Anganawadi workers helpers job ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಹ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆ – 7, ಹಾಗೂ ಸಹಾಯಕಿಯರ 38 ಹುದ್ದೆಗಳಿಗೆ ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಂದ ಆಫ್ ಲೈನ್ (ಭೌತಿಕವಾಗಿ) ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಯನ್ನು ಕಚೇರಿ ವೇಳೆಯಲ್ಲಿ ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಪಡೆದು ಏಪ್ರೀಲ್ 18 ರ ಸಂಜೆ 5.30 ಗಂಟೆಯೊಳಗಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಬೇಕು.
ಇದನ್ನೂಓದಿ : ಪಿಎಂ ಕಿಸಾನ್ 14ನೇ ಕಂತಿನ ಗ್ರಾಮವಾರು ಪಟ್ಟಿ ಬಿಡುಗಡೆ- ನಿಮ್ಮ ಹೆಸರಿದೆಯೇ? ಮೊಬೈಲ್ ನಲ್ಲೇ ಚೆಕ್ ಮಾಡಿ
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಅಂಬಿಕಾ ಕೆ. ಶಾಂತಮೂರ್ತಿ ಬಿಲ್ಡಿಂಗ್, ವಾಪಸಂದ್ರ ವಾರ್ಡ್ ನಂಬರ್ 02, ಚಿಕ್ಕಬಳ್ಳಾಪುರ ಇಲ್ಲಿಗೆ ಕಚೇರಿ ವೇಳೆಯಲ್ಲಿ ದೂರವಾಣಿ ಸಂಖ್ಯೆ 08156 271161 ನ್ನು ಸಂಪರ್ಕಿಸಬಹುದು ಎಂದು ಚಿಕ್ಕಬಳ್ಳಾಪುರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Anganawadi workers helpers job ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ವ್ಯಾಪ್ತಿಯಲ್ಲಿ ಖಾಲಿಯಿರುವ 6 ಅಂಗನವಾಡಿ ಕಾರ್ಯಕರ್ತೆ ಹಾಗೂ 15 ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ ಆಫ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ದೂರವಾಣಿ ಸಂಖ್ಯೆ08227 297276, 080 261267 ಗೆ ಸಂಪರ್ಕಿಸಬಹುದು.
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಗೌರವಧನ ಸೇವೆಯ ಹುದ್ದೆಗಳ ಭರ್ತಿಗಾಗಿ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ಏಪ್ರೀಲ್ 17 ಸಂಜೆ 5.30 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಂಜನಗೂಡಿನ ಶಿಶು ಅಭಿವೃದ್ಧಿ ಯೋಜನಾದಿಕಾರಿಗಳ ಕಚೇರಿ ದೂರವಾಣಿ ಸಂಖ್ಯೆ 08221 226168 ಗೆ ಸಂಪರ್ಕಿಸಲು ಕೋರಲಾಗಿದೆ.
ಇದನ್ನೂ ಓದಿ : 200 ಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ವ್ಯಾಪ್ತಿಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿ ನಮೂನೆಯನ್ನು ಏಪ್ರೀಲ್ 18 ರೊಳಗಾಗಿ ಸಲ್ಲಿಸಬೇಕು. ಅರ್ಜಿಯ ಲಕೋಟೆ ಮೇಲೆ ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಎಂದು ನಮೂದಿಸಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಕಲಘಟಗಿ ತಾಲೂಕು ಯೋಜನಾ ಕಚೇರಿಯಲ್ಲಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾ ಕಚೇರಿ , ಕಾಲಘಟಗಿ ಕಾರ್ಯಾಲಯವನ್ನು ದೂರವಾಣಿ ಸಂಖ್ಯೆ 08370 284532 ಗೆ ಸಂಪರ್ಕಿಸಲು ಕೋರಲಾಗಿದೆ.
ಹುಬ್ಬಳ್ಳಿ ಧಾರವಾಡ ತಾಲೂಕಿನಲ್ಲಿಯೂ ಅರ್ಜಿ ಆಹ್ವಾನ
ಹುಬ್ಬಳ್ಳಿ –ಧಾರವಾಡ (ಶಹರ) ತಾಲೂಕಿನ ವ್ಯಾಪ್ತಿಯಲ್ಲಿ ಖಾಲಿಯುವ ಅಂಗನವಾಡಿ, ಸಹಾಯಕಿಯ ಹುದ್ದೆಗಳ ಭರ್ತಿಗೆ ಭೌತಿಕವಾಗಿ ಆಫ್ ಲೈನ್ ಮೂಲಕ ಸ್ಥಳೀಯ ಅರ್ಹ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿತ ಅರ್ಜಿಯ ನಮೂನೆಯನ್ನು ಏಪ್ರೀಲ್ 18 ರೊಳಗೆ ಸಲ್ಲಿಸಬೇಕು.
ಶಿಶು ಅಭಿವೃದ್ಧಿ ಯೋಜನಾಧಿಗಕಾರಿಗಳ ಕಚೇರಿ, ಹುಬ್ಬಳ್ಳಿ-ಧಾರವಾಡ (ಶಹರ) ಯೋಜನಾ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನೆ, ಹುಬ್ಬಳ್ಳಿ ಧಾರವಾಡ (ಶಹರ) ಕಾರ್ಯಾಲಯ, ಕಚೇರಿ ದೂರವಾಣಿ ಸಂಖ್ಯೆ 0836 2440733 ಗೆ ಸಂಪರ್ಕಿಸಲು ಕೋರಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿಯೂ ಅರ್ಜಿ ಆಹ್ವಾನ
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕು ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಖಾಲಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಮತ್ತು ದಾಖಲೆಗಳನ್ನು ಮಾರ್ಚ್ 28 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.