ಅನ್ನಭಾಗ್ಯ ಹಣ ಜಮೆ: ನಿಮಗೆಷ್ಟು ಜಮೆ ಆಗಿದೆ? ಚೆಕ್ ಮಾಡಿ

Written by Ramlinganna

Updated on:

Annabhagya amount status check ಅನ್ನಭಾಗ್ಯ ಯೋಜನೆಯಡಿಯಲ್ಲಿ ಪಡಿತರ ಚೀಟಿದಾರರ ಕುಟುಂಬಗಳಿಗೆ ನೀಡಲಾಗುವು 5 ಕೆ.ಜಿ ಅಕ್ಕಿ ಹೆಚ್ಚುವರಿ ಬದಲಾಗಿ ಡಿಬಿಟಿ ಮೂಲಕ ನಗದು ಹಣವನ್ನು ಪಾವತಿ ಮಾಡಲಾಗುತ್ತಿದೆ. ನಿಮಗೆಷ್ಟು ಜಮೆಯಾಗಿದೆ? ಮೊಬೈಲ್ ನಲ್ಲೇ ಚೆಕ್ ಮಾಡಬಹುದು.

ಅನ್ನಭಾಗ್ಯ ಯೋಜನೆಯಡಿಯಲ್ಲಿ ನೋಂದಣಿ ಮಾಡಿಸಿದ ಫಲಾನುಭವಿಗಳ ಖಾತೆಗೆ ಕಳೆದ ಐದು ಕಂತುಗಳಲ್ಲಿ ಹಣ ಜಮೆ ಮಾಡಲಾಗುತ್ತಿದೆ. ರೇಶನ್ ಕಾರ್ಡ್ ನಲ್ಲಿ ಕುಟುಂಬದ ಮುಖ್ಯಸ್ಥರೆಂದು ನಮೂದಾಗಿರುವ ಮುಖ್ಯಸ್ಥರ ಖಾತೆಗೆ ಅನ್ನಭಾಗ್ಯ ಹಣ ಜಮೆ ಮಾಡಲಾಗುತ್ತಿದೆ.

ಕರ್ನಾಟಕ ರಾಜ್ಯ ಸರ್ಕಾರವು ಐದು ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು ತಮಗೆಲ್ಲರಿಗೂ ಗೊತ್ತಿದ್ದ ಸಂಗತಿ. ಆರಂಭದಲ್ಲಿ ಶಕ್ತಿ ಯೋಜನೆ ನಂತರ ಗೃಹಶಕ್ತಿ ಯೋಜನೆಯನ್ನು ಚಾಲನೆ ನೀಡಲಾಯಿತು.ಈ ಯೋಜನೆಗಳಡಿಯಲ್ಲಿ ನೋಂದಣಿ ಮಾಡಿಸಿದ ಫಲಾನುಭವಿಗಳ ಖಾತೆಗೆ ದಾಖಲೆಗಳನ್ನು ಪರಿಶೀಲಿಸಿ ಜಮೆ ಮಾಡಲಾಗುತ್ತಿದೆ.

