ಅಂಗನವಾಡಿ ಕಾರ್ಯಕರ್ತೆಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Written by Ramlinganna

Updated on:

Anganwadi job notification ಅಂಗನವಾಡಿ ನೌಕರರ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಹೌದು 11 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 22 ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ.

ಕೊಡಗು ಜಿಲ್ಲೆಯ ಪೊನ್ನಂಪೇಟೆ ಮತ್ತು ವಿರಾಜಪೇಟೆ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ 11 ಅಂಗನವಾಡಿ ಕಾರ್ಯಕರ್ತೆಯರು, 22 ಅಂಗನವಾಡಿ  ಸಹಾಯಕಿಯರ ಹುದ್ದೆಗೆ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಯನ್ನು ಭರ್ತಿ ಮಾಡಲು ಅಂಗನವಾಡಿ ಕೇಂದ್ರಗಳಿಗೆ ಅರ್ಜಿಗಳನ್ನು ಭೌತಿಕವಾಗಿ (ಆಫ್ ಲೈನ್) ಮೂಲಕ ಆಹ್ವಾನಿಸಿ ಪ್ರಕಟಣೆ ಹೊರಡಿಸಲಾಗಿದೆ.

ಅಂಗವಿಕಲ ಅಭ್ಯರ್ಥಿಗಳಿಗೆ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಲು ವಯೋಮಿತಿಯಲ್ಲಿ 10 ವರ್ಷಗಳ ಸಡಿಲಿಕೆ ಇದೆ. ದೈಹಿಕ ಅಂಗವಿಕಲತೆಯ ಪ್ರಮಾಣವು ಶೇ. 40ಕ್ಕಿಂತ ಅಧಿಕಾರವಿರಬಾರದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿಯನ್ನು ಶಿಶು ಅಭಿವೃದ್ಧಿ ಯೋಜನಾ ಕಚೇರಿ ಪೊನ್ನಂಪೇಟೆ ಇಲ್ಲಿ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಯನ್ನು ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಪೊನ್ನಂಪೇಟೆಯಲ್ಲಿ ಸಲ್ಲಿಸಬಹುದು.

ಇದನ್ನೂ ಓದಿ : ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ? ಮೊಬೈಲ್ ನಲ್ಲೇ ಚೆಕ್ ಮಾಡಿ

ಹೆಚ್ಚಿನ ಮಾಹಿತಿಗಾಗಿ ಪೊನ್ನಂಪೇಜೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ 08274 201878 ಅಥವಾ 7795732286 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಪೊನ್ನಂಪೇಟೆ ಶಿಶು ಅಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ವಿದ್ಯಾರ್ಹತೆ (Anganawadi job qualification)

ಅಂಗನವಾಡಿ ಕಾರ್ಯಕರ್ತೆಯ ಹುದ್ದಗೆ ಅರ್ಜಿ ಸಲ್ಲಿಸಲಿಚ್ಚಿಸುವವರು ಎಸ್.ಎಸ್.ಎಲ್.ಸಿ ಪಾಸಾಗಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವವರು 8ನೇ ತರಗತಿ ಉತ್ತೀರ್ಣರಾಗಿರಬೇಕು. 20 ರಿಂದ 35 ವಯೋಮಾನದವರು ಅರ್ಜಿ ಸಲ್ಲಿಸಬಹುದು.

ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರಿಗೆ ವೇತನ Salary)

ಅಂಗನವಾಡಿ ಕಾರ್ಯಕರ್ತೆಯರಿಗೆ 8 ಸಾವಿರ ರೂಪಾಯಿ ಸಂಬಳ ನಿಗದಿಪಡಿಸಲಾಗಿದೆ.  ಅಂಗನವಾಡಿ ಸಹಾಯಕಿಯರಿಗೆ 4 ಸಾವಿರ ರೂಪಾಯಿ ವೇತನ ನೀಡಲಾಗುವುದು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು (these document need for job apply)

ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಬಳಿ ಆಧಾರ್ ಕಾರ್ಡ್ ಇರಬೇಕು. ಇತ್ತೀಚಿನ ಪಾಸ್ ಪೋರ್ಟ್ ಸೈಜಿನ ಎರಡು ಭಾವಚಿತ್ರ ಇರಬೇಕು. ವಿದ್ಯಾರ್ಹತೆ ಪ್ರಮಾಣ ಪತ್ರ ಅಂದರೆ 8ನೇ ತರಗತಿ ಹಾಗೂ 10ನೇ ತರಗತಿಪಾಸಾಗಿರುವ ಅಂಕಪಟ್ಟಿ ಇರಬೇಕು. ಜನ್ಮ ದಿನಾಂಕ ಅಂದರೆ ಜನನ ಪ್ರಮಾಣ ಪತ್ರ ಇರಬೇಕು. ವಾಸಸ್ಥಳ ದೃಢೀಕರಣ ಪ್ರಮಾಣ ಪತ್ರ ಇರಬೇಕು.

ಇದನ್ನು ಓದಿ : ಜಮೀನಿನ ಓರಿಜಿನಲ್ ಸರ್ವೆ ಟಿಪ್ಪಣಿ ಪುಸ್ತಕ ಮೊಬೈಲಿನಲ್ಲಿ ಒಂದೇ ನಿಮಿಷದಲ್ಲಿ ಡೌನ್ಲೋಡ್ ಮಾಡಿ

ಭರ್ತಿ ಮಾಡಿ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು. ಮೀಸಲಾತಿ ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ ಇರಬೇಕು. ವಿಚ್ಛೇದಿತ ಅಭ್ಯರ್ಥಿಗಳಿಗೆ ಪತಿಯ ಮರಣ ಪ್ರಮಾಣಪತ್ರ ಇರಬೇಕು.

Anganwadi job notification ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ಖಾಲಿಯಿರುವ 3 ಅಂಗನವಾಡಿ ಕಾರ್ಯಕರ್ತೆಯರ 5 ಮಿನಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ 10 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಮಾರ್ಚ್ 28 ರ ಒಳಗಡೆ ಬಾಳಗಡಿಯಲ್ಲಿರುವ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ  08265 295729 ಗೆ ಸಂಪರ್ಕಿಸಲು ಕೋರಲಾಗಿದೆ.

ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ

ಚಿಕ್ಕಮಗಳೂರು ಜಿಲ್ಲೆಯ ನರಸಿಂಹಪುರ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ, ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಗೌರವಧನ ಆಧಾರದ ಮೇಲೆ ಗುರುತಿಸಲು ಸ್ಥಳೀಯ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಫೆಬ್ರವರಿ 27 ರ ಬೆಳಗ್ಗೆ 10 ರಿಂದ ಫೆಬ್ವರಿ 28 ರ ಸಾಯಂಕಾಲ 5.30 ಗಂಟೆಯವರೆಗೆ ಕಚೇರಿಯ ವೇಳೆಯಲ್ಲಿ ಖುದ್ದಾಗಿ ಹಾಜರಾಗಿ ಸಲ್ಲಿಸಬಹುದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08266 200397 ಗೆ ಸಂಪರ್ಕಿಸಲು ಕೋರಲಾಗಿದೆ.

Leave a Comment