ರಾಜ್ಯದ 17 ಜಿಲ್ಲೆಗಳ ಜನರ ಖಾತೆಗೆ ಅನ್ನಭಾಗ್ಯದ ಯೋಜನೆಯಡಿ ಹಣ ಜಮೆ ಮಾಡಲಾಗಿದೆ. ಹೌದು, ನಿಮ್ಮ ಖಾತೆಗೆ ಎಷ್ಟು ಜಮೆಯಾಗಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ರಾಜ್ಯ ಕಾಂಗ್ರೆಸ್ ಸರ್ಕಾರದ ಅತ್ಯಂತ ಮಹತ್ವದ ಗ್ಯಾರೆಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿಯಲ್ಲಿ 17 ಜಿಲ್ಲೆಗಳ 1.83 ಕೋಟಿಗೂ ಅಧಿಕ ಫಲಾನುಭವಿಗಳ ಖಾತೆಗೆ ಅನ್ನಭಾಗ್ಯದ ಹಣ ಜಮೆ ಮಾಡಲಾಗಿದೆ.
ಅನ್ನಭಾಗ್ಯಯೋಜನೆಯಡಿ ಹೆಚ್ಚುರಿ 5.ಕೆ.ಜಿ ಅಕ್ಕಿಯ ಬದಲಿಗೆ ಈವರೆಗೆ 17 ಜಿಲ್ಲೆಗಳ 1.83 ಕೋಟಿಗೂ ಅಧಿಕ ಫಲಾನುಭವಿಗಳಿ ಖಾತೆಗೆ 301 ಕೋಟಿ ರೂಪಾಯಿಗೂ ಹೆಚ್ಚಿನ ಹಣವನ್ನು ಡಿಬಿಟಿ ಮೂಲಕ ಜಮೆ ಮಾಡಲಾಗಿದೆ.
ತಮಗೆಲ್ಲಾ ಗೊತ್ತಿದ್ದ ಹಾಗೆ ಅನ್ನಭಾಗ್ಯ ಯೋಜನೆಯನ್ನು ಜುಲೈ10 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಚಾಲನೆ ನೀಡಿದ್ದರು. ಬಿಪಿಎಲ್ ಕಾರ್ಡ್ ಹಾಗೂ ಅಂತ್ಯೋದಯ ಕುಟುಂಬದ ಪ್ರತಿ ಸದಸ್ಯರ ಬ್ಯಾಂಕ್ ಖಾತೆಗಳಿಗೆ ತಲಾ 170 ರೂಪಾಯಿಯಂತೆ ಹಣವನ್ನು ಡಿಬಿಟಿ ಮೂಲಕ ಪಾವತಿಸಲಾಗುತ್ತಿದೆ.
ಆಹಾರ ಇಲಾಖೆಯ ಮಾಹಿತಿ ಪ್ರಕಾರ ಇಲ್ಲಿಯವರೆಗೆ ಬೆಂಗಳೂರು ಗ್ರಾಮಾಂತರ . ಬೆಂಗಳೂರು ನಗರ, ಬಾಗಲಕೋಟೆ, ಮೈಸೂರು, ಕೋಲಾರ, ಚಿತ್ರದುರ್ಗ, ದಾವಣಗೆರೆ, ಕಲಬುರಗಿ, ಯಾದಗಿರಿ, ಕೊಪ್ಪಳ ಚಿಕ್ಕಮಗಳೂರು ಬಳ್ಳಾರಿ ಸೇರಿದಂತೆ ಒಟ್ಟು 17 ಜಿಲ್ಲೆಗಳ ಫಲಾನುಭವಿಗಳ ಖಾತೆಗೆ ಅನ್ನಭಾಗ್ಯದ ಹಣ ಜಮೆ ಮಾಡಲಾಗಿದೆ.
ಇದನ್ನೂ ಓದಿ : ಈ ದಿನ ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆ- ಲಿಸ್ಟ್ ನಲ್ಲಿ ನಿಮ್ಮ ಹೆಸರಿದೆಯೇ ? ಇಲ್ಲೇ ಚೆಕ್ ಮಾಡಿ
17 ಜಿಲ್ಲೆಯ 1.83 ಕೋಟಿಗೂ ಅಧಿಕ ಫಲಾನುಭವಿಗಳಿಗೆ 301 ಕೋಟಿ ರೂಪಾಯಿಗಳನ್ನು ಪಾವತಿ ಮಾಡಲಾಗಿದೆ ಎಂದು ಆಹಾರಇಲಾಖೆಯ ಆಯುಕ್ತೆ ಎಂ. ಕನಗವಲ್ಲಿ ಅವರು ಮಾಹಿತಿ ನೀಡಿದ್ದಾರೆ.
