ಅಮೃತ ಜ್ಯೋತಿ ಕಾರ್ಯಕ್ರಮದಡಿಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಎಲ್ಲಾ ಕುಟುಂಬಕ್ಕೆ ಮಾಸಿಕ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ ನೀಡಲು ಸರ್ಕಾರ ಆದೇಶ ಹೊರಡಿಸಿದೆ.
ಹೌದು, ರಾಜ್ಯದ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ಪಡಿತರ ಚೀಟಿ ಹೊಂದಿರುವ) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ ಭಾಗ್ಯಜ್ಯೋತಿ, ಕುಟೀರಜ್ಯೋತಿ ಬಳಕೆದಾರರನ್ನು ಒಳಗೊಂಡಂತೆ) ಮಾಸಿಕ 75 ಯೂನಿಟ್ ಗಳವರೆಗೆ ವಿದ್ಯುತ್ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಯಾವ ವರ್ಗದ ಜನರಿಗೆ ಎಷ್ಟು ಯೂನಿಟ್ ಗಳವರೆಗೆ ಸಹಾಯಧನ ನೀಡಲಾಗುವುದು?
ಗ್ರಾಮೀಣ ಪ್ರದೇಶದಲ್ಲಿ ಭಾಗ್ಯಜ್ಯೋತಿ, ಕುಟೀರಜ್ಯೋತಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಹಾಲಿ ಉಚಿತವಾಗಿ ನೀಡಲಾಗುತ್ತಿರುವ 40 ಯೂನಿಟ್ ಗಳನ್ನು 75 ಯೂನಿಟ್ ಗಳವರೆಗೆ ಹೆಚ್ಚಿಸಲಾಗಿದೆ.
ಗ್ರಾಹಕರು 30-04-2022 ರ ಅಂತ್ಯಕ್ಕೆ ಇರುವ ಬಾಕಿ ವಿದ್ಯುತ್ ಶುಲ್ಕದ ಮೊತ್ತವನ್ನು ಸಂಪೂರ್ಣವಾಗಿ ಪಾವತಿಸಿದಲ್ಲಿ ಈ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.
ಇದನ್ನೂ ಓದಿ : ಗ್ರಾಪಂ ವ್ಯಾಪ್ತಿಯಲ್ಲಿ ಇ ಸ್ವತ್ತಿನಡಿ ನೋಂದಣಿಯಾಗಿರುವ ನಿಮ್ಮ ಆಸ್ತಿಯ 11 ಬಿ ದಾಖಲೆ ಮೊಬೈಲ್ ನಲ್ಲೇ ಚೆಕ್ ಮಾಡಿ
ಮಾಸಿಕ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ ಪಡೆಯಲು ಫಲಾನುಭವಿಗಳು ಏಪ್ರೀಲ್ 30 ರ ಅಂತ್ಯಕ್ಕೆ ಬಾಕಿಯಿರುವ ವಿದ್ಯುತ್ ಮೊತ್ತವನ್ನು ಸಂಪೂರ್ಣವಾಗಿ ಪಾವತಿ ಮಾಡಿರಬೇಕು. ಮಾಸಿಕ ವಿದ್ಯುತ್ ಬಳಕೆ ಗರಿಷ್ಠ 250 ಯೂನಿಟ್ ಮೀರಬಾರದು. ಮಾಪಕ ಅಳವಡಿಕೆ ಮತ್ತು ಮಾಪಕವನ್ನು ಕಡ್ಡಾಯವಾಗಿ ಓದಲಾಗುವುದು.
ಅಮೃತ ಯೋಜನೆಯಡಿ ಸೌಲಭ್ಯ ಪಡೆಯಲು ಯಾವ ಯಾವ ದಾಖಲೆ ಬೇಕು?
ಬಿಪಿಎಲ್, ರೇಷನ್ ಕಾರ್ಡ್, ಆಧಾರ್ ಕಾರ್ಡ್ ಹಾಗೂ ಜಾತಿ ಆದಾಯ ಪ್ರಮಾಣ ಪತ್ರ (ಆರ್.ಡಿ. ಸಂಖ್ಯೆ ಸಹಿತ) ದಾಖಲೆ ನೀಡಬೇಕು. 75 ಯೂನಿಟ್ ವರೆಗೆ ಬಳಕೆಯ ವಿದ್ಯುತ್ ಶುಲ್ಕವನ್ನು ಡಿಬಿಟಿ ಮುಖಾಂತರ ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು.
ಇದನ್ನೂ ಓದಿ : ನಿಮ್ಮ ಜಮೀನನ ಮ್ಯಾಪ್ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿ ಸರ್ವೆ ನಂಬರ್, ಜಮೀನಿಗೆ ಹೋಗಲು ಕಾಲುದಾರಿ, ಬಂಡಿದಾರಿ ಇರುವ ಮಾಹಿತಿ ಪಡೆಯಿರಿ
ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ಸುವಿಧಾ ಪೋರ್ಟಲ್ ಅಥವಾ ಸಂಬಂಧಿಸಿದ ಜೆಸ್ಕಾಂ, ಮೆಸ್ಕಾಂ, ಬೆಸ್ಕಾಂ ಉಪ ವಿಭಾಗ ಅಥವಾ ಶಾಖಾ ಕಚೇರಿಗೆ ಭೇಟಿ ನೀಡಿ ಆನ್ಲೈನ್ ನಲ್ಲಿ ನೋಂದಾಯಿಸಿ ಈ ಸೌಲಭ್ಯ ಪಡೆಯಬಹುದು.
ಸಹಾಯಧನ ಹೇಗೆ ನೀಡಲಾಗುವುದು?
ಈ ಸೌಲಭ್ಯಕ್ಕೆ ಅರ್ಹರಾಗಿರುವ ವಿದ್ಯುತ್ ಗ್ರಾಹಕರು ಮಾಸಿಕ ವಿದ್ಯುತ್ ಬಿಲ್ಲನ್ನು ಸಂಪೂರ್ಣವಾಗಿ ನಿಗದಿತ ಅವಧಿಯೊಳಗೆ ಪಾವತಿಸಿದ ನಂತರ ಸದರಿ ಗ್ರಾಹಕರುಗಳಿಗೆ ಡಿಬಿಟಿ ಯೋಜನೆಯ ವ್ಯವಸ್ಥೆಯಡಿ ಸರ್ಕಾರದ ಸಹಾಯಧನವನ್ನು ಮರು ಪಾವತಿಸಲಾಗುವುದು.
ಅಮೃತ ಯೋಜನೆ ಬಗ್ಗೆ ಎಲ್ಲಿ ವಿಚಾರಿಸಬೇಕು?
ಸಾರ್ವಜನಿಕರು ತಮ್ಮ ಮನೆಯ ಲೈಟ್ ಬಿಲ್ ಕಟ್ಟಲು ಹೋಗುವಾಗಿ ಸಂಬಂಧಿಸಿದ ಕಚೇರಿಯಲ್ಲಿ ಅಮೃತ ಜ್ಯೋತಿ ಯೋಜನೆ ಬಗ್ಗೆ ವಿಚಾರಿಸಿದರೆ ಅವರು ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದಾರೆ. ಹೆಚ್ಚಿನ ಮಾಹಿತಚಿಗಾಗಿ ಹತ್ತಿರದ ಕೆಇಬಿ ಕಚೇರಿಯಲ್ಲಿಸಂಪರ್ಕಿಸಬಹುದು.