ಈ ರೇಶನ್ ಕಾರ್ಡ್ ದಾರರಿಗೆ ಅನ್ನಭಾಗ್ಯದ ಹಣ ಜಮೆ

Written by Ramlinganna

Updated on:

Annabhagya scheme money is deposited ಐದು ಕೆಜಿ ಆಹಾರ ಧಾನ್ಯಕ್ಕೆ ಬದಲಾಗಿ ಪ್ರತಿ ಕೆಜಿಗೆ 34 ರೂಪಾಯಿಯಂತೆ ರೇಶನ್ ಕಾರ್ಡ್ ನಲ್ಲಿರುವ ಕುಟುಂಬದ ಸದಸ್ಯರ ಸಂಖ್ಯೆಗನುಸಾರವಾಗಿ ಕುಟುಂಬದ ಮುಖ್ಯಸ್ಥರ ಖಾತೆಗೆ ಹಣ ಜಮೆ ಮಾಡಲಾಗಿದೆ.

ಹೌದು, ಚಿಕ್ಕಮಗಳೂರು ಜಿಲ್ಲೆಯ ಫಲಾನುಭವಿಗಳ ಖಾತೆಗೆ 11.58 ಕೋಟಿ ರೂಪಾಯಿಯನ್ನು ಜಮೆ ಮಾಡಲಾಗಿದೆ ಐದು ಕೆಜಿ ಆಹಾರ ಧಾನ್ಯಕ್ಕೆ ಬದಲಾಗಿ ಪ್ರತಿ ಕೆಜಿಗೆ 34 ರೂಪಾಯಿಗಳಂತೆ ಜಿಲ್ಲೆಯ 2,13,257 ಪಡಿತರ ಚೀಟಿದಾರರ ಮುಖ್ಯಸ್ಥರ ಖಾತೆಗೆ 11,58,06,720 ರೂಪಾಯಿ ಸಂದಾಯವಾಗಿದೆ ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಅನ್ನಭಾಗ್ಯ ಯೋಜನೆಗೆ ಜಿಲ್ಲೆಯಲ್ಲಿನ ಎಎವೈ ಮತ್ತು ಪಿಹೆಚ್.ಹೆಚ್ ಫಲಾನುಭವಿಗಳಿಗೆ ಪ್ರತಿ ತಿಂಗಳು ಹೆಚ್ಚುವರಿಯಾಗಿ ವಿತರಿಸಲಾಗುವ 5 ಕೆಜಿ ಆಹಾರ ಧಾನ್ಯಕ್ಕೆ ಬದಲಾಗಿ ಕುಟುಂಬದ ಮಹಿಳಾ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಜಮೆ ಮಾಡಲಾಗುತ್ತಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ 25,682 ಪಡಿತರ ಚೀಟಿಗಳು ನಿಷ್ಕ್ರೀಯವಾಗಿವೆ. ಈ ಪೈಕೆ 7731 ಪಡಿತರ ಚೀಟಿದಾರರು ನಿಷ್ಕ್ರೀಯ ಬ್ಯಾಂಕ್ ಖಾತೆಯನ್ನು ಹೊಂದಿದ್ದಾರೆ. 17,856 ಪಡಿತರ ಚೀಟಿದಾರರರು ಬ್ಯಾಂಕ್ ಖಾತೆಯನ್ನೇ ಹೊಂದಿಲ್ಲ. 95 ಪಡಿತರ ಚೀಟಿದಾರರ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಲಿಂಕ್ ಆಗಿಲ್ಲ ಈ ಕಾರಣಕ್ಕಾಗಿ ಈ ಪಡಿತರ ಚೀಟಿದಾರರ ಖಾತೆಗೆ ಹಣ ಜಮಾ ಆಗಿಲ್ಲ.

ಹೊಸದಾಗಿ ಬ್ಯಾಂಕ್ ಖಾತೆ ಎಲ್ಲಿ ತೆರೆಯಬೇಕು?

ಹೊಸದಾಗಿ ಉಳಿತಾಯ ಖಾತೆ ತೆರೆಯಲು ಪಡಿತರ ಚೀಟಿದಾರರಿಗೆ ಅನುಕೂಲವಾಗಲು ಎಲ್ಲಾ ತಾಲೂಕು ಕಚೇರಿ, ಅಂಚೆ ಕಚೇರಿಗಳ ಮೂಲಕ ಐಐಪಿಬಿ (ಇಂಡಿಯನ್ ಪೋಸ್ಟಲ್ ಪೇಮೆಂಟ್ ಬ್ಯಾಂಕಿಂಗ್) ಅಂಚೆ ಖಾತೆ ತೆರೆಯುವ ಕೇಂದ್ರ ತೆರೆಯಲಾಗಿದೆ.

