Application invited Anganawadi job ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಾಗಿದೆ.
ಗದಗ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿಯಿರುವ 32 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 1 ಮಿನಿ ಅಂಗನವಾಡಿ ಕಾರ್ಯಕರ್ತೆಯ ಹಾಗೂ 93 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಗದಗ ಕಚೇಯಿಂದಲೇ ಪಡೆಯಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಏಪ್ರೀಲ್ 26 ರೊಳಗಾಗಿ ಗದಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Application invited Anganawadi job ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಗಳ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 15 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 51 ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಯನ್ನು ಪಟ್ಟಣದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಪಡೆದು ಅಗತ್ಯ ದಾಖಲಾತಿಗಳೊಂದಿಗೆ ಭರ್ತಿ ಮಾಡಿ ಏಪ್ರೀಲ್ 24 ರ ಸಂಜೆ 5.30 ಗಂಟೆಯೊಳಗೆ ಅದೇ ಕಚೇರಿಗೆ ಸಲ್ಲಿಸಬೇಕು.
ಇದನ್ನೂ ಓದಿ : 200 ಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
ಹೆಚ್ಚಿನ ಮಾಹಿತಿಗಾಗಿ 08376 282243 ಗೆ ಸಂಪರ್ಕಿಸಲು ಹಿರೇಕೇರೂರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಆಹ್ವಾನ
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕತ್ರೆಯರ ಹುದ್ದೆ 3 , ಮಿನಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ 2 ಹಾಗೂ 25 ಸಹಾಯಕಿಯರ ಹುದ್ದೆಗಳಿಗೆ ಗೌರವ ಸೇವೆಯ ಆಧಾರದ ಮೇಲೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಂದ ಆಫ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಯನ್ನು ಕಚೇರಿ ವೇಳೆಯಲ್ಲಿ ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಪಡೆದು ಏಪ್ರೀಲ್ 18 ರ ಸಂಜೆ 5.30 ಗಂಟೆಯೊಳಗೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಬೇಕು.
ಇದನ್ನೂ ಓದಿ : ಪಿಎಂ ಕಿಸಾನ್ ಯೋಜನೆಯಡಿ ಈ ರೈತರಿಗೆ 10 ಸಾವಿರ ಜಮೆ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲೆ ಚೆಕ್ ಮಾಡಿ
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಚಿಂತಾಮಣಿ ಇಲ್ಲಿಗೆ ಕಚೇರಿ ವೇಳೆಯಲ್ಲಿ ದೂರವಾಣಿ ಸಂಖ್ಯೆ 08154 255589 ನ್ನು ಸಂಪರ್ಕಿಸಬಹುದು ಎಂದು ಚಿಂತಾಮಣಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ
ಹುಬ್ಬಳ್ಳಿ ಗ್ರಾಮೀಣ ತಾಲೂಕಿನಲ್ಲಿ 2022-23ನೇ ಸಾಲಿನಲ್ಲಿ ಖಾಲಿಯಿರುವ 8 ಹೊಸ ಅಂಗನವಾಡಿ ಕೇಂದ್ರಗಳಿಗೆ ಹಾಗೂ1 ಹಳೆಯ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರ ಹುದ್ದೆಗೆ ಮತ್ತು 8 ಹೊಸ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರನ್ನು ಆಯ್ಕೆ ಮಾಡಲು ಸ್ಥಳೀಯ ಅರ್ಹ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಹುಬ್ಬಳ್ಳಿ ಗ್ರಾಮೀಣ, ಸ್ತ್ರೀ ಶಕ್ತಿ ಭವನ, ಸಾಯಿನಗರ ರೋಡ, ಉಣಕಲ್ ಕ್ರಾಸ್, ಉಣಕಲ್, ಹುಬ್ಬಳ್ಳಿ ಪಡೆದುಕೊಳ್ಳಬಹುದು.
ಮಾರ್ಚ್ 24 ರಿಂದ ಏಪ್ರೀಲ್22 ರವರೆಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹುಬ್ಬಳ್ಳಿ ಗ್ರಾಮೀಣ ಕಚೇರಿಯನ್ನು ಸಂಪರ್ಕಿಸಬೇಕೆಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕರ್ತೆ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ
ಬಾಗಲಕೋಟೆ ಮತ್ತು ಜಮಖಂಡಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬಾಗಲಕೋಟೆ ತಾಲೂಕಿನಲ್ಲಿ 31 ಅಂಗನವಾಡಿು ಕಾರ್ಯಕರ್ತೆ ಹಾಗೂ 81 ಸಹಾಯಕಿಯರ ಹುದ್ದೆಗಳು ಖಾಲಿಯಿರುತ್ತವೆ. ಅರ್ಜಿ ಸಲ್ಲಿಸುವ ಕೊನೆಯ ದಿನ ಏಪ್ರೀಲ್ 24 ಆಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶುಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಬಾಗಲಕೋಟೆ 08354 295293, ಜಮಖಂಡಿ 08353 220265 ಗೆ ಸಂಪರ್ಕಿಸಲು ಕೋರಲಾಗಿದೆ.