ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2022-23ನೇ ಸಾಲಿನಲ್ಲಿ ಗ್ರಾಮೀಣ ಮಹಿಳೆಯರಿಗೆ ನಾಟಿ ಕೋಳಿ ಮರಿಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು  ಈ ಯೋಜನೆ ಅಡಿಯಲ್ಲಿ ಆಯ್ಕೆಯಾಗುವ ಪ್ರತಿ ಫಲಾನುಭವಿಗೆ 5 ವಾರದ 20 ನಾಟಿ ಕೋಳಿ ಮರಿಗಳನ್ನು ಉಚಿತವಾಗಿ ವಿತರಣೆ ಮಾಡಲಾಗುವುದು. ಆಸಕ್ತರು ಅರ್ಜಿ ನಮೂನೆಯನ್ನುಹತ್ತಿರದ ಪಶು ವೈದ್ಯ ಸಂಸ್ಥೆಗಳಿಂದ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆ ಬೇಕು?

ನಾಟಿ ಕೋಳಿ ಮರಿಗಳನ್ನು ಪಡೆಯಲು ಅರ್ಜಿದಾರರ ಬಳಿ ಆಧಾರ್ ಕಾರ್ಡ್ ಇರಬೇಕು. 2 ಫೋಟೋ ಇರಬೇಕು. ಬಿಪಿಎಲ್ ಪಡಿತರ ಚೀಟಿ ಹೊಂದಿರಬೇಕು.ಸಾಮಾನ್ಯ ಫಲಾನುಭವಿ ಹೊರತುಪಡಿಸಿ ಉಳಿದ ಎಲ್ಲಾ ವರ್ಗದವರು ಜಾತಿ ಪ್ರಮಾಣ ಪತ್ರದ ನಕಲು ಪ್ರತಿಗಳನ್ನು ಹೊಂದಿರಬೇಕು.

ಅರ್ಜಿ ಎಲ್ಲಿ ಸಲ್ಲಿಸಬೇಕು?

ಹಾವೇರಿ ಜಿಲ್ಲೆಯ ಆಸಕ್ತ ಫಲಾನುಭವಿಗಳು ಅರ್ಜಿಯೊಂದಿಗೆ ಲಗತ್ತಿಸಲಾದ ದಾಖಲೆಗಳನ್ನು ಆಯಾ ತಾಲೂಕಿನ ಮುಖ್ಯ ಪಶು ವೈದ್ಯಾಧಿಕಾರಿಗಳು (ಆಡಳಿತ) ಅಥವಾ ಹತ್ತಿರದ ಪಶುವೈದ್ಯ ಸಂಸ್ಥೆಗಳನ್ನು ಸಂಪರ್ಕಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಹಾವೇರಿ ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಜುಲೈ 30 ಕೊನೆಯ ದಿನಾಂಕವಾಗಿದೆ.

ಜಾನುವಾರು ಹಾಗೂ ಇತರೆ ಉತ್ಪನ್ನಗಳ ಮಾರಾಟ ದರ ಬೇಕೆ?

ರೈತರು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಸಾರ್ವಜನಿಕರಿಗೆ ಲಭ್ಯವಿರುವ ಜಾನುವಾರು ಹಾಗೂ ಇತರೆ ಉತ್ಪನ್ನಗಳ ಮಾರಾಟ ದರವನ್ನು ತಿಳಿಯಬೇಕಾದರೆ ಈ

https://www.ahvs.kar.nic.in/kn_Sale.html

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಆಯುಕ್ತಾಲಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಎಚ್.ಎಫ್, ಜೆರ್ಸಿ, ಅಮೃತ್ ಮಹಲ್, ಹಳ್ಳಿಕಾರ್, ಹಾಗೂ ಎಮ್ಮೆ ತಳಿಯಗಳ ವೀರ್ಯ ನಳಿಕೆಯ ದರ ಪಟ್ಟಿ ತೆರೆದುಕೊಳ್ಳುತ್ತದೆ. ಘನೀಕೃತ ವೀರ್ಯ ನಳಿಕೆಗಳ ವಿತರಣಾ ಕೇಂದ್ರಗಳ ಮಾಹಿತಿಯೂ ಇದರಲ್ಲಿರುತ್ತದೆ.

ಪಶುಪಾಲನೆಯಲ್ಲಿ ಆಸಕ್ತಿಯಿದೆಯೇ?  ಪಶುಪಾಲನೆ ಕುರಿತು ಉಚಿತ ಮಾಹಿತಿ ಬೇಕೆ?

ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ವತಿಯಿಂದ ರೈತರಿಗಾಗಿ ಪ್ರಾಣಿ ಕಲ್ಯಾಣ ಸಹಾಯವಾಣಿಯನ್ನು ಆರಂಭಿಸಲಾಗಿದೆ. ಹೌದು ರೈತರು 8277 100 200 ಗೆ ಕರೆ ಮಾಡಿದರೆ ಸಾಕು, ಪಶು ಪಾಲನೆ ಕುರಿತು ರೈತರು ಮನೆಯಲ್ಲಿಯೇ ಕುಳಿತು ಮಾಹಿತಿಯನ್ನು ಪಡೆಯಬಹುದು. ಇದಕ್ಕಾಗಿ ರೈತರು ಶುಲ್ಕ ಪಾವತಿಸುವ ಅಗತ್ಯವಿಲ್ಲ.

ಇದನ್ನೂ ಓದಿ : ಭಾಗ್ಯಲಕ್ಷ್ಮೀ ಬಾಂಡ್ ಯೋಜನೆಯಡಿ ನಿಮ್ಮ ಮಗುವಿನ ಹೆಸರಿಗೆ ಎಷ್ಟು ಹಣ ಜಮೆಯಾಗಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ಮನೆಯಲ್ಲಿರುವ ಪಶುಗಳು ಅನಾರೋಗ್ಯದಿಂದ ಬಳಲುತ್ತಿದ್ದರೆ ಅಥವಾ ಇನ್ನಿತರ ಸಮಸ್ಯೆಗಳಿಂದ ಪಶುಗಳು ಬಳಲುತ್ತಿದ್ದರೆ ರೈತರು ಪ್ರಾಣಿ ಕಲ್ಯಾಣ ಸಹಾಯವಾಣಿ ನಂಬರಿಗೆ ಕರೆ ಮಾಡಬೇಕು.ಆಗ ಸಂಬಂಧಪಟ್ಟ ಅಧಿಕಾರಿಗಳಿಗೆ ಕರೆ ವರ್ಗಾಯಿಸಿ ರೈತರಿಗೆ ಅಗತ್ಯ ಮಾಹಿತಿಯನ್ನುನೀಡಲಾಗುವುದು.

ರಾಜ್ಯದಲ್ಲಿವೆ 25  ಪಶುಪಾಲನಾ ತರಬೇತಿ ಕೇಂದ್ರಗಳು

ಗ್ರಾಮೀಣ ರೈತರಿಗೆ ಕೋಳಿ ಸಾಕಾಣಿಕೆ, ಮೊಲ ಸಾಕಾಣಿಕೆ, ಹಂದಿ ಸಾಕಾಣಿಕೆ ಹಾಗೂ ಹೈನುಗಾರಿಕೆ ಕ್ಷೇತ್ರಗಳಲ್ಲಿ ನಿರಂತರವಾಗಿ ತರಬೇತಿ ನೀಡಲಾಗುತ್ತದೆ. ಪ್ರಸ್ತುತ ರಾಜ್ಯದಲ್ಲಿ 25 ತರಬೇತಿ ಕೇಂದ್ರಗಳಿವೆ. ಆಗಸ್ಟ್ ತಿಂಗಳ 2 ರಿಂದ 3 ರವರೆಗೆ ಎರಡು ದಿನಗಳ ಆಧುನಿಕ ಹೈನುಗಾರಿಕೆ ಕುರಿತು ತರಬೇತಿ ನೀಡಲಾಗುವುದು. ಅದೇ ರೀತಿ ಆಗಸ್ಟ್ 5 ರಿಂದ 6 ರವರೆಗೆ ಎರಡು ದಿನಗಳ ಕಾಲ ಕುರಿ ಮತ್ತು ಮೇಕೆ ಸಾಕಾಣಿಕೆ ಕುರಿತು ತರಬೇತಿ ನೀಡಲಾಗುವುದು.

ಆಸಕ್ತ ರೈತರು ಪಶುಪಾಲನಾ ಸಹಾಯವಾಣಿ ನಂಬರಿಗೆ ಕರೆ ಮಾಡಿ ತಮ್ಮ ಜಿಲ್ಲೆಯಲ್ಲಿ ತರಬೇತಿ ಯಾವಾಗ ಆರಂಭವಾಗುತ್ತದೆ ಹಾಗೂ ಪಶುಪಾಲನಾ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆಯಿಂದ ರೈತರಿಗೆ ಯಾವ ಯಾವ ಸೌಲಭ್ಯ ಸಿಗುತ್ತದೆ ಎಂಬ ಮಾಹಿತಿಯನ್ನು ಪಡೆಯಬಹುದು.

Leave a Reply

Your email address will not be published. Required fields are marked *