Application invited for Accommodation : 2018-19ನೇ ಸಾಲಿಗೆ ನಿಗದಿಪಡಿಸಿದ ಗುರಿಯಂತೆ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರಿಗೆ ವಸತಿ ಸೌಲಭ್ಯಕ್ಕಾಗಿ ವಸತಿ ರಹಿತ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
2018-19ನೇ ಸಾಲಿಗೆ ನಿಗದಿಪಡಿಸಿದ ಗುರಿಯಂತೆ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರಿಗೆ ವಸತಿ ಸೌಲಭ್ಯಕ್ಕಾಗಿ ( Accommodation ) ಅಲೆಮಾರಿ/ಅರೆ ಅಲೆಮಾರಿ ಜನಾಂಗದ ವಸತಿ ರಹಿತ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
Application invited for Accommodation ವಸತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ನಿಗದಿಪಡಿಸಿದ ಗುರಿಗನುಗುಣವಾಗಿ 43 ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಹ ಫಲಾನುಭವಿಗಳು ಸಂಬಂಧಪಟ್ಟ ಆಯಾ ತಾಲೂಕುಗಳ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ನಿಗದಿತ ಅರ್ಜಿ ನಮೂನೆಯ ಪಡೆದು ಭರ್ತಿ ಮಾಡಿ ಅರ್ಜಿಯೊಂದಿಗೆ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಫಲಾನುಭವಿಯು ಸ್ವಂತ ನಿವೇಶನ ಹೊಂದಿರುವ ದಾಖಲಾತಿ ಪ್ರತಿ, ತಹಶೀಲ್ದಾರರಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಹಾಗೂ ವಾಸಸ್ಥಳ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‍ಬುಕ್ ಪ್ರತಿ, ನಿವೇಶನದ ಖಾತಾ ಪ್ರತಿಗಳ ದಾಖಲಾತಿಗಳು ಹಾಗೂ ಎರಡು ಭಾವಚಿತ್ರಗಳೊಂದಿಗೆ 2021ರ ಏಪ್ರಿಲ್ 7 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಇದನ್ನೂ ಓದಿ : 124 ಕೋಟಿ ಬೆಳೆ ವಿಮೆ ಬಿಡುಗಡೆ: ನಿಮಗೆಷ್ಟು ಜಮೆಯಾಗಿದೆ? ಚೆಕ್ ಮಾಡಿ
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಆಯಾ ತಾಲೂಕುಗಳ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ (ಕಚೇರಿ ವೇಳೆಯಲ್ಲಿ) ಸಂಪರ್ಕಿಸಲು ಕೋರಲಾಗಿದೆ.
ನಿಮ್ಮ ಮಕ್ಕಳಿಗೆ ಸ್ಕಾಲರಶಿಪ್ ಬಂದಿದೆಯೇ? ಮೊಬೈಲ್ ನಲ್ಲಿ ಹೀಗೆ ಸ್ಟೇಟಸ್ ಚೆಕ್ ಮಾಡಿ
ಶಾಲಾ ಮಕ್ಕಳ ಸ್ಕಾಲರ್ ಶಿಪ್ ಸ್ಟೇಟಸನ್ನು ಮಕ್ಕಳ ಪಾಲಕರು ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ರಾಜ್ಯ ಸರ್ಕಾರದ ವತಿಯಿಂದ ಮಕ್ಕಳಿಗೆ ಒಂದನೇ ತರಗತಿಯಿಂದ ಪ್ರತಿ ವರ್ಷ ಮಕ್ಕಳಿಗೆ ಶಿಷ್ಯವೇತನ ನೀಡುತ್ತದೆ. ಶಿಷ್ಯವೇತನಕ್ಕಾಗಿ ಮಕ್ಕಳು ಒಂದು ಸಲ ಅರ್ಜಿ ಸಲ್ಲಿಸಿದರೆ ಸಾಕು, ಒಂದರಿಂದ 10ನೇ ತರಗತಿಯ ವರೆಗೆ ಪ್ರತಿ ವರ್ಷ ಮಕ್ಕಳ ಬ್ಯಾಂಕ್ ಖಾತೆಗೆ ಶಿಷ್ಯವೇತನ ಜಮೆಯಾಗುತ್ತದೆ.
