ಹೈನುಗಾರಿಕೆಯಲ್ಲಿ ಆಸಕ್ತಿಯಿರುವ ರೈತರಿಗಿಲ್ಲಿದೆ ಸಂತಸದ ಸುದ್ದಿ. ರೈತರಿಗೆ ಹೈನುಗಾರಿಕೆ ಹಾಗೂ ಎಱೆಹುಳು ಗೊಬ್ಬಳ ತಯಾರಿಕೆ ಕುರಿತಂತೆ ಉಚಿತವಾಗಿ ತರಬೇತಿ ನೀಡಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ಕಲಬುರಗಿ ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ (ಕಿಟಸರ್ಡ್) ಸಂಸ್ಥೆಯಲ್ಲಿ ಕಲಬುರಗಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಉಚಿತವಾಗಿ ಹತ್ತು ದಿನಗಳ ಕಾಲ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಗ್ರಾಮೀಣ ಭಾಗದ 18 ರಿಂದ 45 ವರ್ಷದೊಳಗಿನ ಬಿ.ಪಿ.ಎಲ್. ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸಂಸ್ಥೆಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ 2021ರ ಅಕ್ಟೋಬರ್ 19 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತರಬೇತಿ ಸಂಸ್ಥೆಯಲ್ಲಿ 2021ರ ಅಕ್ಟೋಬರ್ 20 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3.30 ಗಂಟೆಯವರೆಗೆ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು.
ಇದನ್ನೂ ಓದಿ : ಪಿಎಂ ಕಿಸಾನ್ ಯೋಜನೆಯ 10ನೇ ಕಂತಿನ ಲಿಸ್ಟ್ ನಲ್ಲಿ ನಿಮ್ಮ ಹೆಸರು ಮೊಬೈಲ್ ನಲ್ಲಿಯೇ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ರೈತರು ಹೆಸರು ನೋಂದಣಿ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತರಬೇತಿ ಸಂಸ್ಥೆಯನ್ನು ಹಾಗೂ ಮೊಬೈಲ್ ಸಂಖ್ಯೆ 9886781239, 9900135705ಗಳಿಗೆ ಸಂಪರ್ಕಿಸಲು ಕೋರಲಾಗಿದೆ.
ಪಶುಪಾಲನೆಗೆ ಉಚಿತ ಸಹಾಯವಾಣಿ
ಮೇಕೆ ಸಾಕಾಣಿಕೆ, ಕೋಳಿ ಸಾಕಾಣಿಕೆ, ಹೈನುಗಾರಿಕೆ, ಮೊಲ ಸಾಕಾಣಿಕೆ ಹಾಗೂ ಹಂದಿ ಸಾಕಾಣಿಕೆ ಕುರಿತು ಸಹ ಸಂಪೂರ್ಣ ಮಾಹಿತಿ ಪಡೆಯಲು ರೈತರು ಸರ್ಕಾರದಿಂದ ಆರಂಭವಾದ ಉಚಿತ ಸಹಾಯವಾಣಿಗೆ ಕರೆ ಮಾಡಬಹುದು.. ಪಶು ಇಲಾಖೆಯ ತಜ್ಞರಿಂದ ಮಾಹಿತಿ ಪಡೆಯಲು ಬಯಸಿದ್ದರೆ ಈ ಉಚಿತ ಸಹಾಯವಾಣಿಗೆ ಕರೆ ಮಾಡಿದರೆ ಸಾಕು ನಿಮ್ಮ ಜಿಲ್ಲೆಯ, ತಾಲೂಕಿನ ಪಶು ಇಲಾಖೆಯ ಸಿಬ್ಬಂದಿಯೊಂದಿಗೆ ಸಂಪರ್ಕ ನೀಡಲಾಗುವುದು. ನಿಮಗೆ ಬೇಕಾದ ಮಾಹಿತಿ ಪಶು ಇಲಾಖೆಯ ಸಿಬ್ಬಂದಿಗಳಿಗೆ ಮನೆಯಲ್ಲಿಯೇ ಕುಳಿತು ಪಡೆಯಬಹುದು. ಅದು ಹೇಗೆ ಅಂದುಕೊಂಡಿದ್ದೀರಾ. ಇಲ್ಲಿದೆ ಸಂಪೂರ್ಣ ಮಾಹಿತಿ.
ರೈತರು ದೂರವಾಣಿ ಸಂಖ್ಯೆ 8277 100 200 (ಉಚಿತ) ಬೆಳಿಗ್ಗೆ 7 ರಿಂದ ರಾತ್ರಿ 9 ರವರೆಗೆ ಕರೆ ಮಾಡಿ ಪಶುವೈದ್ಯರು ಮತ್ತು ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಪಡೆಯಬಹುದು.
ಈ ಉಚಿತ ಸಹಾಯವಾಣಿಯಿಂದ ಹೈನುಗಾರಿಕೆ, ಕುರಿ ಮತ್ತು ಮೇಕೆ ಸಾಕಾಣಿಕೆ, ಮೊಲ ಸಾಕಾಣಿಕೆ, ಕೋಳಿ ಸಾಕಾಣಿಕೆ ಕುರಿತಂತೆ ಇಲಾಖೆಯ ತರಬೇತಿ ಕೇಂದ್ರಗಳಲ್ಲಿ ನಡೆಯುವ ತರಬೇತಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು. ಪಶುಸಂಗೋಪನಾ ಚಟುವಟಿಕೆಗಳಿಗೆ ವಿವಿಧ ಬ್ಯಾಂಕುಗಳಿಂದ ದೊರೆಯಬಹುದಾದ ಸಾಲಸೌಲಭ್ಯ ಕುರಿತು ಮಾಹಿತಿ ನೀಡಲಾಗುವುದು. ಜಾನುವಾರು ರೋಗಗಳು, ಲಸಿಕಾ ಕಾರ್ಯಕ್ರಮ ಹೀಗೂ ಜಾನುವಾರು ರೋಗ ತಡೆಗಟ್ಟಲು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು. ರೈತರು ಹೆಚ್ಚಿನ ಮಾಹಿತಿಗಾಗಿ ಪಶುಪಾಲನೆಯ ಉಚಿತ ಸಹಾಯವಾಣಿಗೆ ಕರೆ ಮಾಡಿ ಸಂಪರ್ಕಿಸಬಹುದು.