ಇದನ್ನೂ ಓದಿ ಜುಲೈ 27 ರಂದು ಪಿಎಂ ಕಿಸಾನ್ 14ನೇ ಕಂತಿನ ಹಣ ರೈತರ ಖಾತೆಗೆ ಜಮೆ ಯಾರ್ಯಾರಿಗೆ ಜಮೆಯಾಗಲಿದೆ ಚೆಕ್ ಮಾಡಿ

ಎಲ್ಲಾ ಅಂಚೆ ಕಚೇರಿಗಳಲ್ಲಿ ಐಪಿಪಿಬಿ (ಇಂಡಿಯನ್ ಪೋಸ್ಟಲ್ ಪೇಮೆಂಟ್ ಬ್ಯಾಂಕಿಂಗ್) ಮೂಲಕ ಖಾತೆಯನ್ನು ತೆರೆಯಬಹುದಾಗಿದೆ ಎಂದು ತಿಳಿಸಿದ್ದಾರೆ.

ಆಧಾರ್ ಕಾರ್ಡ್  ಗೆ ಬ್ಯಾಂಕ್ ಖಾತೆಗೆ ಲಿಂಕ್ ಮಾಡದವರೇನು ಮಾಡಬೇಕು?

ಆಧಾರ್ ಸಂಖ್ಯೆಯನ್ನು ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಗೆ ಕೆಲವರು ಲಿಂಕ್ ಮಾಡಿಲ್ಲ. ಪಡಿತರ ಚೀಟಿಯಲ್ಲಿ ಒಂದಕ್ಕಿಂತ ಹೆಚ್ಚು ಮುಖ್ಯಸ್ಥರಿದ್ದಾಗ ಅಥವಾ ಮುಖ್ಯಸ್ಥರೇ ಇಲ್ಲದಿದ್ದ ಸಂದರ್ಭದಲ್ಲಿ, ಆಧಾರ್ ಸಂಖ್ಯೆಯನ್ನು ತಪ್ಪಾಗಿ ನಮೂಸಿದಲ್ಲಿ, ಬ್ಯಾಂಕಿನಲ್ಲಿ ಇಕೆವೈಸಿ ಪೂರ್ಣಗೊಳಿಸದಿರುವಾಗ, ಕಳೆದ ಮೂರು ತಿಂಗಳಲ್ಲಿ ಒಂದು ತಿಂಗಳಾದರೂ ಪಡಿತರ ಪಡೆಯದಿದ್ದಲ್ಲಿ ಈ ಕಾರಣಗಳಿಂದ ಪಡಿತರ ಚೀಟಿದಾರರಿಗೆ ಹಣ ಜಮೆಯಾಗದಿರುವುದರಿಂದ ಅಂತಹ ಪಡಿತರ ಚೀಟಿದಾರರು ಬ್ಯಾಂಕಿಗೆ ಭೇಟಿ ನೀಡಿ ತಮ್ಮ ಮೊಬೈಲ್ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ಲಿಂಕ್ ಮಾಡಿಸಿ ಖಾತೆಯನ್ನು ಸಕ್ರಿಯಗೊಳಿಸಿದ್ದಲ್ಲಿ ಮಾತ್ರ ಆಗಸ್ಟ್ ತಿಂಗಳಲ್ಲಿ  ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದ್ದಾರೆ.

Annabhagya scheme money is deposited ಕುಟುಂಬದ ಮುಖ್ಯಸ್ಥರ ಖಾತೆಗೆ ಅನ್ನಭಾಗ್ಯದ ಹಣ ಜಮೆ

ಪಡಿತರ ಚೀಟಿಯಲ್ಲಿ ನಮೂದಿಸಿದ ಕುಟುಂಬದ ಮುಖ್ಯಸ್ಥರ ಖಾತೆಗೆ ಅನ್ನಭಾಗ್ಯದ ಹಣ ಜಮೆ ಮಾಡಲಾಗುವುದು.

ಯಾರಿಗೆ ಎಷ್ಟು ಹಣ ಜಮೆ ಮಾಡಲಾಗುವುದು?

ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವವರಿಗೆ ಅನ್ನಭಾಗ್ಯದ ಹಣ ಜಮೆ ಮಾಡಲಾಗುವುದು. ಉದಾಹರಣೆಗೆ ಒಂದು ಪತಿ ಪತ್ನಿ ಹಾಗೂ ಇಬ್ಬರು ಮಕ್ಕಳೂ ಒಟ್ಟು ನಾಲ್ಕು ಜನ ಸದಸ್ಯರಿಗೆ ಪ್ರತಿ ಕೆಜಿಗೆ 34 ರೂಪಾಯಿಯಂತೆ ಐದು ಕೆಜಿಗೆ 170 ರೂಪಾಯಿ ಒಬ್ಬರಿಗೆ ಇದೇ ರೀತಿ ನಾಲ್ಕು ಜನ ಸದಸ್ಯರಿಗೆ 680 ರೂಪಾಯಿ ಜಮೆ ಮಾಡಲಾಗುವುದು. ಅದೇ ರೀತಿ ಐದು ಜನ ಸದಸ್ಯರಿದ್ದರೆ 850 ರೂಪಾಯಿ ಜಮೆ ಮಾಡಲಾಗುವುದು.

Leave a Comment