ಉಚಿತವಾಗಿ ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ

Written by Ramlinganna

Updated on:

Application for Free poultry training ಕೋಳಿ ಸಾಕಾಣಿಕೆಯಲ್ಲಿ ಆಸಕ್ತಿಯಿರುವ ರೈತರಿಗೆ ಉಚಿತವಾಗಿ 10 ದಿನಗಳ ಕಾಲ ಕೋಳಿ ಸಾಕಾಣಿಕೆಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಕಲಬುರಗಿ ಎಸ್.ಬಿ.ಐ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಜುಲೈ 18 ರಿಂದ 27 ರವರೆಗೆ 10 ದಿನಗಳ ಕಾಲ ಉಚಿತವಾಗಿ ಕೋಳಿ ಸಾಕಾಣಿಕೆ ತರಬೇತಿ ನೀಡಲಾಗುವುದುದು. ಇದಕ್ಕಾಗಿ ಕಲಬುರಗಿ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳುಅರ್ಜಿ ಸಲ್ಲಿಸಬಹುದು ಎಂದು ಸಂಸ್ಥೆಯ ಎಸ್.ಬಿ.ಐ  ಆರ್.ಸೆಟ್ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ತರಬೇತಿ ಸಂದರ್ಭದಲ್ಲಿ ಉಚಿತ ಹಾಗೂ ವಸತಿಸೌಲಭ್ಯ ನೀಡಲಾಗುವುದು. ಕನ್ನಡ ಓದಲು ಹಾಗೂ ಬರೆಯಲು ಬರಬೇಕು. ವಯೋಮಿತಿ 18 ರಿಂದ 45 ವಯೋಮಾನದೊಳಗಿರಬೇಕು. ಬಿ.ಪಿ.ಎಲ್, ಅಂತ್ಯೋದಯ ರೇಶನ್, ಎಮ್.ಜಿ.ಎನ್.ಆರ್.ಇ.ಜಿಎಮ್.ಜಿ.ಎನ್.ಆರ್.ಇ.ಜಿ ಕಾರ್ಡ್ ಹೊಂದಿದ ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಸಂಸ್ಥೆಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆಯಬಹುದು.  ರೈತರು ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು  ಜುಲೈ 16 ರೊಳಗಾಗಿ ಸಂಸ್ಥೆಯಲ್ಲಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತರಬೇತಿ ಸಂಸ್ಥೆಯಲ್ಲಿ ಜುಲೇ 16 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3.30 ಗಂಟೆಗೆ ನಡೆಯುವ ಸಂದರ್ಶನದಲ್ಲಿ ಹಾಜರಾಗಬೇಕು.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತರಬೇತಿ ಸಂಸ್ಥೆಯನ್ನು ಹಾಗೂ ಮೊಬೈಲ್ ಸಂಖ್ಯೆ 9243602888, 9886781239 ಹಾಗೂ 9900135705 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

Application for Free poultry training ಹಾಸನ ಜಿಲ್ಲೆಯಲ್ಲೂ ಕೋಳಿ ಸಾಕಾಣಿಕೆಗೆ ಅರ್ಜಿ ಆಹ್ವಾನ

ಪಶುಪಾಲನೆಯಲ್ಲಿ ಆಸಕ್ತಿಯಿರುವ ರೈತರು, ರೈತ ಮಹಿಳೆಯರಿಗೆ ಪಶುಪಾಲನಾ ಇಲಾಖೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ವತಿಯಿಂದ ಕೋಳಿ ಸಾಕಾಣಿಕೆಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ : ನಿಮ್ಮ ಮನೆಯ ಆಸ್ತಿ ತೆರಿಗೆ ಕಟ್ಟುವುದೆಷ್ಟಿದೆ? ಮೊಬೈಲ್ ನಲ್ಲೇ ಚೆಕ್ ಮಾಡಬೇಕೆ? ಇಲ್ಲಿದೆ ಮಾಹಿತಿ

ಹೌದು, ಜುಲೈ 15 ಮತ್ತು 16 ರಂದು ಎರಡು ದಿನಗಳ ಕಾಲ ಕೋಳಿ ಸಾಕಾಣಿಕೆ ನೀಡಲು ಅರ್ಜಿ ಆಹ್ವಾನಿಸಲಾಗಿದೆ.  ಹೆಚ್ಚಿನ ಮಾಹಿತಿಗಾಗಿ ಹಾಸನ ಜಿಲ್ಲೆಯ ರೈತರು 08172235226 ಗೆ ಸಂಪರ್ಕಿಸಲು ಕೋರಲಾಗಿದೆ.

