ಅನ್ನಭಾಗ್ಯ ಯೋಜನೆಯಡಿ ನೋಂದಣಿ ಮಾಡಿಸಿದ ಫಲಾನುಭವಿಗಳು ತಮಗೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಹೌದು, ನಿಮ್ಮ ಖಾತೆಗೆ ಹಣ ಜಮೆಯಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಲು ಈಗ ಬ್ಯಾಂಕಿಗೆ ಹೋಗಬೇಕಿಲ್ಲ. ಪಾಸ್ ಬುಕ್ ನಲ್ಲಿ ಎಂಟ್ರಿ ಮಾಡಿಸುವ ಅಗತ್ಯವೂ ಇಲ್ಲ.
ಜುಲೈ, ಆಗಸ್ಟ್, ಸೆಪ್ಟೆಂಬರ್ ಹಾಗೂ ಅಕ್ಟೋಬರ ತಿಂಗಳ ಅನ್ನಭಾಗ್ಯ ಯೋಜನೆಯ ಹಣ ನಿಮಗೆ ಯಾವಾಗ ಎಷ್ಟು ಜಮೆಯಾಗಿದೆ ಎಂಬುದನ್ನು ಮನೆಯಲ್ಲಿಯೇ ಕುಳಿತು ನಿಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.
ಅನ್ನಭಾಗ್ಯ ಯೋಜನೆಯ ಹಣ ಜಮೆ ಸ್ಟೇಟಸ್ ಮೊಬೈಲ್ ನಲ್ಲೇ ಚೆಕ್ ಮಾಡಿ
ಅನ್ನ ಭಾಗ್ಯ ಜಮೆಯ ಸ್ಟೇಟಸ್ ಮೊಬೈಲ್ ನಲ್ಲಿ ಚೆಕ್ ಮಾಡಲು ಈ
https://ahara.kar.nic.in/lpg/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಕರ್ನಾಟಕದ ವಿಭಾಗವಾರು ಜಿಲ್ಲೆಗಳು ಕಾಣಿಸುತ್ತದೆ. ಅದರಲ್ಲಿ ನಿಮ್ಮ ಜಿಲ್ಲೆಯ ಮೇಲ್ಗಡೆ ಇರುವ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ನೀಮಗೆ ಕೆಲವು ಆಯ್ಕೆಗಳು ಕಾಣಿಸುತ್ತವೆ. ಹೊಸ ಪಡಿತರ ಚೀಟಿ ಸಲ್ಲಿಸಲಾದ ಅರ್ಜಿಯ ಸ್ಥಿತಿ, ಪಡಿತರ ಚೀಟಿ ವಿವರ, ಪಡಿತರ ಚೀಟಿಯ ಬದಲಾವಣೆ ಕೋರಿಕೆ ಸ್ಥಿತಿ, ಪಡಿತರ ನೀರಾಕರಣೆ ನೋಂದಣಿ, ಹಾಗೂ Sttus of DBT ನೇರ ನಗದು ವರ್ಗಾವಣೆಯ ಸ್ಥಿತಿ (DBT) ಕಾಣಿಸುತ್ತದೆ.
ಅದರ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ಓಪನ್ ಆಗುತ್ತದೆ. ಅಲ್ಲಿ ನಿಮಗೆ ಈಗಾಗಲೇ ವರ್ಷ 2023 ಕಾಣಿಸುತ್ತದೆ. ತಿಂಗಳು ಮುಂದೆ ಯಾವ ತಿಂಗಳು ಎಷ್ಟು ಹಣ ಜಮೆಯಾಗಿದೆ ಎಂಬುದನ್ನು ಚೆಕ್ ಮಾಡಲು ಆ ತಿಂಗಳು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ಆರ್.ಸಿ ನಂಬರ್ (ರೇಶನ್ ಕಾರ್ಡ್ ನಂಬರ್) ನಮೂದಿಸಬೇಕು. ಇದಾದ ನಂತರಅಲ್ಲಿ ಕಾಣುವ ಕ್ಯಾಪ್ಚ್ಯಾ ಕೋಡ್ ನಮೂದಿಸಿ Go ಮೇಲೆ ಕ್ಲಿಕ್ ಮಾಡಬೇಕು. ಆಗ ನಿಮಗೆ ಅನ್ನಭಾಗ್ಯ ಯೋಜನೆಯಡಿಯಲ್ಲಿ ಎಷ್ಟು ಹಣ ಜಮೆಯಾಗಿದೆ ಎಂಬುದು ಕಾಣಿಸುತ್ತದೆ.