ಒಂದನೇ ತರಗತಿಯಿಂದ 10ನೇ ತರಗತಿ ವಿದ್ಯಾರ್ಥಿಗಳು ಮೊಬೈಲ್ ನಲ್ಲೇ ತಮ್ಮ ಸ್ಕಾಲರ್ ಶಿಪ್ ಸ್ಟೇಟಸನ್ನು ನೋಡಬಹುದು.
ಸ್ಟೇಟಸ್ ಚೆಕ್ ಮಾಡುವುದು ಹೇಗೆ?
ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸಿದ ಮಕ್ಕಳ ಪಾಲಕರು ತಮ್ಮ ಮೊಬೈಲ್ ನಲ್ಲಿ ಮಕ್ಕಳಿಗೆ ಪ್ರತಿ ವರ್ಷ ಎಷ್ಟು ಸ್ಕಾಲರ್ ಶಿಪ್ ಜಮೆಯಾಗುತ್ತಿದೆ ಎಂಬುದನ್ನು ಚೆಕ್ ಮಾಡಲು ಈ
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಯೋಜನೆಗಳು ಕೆಳಕಡೆ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟಪಂಗಡಗಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ, ಕಾರ್ಮಿಕ ಇಲಾಖೆ, ವಿಕಲಚೇತನರ ಕಲ್ಯಾಣ ಇಲಾಖೆಗಳು ಕಾಣುತ್ತದೆ.ನೀವು ಯಾವ ಇಲಾಖೆ ಅಡಿಯಲ್ಲಿ ಬರುತ್ತೀರೋ ಆ ಇಲಾಖೆ ಮೇಲೆ ಕ್ಲಿಕ್ ಮಾಡಬೇಕು. ನಂತರ ಟ್ರ್ಯಾಕ್ ಸ್ಟುಡೆಂಟ್ ಸ್ಕಾಲರ್ಶಿಪ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಬೇಕು. ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ.
ಅಲ್ಲಿ ವಿದ್ಯಾರ್ಥಿಯ SATS ಗುರುತಿನ ಸಂಖ್ಯೆಯನ್ನು ನಮೂದಿಸಿ ಬಾಕ್ಸ್ ನಲ್ಲಿ ವಿದ್ಯಾರ್ಥಿಗಳ ಮಾರ್ಕ್ಸ್ ಕಾರ್ಡ್ ನಲ್ಲಿರುವ ಎಸ್.ಟಿ.ಎಸ್ ನಂಬರ್ ನಮೂದಿಸಬೇಕು. ನಂತರ ಯಾವ ವರ್ಷದ ಸ್ಕಾಲರ್ ಶಿಪ್ ಸ್ಟೇಟಸ್ ಚೆಕ್ ಮಾಡಬೇಕೆಂದುಕೊಂಡಿದ್ದೀರೋ ಅದನ್ನು ಆಯ್ಕೆಮಾಡಿಕೊಳ್ಳಬೇಕು. ನಂತರ ಹುಡುಕು ಮೇಲೆ ಕ್ಲಿಕ್ ಮಾಡಬೇಕು ಆಗ ವಿದ್ಯಾರ್ಥಿ ಅಥವಾ ವಿದ್ಯಾರ್ಥಿನಿಯ ಸ್ಯಾಟ್ಸ್ ಐಡಿ, ವಿದ್ಯಾರ್ಥಿಯ ಹೆಸರು, ಶಾಲೆಯ ಹೆಸರು, ವರ್ಗ, ಲಿಂಗ, ಎಷ್ಟು ವಿದ್ಯಾರ್ಥಿ ವೇತನ ಜಮೆಯಾಗಿದೆ ಎಂಬ ಮೆಸೆಜ್ ಕಾಣುತ್ತದೆ.