ಮಂಗಳೂರಿನಲ್ಲಿ ಕೋಳಿ ಸಾಕಾಣಿಕೆ ತರಬೇತಿ ನೀಡಲು ಅರ್ಜಿ ಆಹ್ವಾನ

ಗ್ರಾಮೀಣಾಭಿವೃದ್ಧಿ ಮಂತ್ರಾಲಯ ಹಾಗೂ ಇತರೆ ಎಂಟು ಸಚಿವಾಲಯದ ಆಜಾದಿ ಸೆ ಅಂತ್ಯೋದಯ ತಕ್ ಅಭಿಯಾನದಡಿಯಲ್ಲಿ ಜುಲೈ 18 ರಿಂದ ತರಬೇತಿ ಹಮ್ಮಿಕೊಂಡಿದೆ. ತರಬೇತಿಯ ಉಜಿರೆಯ ಸಿದ್ದವನದ ಗ್ರಾಮೀಣಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ.

ಹೈನುಗಾರಿಕೆ, ಕುರಿ, ಆಡು ಸಾಕಾಣಿಕೆಯೊಂದಿಗೆ ಕೋಳಿ ಸಾಕಾಣಿಕೆ ಕುರಿತು ಪಶುವೈದ್ಯರಿಂದ ತರಬೇತಿ ನೀಡಲಾಗುವುದು.18 ರಿಂದ 45 ವಯೋಮಾನದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ರೈತರು ಅರ್ಜಿಗಳನ್ನುಆನ್ಲೈನ್ ಮೂಲಕ

www.rudsetujire.com

ನಲ್ಲಿ  ಅರ್ಜಿ ಪಡೆದು ರುಡ್ ಸೆಟ್ ಸಂಸ್ಥೆಯ ನಿರ್ದೇಶಕರು, ಸಿದ್ದವನ ಉಜಿರೆ 574240, ಬೆಳ್ತಂಗಡಿ ತಾಲೂಕು, ದಕ್ಷಿಣ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ರೈತರು 08256 236404 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಶುಪಾಲಕರ ಸಹಾಯವಾಣಿ

ಇತರ ಜಿಲ್ಲೆಯಲ್ಲಿ ಕೋಳಿ ಸಾಕಾಣಿಕೆ ಸೇರಿದಂತೆ ಕುರಿ,ಮೇಕೆ, ಮೊಲ, ಹೈನುಗಾರಿಕೆ ಸಾಕಾಣಿಕೆ ಕುರಿತು ತರಬೇತಿ ಯಾವಾಗ ನೀಡಲಾಗುವುದು ಎಂಬುದನ್ನು ವಿಚಾರಿಸಲು ಪಶುಪಾಲಕರ ಸಹಾಯವಾಣಿಗೆ ಕರೆ ಮಾಡಬಹುದು. ದಿನದ 24 ಗಂಟೆ ಕಾರ್ಯನಿರ್ವಹಿಸುವ ಪಶುಪಾಲಕರ ಸಹಾಯವಾಣಿ 8277 100 200 ನಂಬರಿಗೆ ಕರೆ ಮಾಡಬೇಕು. ಆಗ ರೈತರಿಗೆ ಪಶುಪಾಲನೆ ಕುರಿತು ತರಬೇತಿ ನೀಡಲಾಗುವುದು. ಇದಕ್ಕಾಗಿ ರೈತರು ಯಾವುದೇ ಶುಲ್ಕ ಪಾವತಿಸಬೇಕಾಗಿಲ್ಲ. ಮನೆಯಲ್ಲಿಯೇ ಕುಳಿತು ಮಾಹಿತಿ ಪಡೆಯಬಹುದು.

Leave a Comment