Anganwadi workers jobs ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಹಾವೇರಿ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ 39 ಅಂಗನವಾಡಿ ಕಾರ್ಯಕರ್ತೆ ಹಾಗೂ 113 ಸಹಾಯಕಿಯರ ಹುದ್ದೆಗಳ ಭರ್ತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್ಎಸ್ಎಲ್ಸಿ ಯಲ್ಲಿ ಕನ್ನಡ ಭಾಷೆಯನ್ನಾಗಿ ಓದಿರಬೇಕು. ಒಂದು ವರ್ಷದ ನರ್ಸರಿ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪಡೆದು ಪ್ರಮಾಣ ಪತ್ರ ಹೊಂದಿರುವವರಿಗೆ ಮೊದಲ ಆದ್ಯತೆ ನೀಡಲಾಗುವುದು ಹಾಗೂ ಸದರಿಯವರಿಗೆ ಬೋನಸ್ 5 ಅಂಕಗಳನ್ನು ನೀಡಲಾಗುವುದು. ಕನಿಷ್ಟ 19 ಹಾಗೂ ಗರಿಷ್ಟ 35 ವಯೋಮಾನದೊಳಗಿರಬೇಕು.
ಅಂಗನವಾಡಿ ಸಹಾಯಕಿಯರ ಹುದ್ದೆಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಕನಿಷ್ಟ 19 ವರ್ಷ ಗರಿಷ್ಠ 35 ವಯೋಮಿತಿಯೊಳಗಿನ ಹೆಣ್ಣು ಮಕ್ಕಳು ಹಾಗೂ ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅಂಗನವಾಡಿ ಸಹಾಯಕಿಯರು ಯಾವುದೇ ಭಾಷಾ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ್ದರೂ ಹಾಗೂ ಯಾವುದೇ ರಾಜ್ಯದಲ್ಲಿ ವ್ಯಾಸಂಗ ಮಾಡಿದ್ದರೂ ಸಹ ಅವರು ಕನ್ನಡ ಭಾಷೆಯನ್ನು ಪ್ರಥಮ / ದ್ವಿತೀಯ ಭಾಷೆಯಾಗಿ ವ್ಯಾಸಂಗ ಮಾಡಿರಬೇಕು.
ಆ್ಯಸಿಡ್ ದಾಳಿಗೆ ತುತ್ತಾದ ಮಹಿಳೆಯರು ಅಂಗನವಾಡಿ ಕಾರ್ಯಕರ್ತೆ / ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದಲ್ಲಿ ಅರ್ಹ ಅಭ್ಯರ್ಥಿಗೆ + 5 ಬೋನಸ್ ಅಂಕಗಳನ್ನು ನೀಡಲಾಗುವುದು.
ಫೆಬ್ರವರಿ 15 ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ.
ಹೆಚ್ಚಿನ ಮಾಹಿತಿಗೆ ವೆಬ್ಸೈಟ್ ವಿಳಾಸ
https://karnemakaone.kar.nic.in/abcd/
ಗೆ ಸಂಪರ್ಕಿಸಲು ಕೋರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Anganwadi workers jobs ಅರ್ಜಿ ಸಲ್ಲಿಸಲು ಯಾರು ಯಾರು ಅರ್ಹರಾಗಿರುತ್ತಾರೆ?
ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲಿಚ್ಚಿಸುವವರು ಗ್ರಾಮಾಂತರ ಪ್ರದೇಶದ ಅಂಗನವಾಡಿ ಕೇಂದ್ರವಾದಲ್ಲಿ ಆಯಾ ಕಂದಾಯ ಗ್ರಾಮದಲ್ಲಿ ವಾಸ್ತವ್ಯ ಹೊಂದಿರಬೇಕು. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಆಯ್ಕೆಗೆ ಸ್ಥಳೀಯಮಜಿರೆ, ತಾಂಡಾ ಹಾಗೂ ಹಾಡಿಗೆ ಸೇರಿದವರಾಗಿದ್ದರೆ ಸಂಬಂಧಿಸಿದ ವಾಸ್ತವ್ಯ ಪ್ರಮಾಣ ಪತ್ರವನ್ನು ಸಕ್ಷಮ ಪ್ರಾಧಿಕಾರದಿಂದ ಪಡೆಯಬೇಕು.
ಇದನ್ನೂ ಓದಿ : ಗೃಹಲಕ್ಷ್ಮೀ ಯೋಜನೆಯ ಹಣ ಜಮೆ: ನಿಮ್ಮ ಹೆಸರು ಇಲ್ಲೇ ಚೆಕ್ ಮಾಡಿ
ನಗರ ಪ್ರದೇಶದ ಅಂಗನವಾಡಿ ಕೇಂದ್ರವಾದಲ್ಲಿ ಆಯಾ ಕಂದಾಯ ವಾರ್ಡ್ ನಲ್ಲಿ ವಾಸ್ತವ್ಯ ಹೊಂದಿರಬೇಕು.ಹಾಗೂ ವಾಸ್ತವ್ಯ ಪ್ರಮಾಣ ಪತ್ರವನ್ನು ಸಕ್ಷಮ ಪ್ರಾಧಿಕಾರದಿಂದ ಪಡೆದಿರಬೇಕು.
ಆನ್ಲೈನ್ ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲೆಗಳು
ಅರ್ಜಿ ನಿಗದಿತ ನಮೂನೆಯಲ್ಲಿ ಆನ್ಲೈನ್ ನಲ್ಲಿ ಸಲ್ಲಿಸಬೇಕು ಜನನ ಪ್ರಮಾಣ ಪತ್ರ / ಜನ್ಮ ದಿನಾಂಕ ಇರುವ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಸಲ್ಲಿಸಬೇಕು. ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿಇರಬೇಕು. ತಹಶೀಲ್ದಾರರು ಅಥವಾ ಉಪ ತಹಶೀಲ್ದಾರರಿಂದ ಪಡೆದ ಮೂರು ವರ್ಷದೊಳಗಿನ ವಾಸಸ್ಥಳ ಪ್ರಮಾಣ ಪತ್ರ, ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ ಇರಬೇಕು. ಪತಿ ಮರಣ ಹೊಂದಿದ್ದರೆ ಮರಣ ಪ್ರಮಾಣ ಪತ್ರ, ಅಂಗವಿಕಲರಾಗಿದ್ದರೆ ಅಂಗವಿಲಕತೆ ಪ್ರಮಾಣ ಪತ್ರ ಲಗತ್ತಿಸಬೇಕು. ಎಲ್ಲಾ ದಾಖಲೆಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು.
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಈ
https://karnemakaone.kar.nic.in/abcd/ApplicationForm_JA_org.aspx
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.ನಂತರ ನಿಮ್ಮ ಜಿಲ್ಲೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಹುದ್ದೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಕೆಟಗೇರಿ ಆಯ್ಕೆ ಮಾಡಿಕೊಳ್ಳಬೇಕು. ನಂತರ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಮುನ್ನ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ತಮ್ಮ ಬಳಿ ಇಟ್ಟುಕೊಂಡಿರಬೇಕು.