2018-19ನೇ ಸಾಲಿಗೆ ನಿಗದಿಪಡಿಸಿದ ಗುರಿಯಂತೆ ಅಲೆಮಾರಿ/ಅರೆ ಅಲೆಮಾರಿ ಜನಾಂಗದವರಿಗೆ ವಸತಿ ಸೌಲಭ್ಯಕ್ಕಾಗಿ ( Accommodation ) ಅಲೆಮಾರಿ/ಅರೆ ಅಲೆಮಾರಿ ಜನಾಂಗದ ವಸತಿ ರಹಿತ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ನಿಗದಿಪಡಿಸಿದ ಗುರಿಗನುಗುಣವಾಗಿ 43 ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಹ ಫಲಾನುಭವಿಗಳು ಸಂಬಂಧಪಟ್ಟ ಆಯಾ ತಾಲೂಕುಗಳ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ನಿಗದಿತ ಅರ್ಜಿ ನಮೂನೆಯ ಪಡೆದು ಭರ್ತಿ ಮಾಡಿ ಅರ್ಜಿಯೊಂದಿಗೆ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಫಲಾನುಭವಿಯು ಸ್ವಂತ ನಿವೇಶನ ಹೊಂದಿರುವ ದಾಖಲಾತಿ ಪ್ರತಿ, ತಹಶೀಲ್ದಾರರಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಹಾಗೂ ವಾಸಸ್ಥಳ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‍ಬುಕ್ ಪ್ರತಿ, ನಿವೇಶನದ ಖಾತಾ ಪ್ರತಿಗಳ ದಾಖಲಾತಿಗಳು ಹಾಗೂ ಎರಡು ಭಾವಚಿತ್ರಗಳೊಂದಿಗೆ 2021ರ ಏಪ್ರಿಲ್ 7 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಆಯಾ ತಾಲೂಕುಗಳ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ (ಕಚೇರಿ ವೇಳೆಯಲ್ಲಿ) ಸಂಪರ್ಕಿಸಲು ಕೋರಲಾಗಿದೆ.

Leave a Reply

Your email address will not be published. Required fields are marked *