ಯಾವ ಜಿಲ್ಲೆಯ ಫಲಾನುಭವಿಗಳಿಗೆ ಜಮೆಯಾಗಿಲ್ಲವೋ ಆ ಫಲಾನುಭವಿಗಳ ಖಾತೆಗೆ ಇನ್ನೆರಡು ದಿನಗಳಲ್ಲಿ ಡಿಬಿಟಿ ಮೂಲಕ ಜಮೆ ಮಾಡಲಾಗುವುದು. ವಿಜನಗರ, ತುಮಕೂರು, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಫಲಾನುಭವಿಗಳಿಗೆ ನಾಲ್ಕು ದಿನಗಳಲ್ಲಿ ಜಮೆ ಮೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಅನ್ನಭಾಗ್ಯದ ಹಣ ನಿಮಗೆಷ್ಟು ಜಮೆಯಾಗಿದೆ? ಮೊಬೈಲ್ ನಲ್ಲಿ ಒಂದೇ ನಿಮಿಷದಲ್ಲಿ ಚೆಕ್ ಮಾಡಿ
ಅನ್ನಭಾಗ್ಯದ ಯೋಜನೆಯಡಿಯಲ್ಲಿತಮಗೆಷ್ಟು ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಆಹಾರ ಇಲಾಖೆಯ ಈ
https://ahara.kar.nic.in/lpg/
ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಆಹಾರ, ನಾಗರಿಕ ಸರಬರಾಜು ಮ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ವೆಬ್ ಪುಟ ತೆರೆದುಕೊಳ್ಲುತ್ತದೆ. ಅದರಲ್ಲಿ ಕಂದಾಯ ವಲಯವಾರು ಮೂರು ವಿಭಾಗಗಳು ಕಾಣಿಸುತ್ತದೆ. ಅದರಲ್ಲಿ ನಿಮ್ಮ ಜಿಲ್ಲೆ ಯಾವ ವಿಭಾಗದಲ್ಲಿ ಬರುತ್ತದೆ ಆ ವಿಭಾಗದ ಮೇಲ್ಗಡೆ ಕಾಣಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ನೇರ ನಗದು ವರ್ಗಾವಣೆಯ ಸ್ಥಿತಿ (status of DBT) ಕಾಣಿಸುತ್ತದೆ. ಅದರ ಮೇಲೆ ಕ್ಲಿಕ್ ಮಾಡಬೇಕು. ಮಾಡಬೇಕು. ನಂತರ ನಿಮಗೆ ವರ್ಷ, ತಿಂಗಳು ಕಾಣಿಸುತ್ತದೆ. ಅದರ ಕೆಳಗಡೆ ನಿಮ್ಮ ರೇಶನ್ ಕಾರ್ಡ್ ಹಾಕಬೇಕು. ಅಲ್ಲಿ ಕಾಣುವ ಕ್ಯಾಪ್ಚಾ ಕೋಡ್ ನ್ನು ನಮೂದಿಸಿ ಗೋ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮ್ಮ ರೇಶನ್ ಕಾರ್ಡ್ ನಲ್ಲಿರುವಮನೆಯ ಯಜಮಾನಿ, ಆಧಾರ್ ಕಾರ್ಡ್ ನಂಬರ್, ನಿಮ್ಮ ಮನೆಯಲ್ಲಿ ಎಷ್ಟು ಜನ ಸದಸ್ಯರನ್ನು ಸೇರಿಸಲಾಗಿದೆ ಹಾಗೂ ನಿಮಗೆ ಎಷ್ಟು ಹಣ ಜಮೆಯಾಗಿದೆ ಎಂಬ ಮಾಹಿತಿ ಕಾಣಿಸುತ್ತದೆ.
ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವವರಿಗೆ ಮಾತ್ರ ಅನ್ನಭಾಗ್ಯದ ಹಣ ಜಮೆ ಮಾಡಲಾಗಿದೆ. ಯಾರು ಎಪಿಎಲ್ ಕಾರ್ಡ್ ಹೊಂದಿದ್ದಾರೋ ಅವರ ಖಾತೆಗೆ ಹಣ ಜಮೆ ಮಾಡಿಲ್ಲ. ಈ ಯೋಜನೆಯಡಿಯಲ್ಲಿ 5 ಕೆಜಿಯ ಬದಲಾಗಿ ನೀಡುವ ಹಣವನ್ನು ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿದವರಿಗೆ ಮಾತ್ರ ಜಮೆ ಮಾಡಲಾಗಿದೆ.