ಅನ್ನಭಾಗ್ಯ ಯೋಜನೆಯಡಿ ಯಾರಿಗೆ ಎಷ್ಟು ಹಣ ಜಮೆಯಾಗುತ್ತದೆ?
ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವವರಿಗೆ ಮಾತ್ರ ಅನ್ನಭಾಗ್ಯ ಯೋಜನೆಯ ಹಣ ಜಮೆಯಾಗುತ್ತದೆ. ಹೌದು ಐದು ಕೆಜಿ ಅಕ್ಕಿಯ ಬದಲಾಗಿ ಹೆಚ್ಚುವರಿ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ.
ಇದನ್ನೂ ಓದಿ : ಗೃಹಲಕ್ಷ್ಮೀ ಯೋಜನೆಯ ಅರ್ಹ ಮತ್ತು ಅನರ್ಹರ ಪಟ್ಟಿ ಬಿಡುಗಡೆ- ಲಿಸ್ಟ್ ನಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಒಂದು ಕುಟುಂಬದಲ್ಲಿ ನಾಲ್ಕು ಜನ ಅಂದರೆ ಪತಿ ಪತ್ನಿ, ಇಬ್ಬರು ಮಕ್ಕಳಿದ್ದರೆ ಒಟ್ಟು 680 ರೂಪಾಯಿ ಜಮೆಯಾಗಲಿದೆ. ಪತಿ, ಪತ್ನಿ ಹಾಗೂ ಮೂವರು ಮಕ್ಕಳಿದ್ದರೆ ಒಟ್ಟು ಪ್ರತಿ ತಿಂಗಳು 850 ರೂಪಾಯಿ ಹಣ ಜಮೆಯಾಗಲಿದೆ.
ಅಕ್ಟೋಬರ್ 18 ರವರೆಗೆ ಪಡಿತರ ಚೀಟಿಯಲ್ಲಿ ಹೆಚ್ಚುವರಿ ಫಲಾನುಭವಿಗಳ ಸೇರ್ಪಡೆಗೆ ಅವಕಾಶ
ಆಹಾರ, ನಾಗರಿಕ ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಪಡಿತ ಚೀಟಿಯಲ್ಲಿನ ಫಲಾನುಭವಿಗಳ ಜಿಎಸ್ಸಿ ತಿದ್ದುಪಡಿ ಹಾಗೂ ಹೆಚ್ಚುವರಿ ಫಲಾನುಭವಿಗಳ ಹೆಸರನ್ನು ಸೇರ್ಪಡೆಗೆ ಅರ್ಜಿ ಸಲ್ಲಿಸಲು ಇದೇ ಅಕ್ಟೋಬರ್ 18 ರವರೆಗೆ ಮೂರು ದಿನಗಳ ಕಾಲ ಪ್ರತಿ ದಿನ ಬೆಳಗ್ಗ10 ರಿಂದ ಸಂಜೆ 7 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕಲಬುರಗಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಸದಸ್ಯರ ಹೆಸರು ಸೇರ್ಪಡೆ, ತಿದ್ದುಪಡಿಯನ್ನು ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಅಕ್ಟೋಬರ್ 18 ರವರೆಗೆ ಮಾಡಿಸಬಹುದು. ಗ್ರಾಮ ಒನ್ ಕೇಂದ್ರಗಳಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಇದನ್ನು ಹೊರತುಪಡಿಸಿ ಬೇರೆ ಇನ್ಯಾವುದೇ ಆನ್ಲೈನ್ ಸೆಂಟರ್ ಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.