ಇದನ್ನೂ ಓದಿ ನಿಮ್ಮ ಎಲ್ಐಸಿ ಸ್ಟೇಟಸ್ ಮೊಬೈಲ್ ನಲ್ಲೇ ಚೆಕ್ ಮಾಡಿ? ಇಲ್ಲಿದೆ ಮಾಹಿತಿ

ಕೆಲವು ಫಲಾನುಭವಿಗಳ ಖಾತೆಗೆ ಅನ್ನಭಾಗ್ಯ ಯೋಜನೆಯ ಹಣ ಜಮೆಯಾಗುತ್ತಿಲ್ಲ. ಏಕೆಂದರೆ ರೇಶನ್ ಕಾರ್ಡ್, ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಬುಕ್ ನಲ್ಲಿ ಹೆಸರು ಹೊಂದಾಣಿಕೆ ಆಗದೆ ಇರುವುದಿಲ್ಲ. ಮೂರು ದಾಖಲೆಗಳಲ್ಲಿ ಫಲಾನುಭವಿಗಳ ಹೆಸರು ಒಂದೇ ರೀತಿ ಆಗಿರಬೇಕು. ಸ್ವಲ್ಪ ವ್ಯತ್ಯಾಸ ಅಂದರೆ ಒಂದಕ್ಷರವೂ ವ್ಯತ್ಯಾಸವಾಗಿದ್ದರೆ ಅವರಿಗೆ ಹಣ ಜಮೆಯಾಗುವುದಿಲ್ಲ. ಫಲಾನುಭವಿಗಳು ಎಲ್ಲಾ ಅರ್ಹತೆ ಪಡೆದಿದ್ದರೂ ಸಹ ಡಿಬಿಟಿ ಮೂಲಕ ಹಣ ಜಮೆ ಮಾಡಲ್ಲ. ಹಾಗಾಗಿ ಯಾರ ಹೆಸರು, ತಂದೆಯ ಹೆಸರು ಮೇಲೆ ತಿಳಸಿದ ಮೂರು ದಾಖಲೆಗಳಲ್ಲಿ ಒಂದು ವೇಳೆ ವ್ಯತ್ಯಾಸವಾಗಿದ್ದರೆ ಅವರಿಗೆ ಜಮೆ ಮಾಡುವುದನ್ನು ತಡೆಹಿಡಿಯಲಾಗುವುದು. ಹೀಗಾಗಿ ಒಮ್ಮೆ ನಿಮ್ಮ ದಾಖಲೆಗಳು ಪರಿಶೀಲಿಸಿಕೊಳ್ಳುವುದು ಒಳ್ಳೆಯದು.

Annabhagya amount status check ಅನ್ನಭಾಗ್ಯ ಯೋಜನೆಯಡಿಯಲ್ಲಿ ನಿಮಗೆ ಹಣ ಜಮೆಯಾಗಿದೆಯೋ ಇಲ್ಲವೋ? ಚೆಕ್ ಮಾಡಿ

ಅನ್ನಭಾಗ್ಯ ಯೋಜನೆಯಡಿಯಲ್ಲಿ ನೋಂದಣಿ ಮಾಡಿಸಿಕೊಂಡ ಫಲಾನುಭವಿಗಳು ತಮ್ಮ ಯಾವ ಖಾತೆಗೆ ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಈ

https://ahara.kar.nic.in/lpg/

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.  ಆಗ ನಿಮಗೆ ರೇಶನ್ ಕಾರ್ಡ್ ನಮೂದಿಸಿ ಸ್ಟೇಟಸ್ ಚೆಕ್ ಮಾಡುವ ಲಿಂಕ್ ಗಳು ಕಾಣಿಸುತ್ತವೆ. ನೀವು ಯಾವ ಜಿಲ್ಲೆಯವರಾಗಿದ್ದೀರೋ ಆ ಜಿಲ್ಲೆಯ ಮೇಲ್ಗಡೆ ಇರುವ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನೀವು ಸ್ಟೇಟಸ್ ಆಫ್ ಡಿಬಿಟಿ ನೇರ ನಗದು ವರ್ಗಾವಣೆಯ ಸ್ಥಿತಿ ಪೇಜ್ ಕಾಣಿಸುತ್ತದೆ. ಅದ ಮೇಲೆ ಕ್ಲಿಕ್ ಮಾಡಿದ ನಂತರ   ತೆರೆದುಕೊಳ್ಳುವ ಪೇಜ್ ನಲ್ಲಿ ತಿಂಗಳು ಆಯ್ಕೆ ಮಾಡಿಕೊಳ್ಳಬೇಕು.  ನಿಮ್ಮ ರೇಶನ್ ಕಾರ್ಡ್ ನಮೂದಿಸಿ ಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ಹಾಕಿ  ಗೋ ಮೇಲೆ ಕ್ಲಿಕ್ ಮಾಡಿ ಸ್ಟೇಟಸ್ ಚೆಕ್ ಮಾಡಬಹುದು.

ಅಲ್ಲಿ ನಿಮ್ಮ ಹೆಸರು ಕಾಣಿಸುತ್ತದೆ. ನಂತರ ನಿಮ್ಮ ಕುಟುಂಬದಲ್ಲಿ ಎಷ್ಟು ಜನ ಸದಸ್ಯರಿದ್ದಾರೆ. ಅವರ ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ.

 

Leave a Comment