ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Written by Ramlinganna

Updated on:

Anganwadi workers job vacancy  ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಗಿದೆ.

ಹೌದು,  ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ವ್ಯಾಪ್ತಿಯಲ್ಲಿನ ವಿವಿಧ ಅಂಗನವಾಡಿಗಳಲ್ಲಿ ಖಾಲಿಯಿರುವ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಥಣಿ ತಾಲೂಕಿನ ವಿವಿಧ ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿನ ಅಂಗನವಾಡಿಗಳಿಗೆ 27 ಕಾರ್ಯಕರ್ತೆಯರ ಮತ್ತು 33 ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

19 ರಿಂದ 35 ವರ್ಷರೊಳಗಾಗಿ ಆಸಕ್ತ ಮಹಿಳೆಯರುಬರುವ ಜುಲೈ 15 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ  ವಿವರಗಳಿಗಾಗಿ ಗ್ರಾಮ ಪಂಚಾಯತಿ ನೋಟಿಸ್ ಬೋರ್ಡ್ ಗಳಲ್ಲಿ ಅಂಟಿಸಿರುವ ಪ್ರಕಟಣೆ ನೋಡಿ ತಿಳಿಯಬಹುದು. ಇಲ್ಲವೇ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯದಲ್ಲಿ ಖುದ್ದಾಗಿ ಭೇಟಿಯಾಗಿ ಅಥವಾ ಕಾರ್ಯಾಲಯದ ದೂರವಾಣಿ 08289 295150 ಗೆ ಸಂಪರ್ಕಿಸಬಹುದು.

ಸವದತ್ತಿ ತಾಲೂಕಿನಲ್ಲಿಯೂ ಅಂಗನವಾಡಿ ಸಹಾಯಕಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ (in savadatti taluka job vacancy)

ಶಿಶು ಅಭಿವೃದ್ಧಿ ಯೋಜನೆಯಡಿಯಲ್ಲಿ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ 34 ಅಂಗನವಾಡಿ ಕಾರ್ಯಕರ್ತೆ ಹಾಗೂ 79 ಅಂಗನವಾಡಿ ಸಹಾಯಕಿಯ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ : 12 ಕೋಟಿ ರೂಪಾಯಿ ಬೆಳೆ ವಿಮೆ ಹಣ ವಿತರಿಸಲು ಆದೇಶ :  ಚೆಕ್ ಮಾಡಿ

ಅರ್ಜಿ ಸಲ್ಲಿಸಲು 19 ರಿಂದ 35 ವಯೋಮಾನದೊಳಗಿರಬೇಕು. ಅರ್ಜಿ ಸಲ್ಲಿಸುವ ಮಹಿಳೆಯರು ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುವವರಾಗಿರಬೇಕು. ಮಹಿಳಾ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಜುಲೈ 12 ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶವಿದೆ. ಆಸಕ್ತ ಮಹಿಳಾ ಅಭ್ಯರ್ಥಿಗಳು ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ 08330 295150 ಗೆ ಸಂಪರ್ಕಿಸಲು ಕೋರಲಾಗಿದೆ.

Anganwadi workers job vacancy  ಬೆಳಗಾವಿ ಗ್ರಾಮೀಣ ವ್ಯಾಪ್ತಿಯಲ್ಲಿ ಖಾಲಿಯಿರುವ ಹುದ್ದೆಗಳಿಗೂ ಅರ್ಜಿ ಆಹ್ವಾನ 

ಬೆಳಗಾವಿ ಜಿಲ್ಲೆಯ ಗ್ರಾಮೀಣ ವ್ಯಾಪ್ತಿಯಲ್ಲಿರುವ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ 16 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 89 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಜುಲೈ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಸುವರ್ಣ ಸೌಧ, ನೆಲಮಹಡಿ, ಬೆಳಗಾವಿ (ಗ್ರಾಮೀಣ) ಇಲ್ಲಿ ಸಂಪರ್ಕಿಸಬಹುದು..

ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ ಈಗ ವಿವಿಧ ಜಿಲ್ಲೆಗಳಲ್ಲಿ ಅರ್ಜಿ ಆಹ್ವಾನಿಸಲಾಗುತ್ತಿದೆ. ಆಯಾ ಜಿಲ್ಲಾವಾರು ಅರ್ಜಿ ಆಹ್ವಾನಿಸುವಾಗ ಮಾಹಿತಿ ನೀಡಲಾಗುವುದು.

ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳ ಭರ್ತಿಗೆ ವಿದ್ಯಾರ್ಹತೆ (Qualification for anganawadi workers job)

ಎಸ್ಎಸ್ಎಲ್ಸಿ ಪಿಯಿಸಿಯಲ್ಲಿ ಪಾಸಾದ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗುವುದು. ಆಯಾ ಗ್ರಾಮ ವ್ಯಾಪ್ತಿಯಲ್ಲಿರುವ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು.

ಅರ್ಜಿ ಆಹ್ವಾನಿಸುವಾಗ ಮಹಿಳಾ ಅಬ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ಅರ್ಜಿ ಸಲ್ಲಿಸಬಹುದು. ಏಕೆಂದರೆ ಹುದ್ದೆಗಳಿಗೆ ಹೆಚ್ಚಿನ ಅರ್ಜಿಗಳು ಬಂದಾಗ ಆಯ್ಕೆಗೆ ಅಂಕಗಳ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುವುದು.

ಅಂಗನನಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು (Document need for anganawadi jobs)

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ಆಧಾರ್ ಕಾರ್ಡ್ ಹೊಂದಿರಬೇಕು. ವಿದ್ಯಾರ್ಹತೆ ಅಂಕಪಟ್ಟಿ ಹೊಂದಿರಬೇಕು. ವಾಸಸ್ಥಳ ಪ್ರಮಾಣ ಪತ್ರ ಹೊಂದಿರಬೇಕು. ಈ ಎಲ್ಲಾ ದಾಖಲೆಗಳೊಂದಿದೆ ಅರ್ಜಿಯನ್ನು ಸಲ್ಲಿಸಬೇಕು.

Leave a Comment