ ಸಹಾಯಧನ ಶೇ. 30 ರಷ್ಟು ಸಹಾಯಧನ ಸಿಗುತ್ತದೆ.

ಚೇತನ ಯೋಜನೆ

ಚೇತನ ಯೋಜನೆಯಡಿಯಲ್ಲಿ ದಮನಿತ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು 30 ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ ನೀಡಲಾಗುವುದು. ಈ ಸೌಲಭ್ಯ ಪಡೆಯಲು 18 ವಯೋಮಾನಕ್ಕಿಂತ ಮೇಲ್ಪಟ್ಟವರು ಅರ್ಜಿ ಸಲ್ಲಿಸಬಹುದು.

ಧನಶ್ರೀ ಯೋಜನೆ

ಧನಶ್ರೀ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು 30 ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ ನೀಡಲಾಗುವುದು. ಈ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಲು 18 ರಿಂದ 60 ವಯೋಮಾನದೊಳಗಿರಬೇಕು.

ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಸೀಡಿಂಗ್ ಮಾಡಿಸಿರಬೇಕು. ಉದ್ಯೋಗಿನಿ ಯೋಜನೆಯ ಎಸ್ಸಿ, ಎಸ್ಟಿ ಬಳಕೆಯಾಗದ ಅನುದಾನದಡಿ ಸೌಲಭ್ಯ ಪಡೆಯಲು ಇಚ್ಚಿಸುವ ಫಲಾಫೇಕ್ಷಿಗಳು, ಅರ್ಜಿದಾರರು ಸಹ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು ಹಾಗೂ ವೆಬ್ಸೈಟ್ ಲಿಂಕ್ ಸಹ ಲಭ್ಯವಿರುತ್ತದೆ.

ಅರ್ಜಿ ಸಲ್ಲಿಸಲು  https://sevasindhu.karnataka.gov.in ಫಲಾಫೇಕ್ಷಿಗಳು, ಅರ್ಜಿದಾರರು ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರ, ಬೆಂಗಳೂರು ಒನ್ ಕೇಂದ್ರ, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಡಿಸೆಂಬರ್ 22 ರಂದು ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ https://kswdc.karnataka.gov.in ಗೆ ಸಂಪರ್ಕಿಸಲು ಕೋರಲಾಗಿದೆ.

Leave a Comment