ಉಚಿತ ಮನೆ ನಿರ್ಮಾಣಕ್ಕೆ ಅರ್ಜಿ ಆಹ್ವಾನ – ಇಂದೇ ಅರ್ಜಿ

Written by Ramlinganna

Updated on:

Application invited for free house 2022-23ನೇ ಸಾಲಿಗೆ ಹೊಸದಾಗಿ ನಿಗದಿಪಡಿಸಿದ ಗುರಿಯಂತೆ ಅಲೆಮಾರಿ ಅರೆ ಅಲೆಮಾರಿ ಜನಾಂಗದರಿಗೆ ವಸತಿ ಸೌಲಭ್ಯಕ್ಕಾಗಿ ಅಲೆ ಮಾರಿ ಅರೆ ಅಲೆಮಾರಿ ಜನಾಂಗದ ವಸತಿ ರಹಿತ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ನಿಗದಿಪಡಿಸಿದ ಗುರಿಗನುಗುಣವಾಗಿ 115 ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಕಲಬುರಗಿ ಜಿಲ್ಲೆಯ ಅರ್ಹ ಫಲಾನುಭವಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳನ್ನು ಸಲ್ಲಿಸಬೇಕು.

ಆಧಾರ್ ಕಾರ್ಡ್ , ರೇಶನ್ ಕಾರ್ಡ್, ಸ್ವಂತ ನಿವೇಶನ ಹೊಂದಿರುವ ದಾಖಲಾತಿ ಪ್ರತಿ, ತಹಶೀಲ್ದಾರರಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು. ಇದರೊಂದಿಗೆ ವಾಸಸ್ಥಳ ಪ್ರಮಾಣ ಪತ್ರ  ಸಲ್ಲಿಸಬೇಕು. ಬ್ಯಾಂಕ್ ಖಾತೆಯ ಪ್ರತಿ ಇರಬೇಕು. ನಿವೇಶನದ ಖಾತಾ ಪ್ರತಿ ಇರಬೇಕು. ಹಾಗೂ ಇತ್ತೀಚಿನ ಎರಡು ಭಾವಚಿತ್ರದೊಂದಿಗೆ 2022-23 ರ ಮಾರ್ಚ್ 11 ರೊಳಗಾಗಿ ಸಂಬಂಧಪಟ್ಟ ಆಯಾ ತಾಲೂಕುಗಳ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು.

Application invited for free house  ಅಲೆಮಾರಿ, ಅರೆ ಅಲೆಮಾರಿ ಜನಾಂಗಕ್ಕೆ ವಸತಿ ಸೌಲಭ್ಯ ನೀಡಲು ಅರ್ಜಿ ಆಹ್ವಾನ

ಕೊಡಗು ಜಿಲ್ಲೆಯ ವ್ಯಾಪ್ತಿಯಲ್ಲಿರುವ ಪ್ರವರ್ಗ 1 ಕ್ಕೆ ಸೇರಿದ ಅಲೆಮಾರಿ ಅರೆ ಅಲೆಮಾರಿ ಜನಾಂಗದವರಿಗೆ ವಸತಿ ಸೌಲಭ್ಯ ಕಲ್ಲಿಸಲು ಆರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ : ಬೆಳೆ ವಿಮೆ, ಬೆಳೆ ಹಾನಿ ಹಾಗೂ ಪಿಎಂ ಕಿಸಾನ್ ಹಣ ನಿಮಗೆಷ್ಟು ಜಮೆಯಾಗಿದೆ. ಮೊಬೈಲ್ ನಲ್ಲೇ ಚೆಕ್ ಮಾಡಿ

ಅರ್ಜಿ ಸಲ್ಲಿಸಲು ಮಾರ್ಚ್ 15 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಮಡಿಕೇರಿ ದೂರವಾಣಿ ಸಂಖ್ಯೆ 08272 295628,  ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಮಡಿಕೇರಿ ಮೊಬೈಲ್ ಸಂಖ್ಯೆ8762476790 ಗೆ ಕರೆ ಮಾಡಬಹುದು.

ವಿದ್ಯಾನಿಧಿ ಯೋಜನೆಯಡಿ ಅರ್ಜಿ ಆಹ್ವಾನ (under vidya nidhu scheme application invited for scholarship)

ಯಲ್ಲೋ ಬೋರ್ಡ್ ಹೊಂದಿರುವ ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ ಚಾಲಕರ ಮಕ್ಕಳ ಮೆಟ್ರಿಕ್ ನಂತರದ ಉನ್ನತ ವಿಧ್ಯಾಬ್ಯಾಸವನ್ನು ಉತ್ತೇಜಿಸಲು ಸರ್ಕಾರವು ವಿಧ್ಯಾನಿಧಿ ಯೋಜನೆಯನ್ನು ಆರಂಭಿಸಿದೆ.

ವಿಧ್ಯಾನಿಧಿ ಯೋಜನೆಯಡಿಯಲ್ಲಿ ಕಲಬುರಗಿ ನಗರ ಹಾಗೂ ತಾಲೂಕುಗಳಲ್ಲಿನ ಯಲ್ಲೋ ಬೋರ್ಡ್ ಹೊಂದಿರುವ ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ ಚಾಲಕರ ಮಕ್ಕಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಉಪ ಸಾರಿಗೆ ಆಯುಕ್ತರು ಹಾಗೂ ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ನಿಮ್ಮ ಸರ್ವೆ ನಂಬರ್ ಅಕ್ಕಪಕ್ಕದಲ್ಲಿ ಯಾರಿಗೆ ಎಷ್ಟು ಎಕರೆ ಜಮೀನಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ಅರ್ಹ ಚಾಲಕರು ಮಕ್ಕಳು ಸೇವಾಸಿಂಧು ವೆಬ್ ಪೋರ್ಟಲ್ ಮೂಲಕ ಅಥವಾ ಗ್ರಾಮ ಒನ್, ಕರ್ನಾಟಕ ಒನ್, ಗುಲ್ಬರ್ಗ ಒನ್ ಕೇಂದ್ರಗಳಲ್ಲಿ, ಚಾಲಕರ ಚಾಲನಾ ಅನುಜ್ಞಾಪತ್ರ (ಡಿಎಲ್) ಆಧಾರ್ ಕಾರ್ಡ್ ಮತ್ತು ವಿದ್ಯಾರ್ಥಿಯ ಆಧಾರ್ ಕಾರ್ಡ್ ಮತ್ತು ರೇಶನ್ ಕಾರ್ಡ್ ದಾಖಲಾತಿಗಳೊಂದಿಗೆ

https://sevasindhu.karnataka.gov.in/Sevasindhu/Kannada

ಈ  ವೆಬ್ ಸೈಟ್ ದಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಾರ್ಶಿಕ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳ ಆಧಾರ್ ಜೋಡಿತ ಬ್ಯಾಂಕ್ ಖಾತೆಗಳಿಗೆ, ನೇರ ನಗದು ವರ್ಗಾವಣೆ ಮೂಲಕ ಪಾವತಿಸಲಾಗುತ್ತಿದ್ದು, ಕಲಬುರಗಿ ನಗರದಲ್ಲಿನ ಹಾಗೂ ತಾಲೂಕುಗಳಲ್ಲಿನ ಯಲ್ಲೋ ಬೋರ್ಡ್ ಹೊಂದಿರುವ ಟ್ಯಾಕ್ಸಿ ಚಾಲಕರು ಮತ್ತು ಆಟೋರಿಕ್ಷಾ ಚಾಲಕರು ಇದರ ಸದುಪಯೋಗ ಪಡೆಯಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment