Application invited for free training for unemployed ಹೌದು, ನಿರುದ್ಯೋಗಿಗಳಿಗೆ ಉಚಿತ ತರಬೇತಿ ನೀಡಲು ಮೈಸೂರು ತಾಲೂಕು ನಾಗನಹಳ್ಳಿಯಲ್ಲಿರುವ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಆರ್ಜಿ ಆಹ್ವಾನಿಸಲಾಗಿದೆ.
ಫೆಬ್ರವರಿ 12 ರಂದು ಮೈಸೂರು ತಾಲೂಕು ದೇವಲಾಪುರ ಗ್ರಾಮದಲ್ಲಿ, ಫೆಬ್ರವರಿ 13 ರಂದು ಟಿ. ನರಸೀಪುರ ತಾಲೂಕಿನ ಯಾಚೀನಹಳ್ಳಿ, ಫೆಬ್ರವರಿ 14 ರಂದು ಮೈಸೂರು ತಾಲೂಕು ರಟ್ಟನಹಳ್ಳಿ ಮತ್ತು ಫೆಬ್ರವರಿ 15 ರಂದು ಕೆ.ಆರ್. ನಗರ ತಾಲೂಕಿನ ಹನುಮನಹಳ್ಳಿಯಲ್ಲಿ ಬೆಳಗ್ಗೆ 9.30 ರಿಂದ ಸಂಜೆ 5 ಗಂಟೆಯವರೆಗೆ ತೋಟಗಾರಿಕೆ ಮತ್ತು ಕೃಷಿ ಬೆಳಗಳಲ್ಲಿ ಹನಿ ನೀರಾವರಿ ಹಾಗೂ ರಸಾವರಿ ತಾಂತ್ರಿಕತೆಗಳ ಅಳವಡಿಕೆ ಕುರಿತು ಜಿಲ್ಲೆಯ ರೈತ, ರೈತ ಮಹಿಳೆಯರಿಗೆ ಕ್ಷೇತ್ರಾಧಾರಿತ ತರಬೇತಿಗಳನ್ನು ಆಯೋಜಿಸಲಾಗಿದೆ.
ಈ ತರಬೇತಿಯಲ್ಲಿ ಉಪಹಾರದ ವ್ಯವಸ್ಥೆಯನ್ನು ಮಾಡಲಾಗುತ್ತದೆ. ತರಬೇತಿಯಲ್ಲಿ ಭಾಗವಹಿಸಲು ಇಚ್ಚಿಸುವ ಆಸಕ್ತ ರೈತರು ತಮ್ಮ ಹೆಸರನ್ನು ಪೆಬ್ರವರಿ 12 ರ ತರಬೇತಿಗಾಗಿ ಮೊಬೈಲ್ ನಂಬರ್ 9945493589, ಫೆಬ್ರವರಿ 13 ರ ತರಬೇತಿಗಾಗಿ 91643 97510, ಫೆಬ್ರವರಿ 14 ರ ತರಬೇತಿಗಾಗಿ 82779 33154 ಹಾಗೂ ಫೆಬ್ರವರಿ 15 ರ ತರಬೇತಿಗಾಗಿ82779 33180 ಸಂಪರ್ಕಿಸಿ ತಮ್ಮ ಹೆಸರುಗಳನ್ನು ನೋಂದಾಯಿಸಬೇಕು. ಕೇವಲ50 ರೈತರು, ರೈತ ಮಹಿಳೆಯರಿಗೆ ಮಾತ್ರ ಅವಕಾಶವಿದ್ದು, ಮೊದಲು ನೋಂದಣಿ ಮಾಡಿದವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಕೇಂದ್ರದ ಉಪ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
Application invited for free training for unemployed
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್.ಸೆಟ್ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕ, ಯುವತಿಯರಿಗೆ ಫೆಬ್ರವರಿ ತಿಂಗಳಲ್ಲಿ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ ಹಾಗೂ ಮಾರ್ಚ್ ತಿಂಗಳಲ್ಲಿ ಬ್ಯೂಟಿ ಪಾರ್ಲರ್ ಮ್ಯಾನೇಜ್ಮೆಂಟ್ ತರಬೇತಿ ಆಯೋಜಿಸಲಾಗಿದೆ.
ಇದನ್ನೂ ಓದಿ : Baragala parihara ನನ್ನ ಖಾತೆಗೆ ಜಮೆ: ನಿಮಗೆಷ್ಟು ಜಮೆ? ಚೆಕ್ ಮಾಡಿ
ತರಬೇತಿಯು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿರುತ್ತದೆ. ಅಭ್ಯರ್ಥಿಗಳು 18 ರಿಂದ 45 ವಯೋಮಾನದೊಳಗಿರಬೇಕು. ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಆದ್ಯತೆ ನೀಡಲಾಗುವುದು.ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ ವಿವರಗಳೊಂದಿಗೆ ಫೆಬ್ರವರಿ 17 ರೊಳಗಾಗಿ ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್. ಸೆಟ್ ಸಂಸ್ಥೆ, ಹಳಿಯಾಳ ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9980510717 ಹಾಗೂ 9483485489 ಗೆ ಸಂಪರ್ಕಿಸಲು ಕೋರಲಾಗಿದೆ.
Application invited for free training for unemployed
ಕೊಪ್ಪಳ ಜಿಲ್ಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್.ಸೆಟ್ ಸಂಸ್ಥೆಯಿಂದ ಉಚಿತ ಕೌಶಲ್ಯಾಧಾರಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ : Ration card Number ಹಾಕಿ ನಿಮಗೆಷ್ಟು ಹಣ ಜಮೆ? ಚೆಕ್ ಮಾಡಿ
18 ರಿಂದ 45 ವಯೋಮಾನದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಫೆಬ್ರವರಿ ತಿಂಗಳಲ್ಲಿ ಸೋಲಾರ್ ಟೆಕ್ನಿಶಿಯನ್, ಜೆಸಿಬಿ ಆಪರೇಟರ್ ಉಚಿತ ತರಬೇತಿಗಳು ಆರಂಭವಾಗಲಿದೆ. ತರಬೇತಿ ಅವಧಿಯಲ್ಲಿಊಟ ಹಾಗೂ ವಸತಿ ಸೌಲಭ್ಯ ಉಚಿತವಾಗಿರಲಿದೆ.ಅಭ್ಯರ್ಥಿಗಳು ನೋಂದಾಯಿಸಲು ಫೆಬ್ರವರಿ 12 ಕೊನೆಯ ದಿನವಾಗಿದೆ.
ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್.ಸೆಟ್ ಸಂಸ್ಥೆ, ಹಳಿಯಾಳ, ಉತ್ತರಕನ್ನಡ ಜಿಲ್ಲೆ ಈ ವಿಳಾಸಕ್ಕೆ ದೂರವಾಣಿ ಸಂಖ್ಯೆ8217236973, 94834 85489ಗೆ ಸಂಪರ್ಕಿಸಬಹುದು.
ಸೆಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಅರ್ಜಿ ಆಹ್ವಾನ
ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಮಣಿಪುರಂ ಫೈನಾನ್ಸ್ ಲಿಮಿಟೆಡ್ ಸಂಸ್ಥೆಯಿಂದ ನಿರುದ್ಯೋಗಿ ಯುವಕರಿಗೆ ಫೆಬ್ರವರಿ 12 ರಂದು ಬೆಳಗ್ಗೆ 10.30 ರಿಂದ 1 ಗಂಟೆಯವರೆಗೆ ಮಣಿಪುರಂ ಫೈನಾನ್ಸ್ ಲಿಮಿಟೆಡ್, ಎನ್. ಆರ್.ಸರ್ಕಲ್, ಯೂನಿಯನ್ ಬ್ಯಾಂಕ್ ಬಿಲ್ಡಿಂಗ್ ನಲ್ಲಿ ಖಾಲಿಯಿರುವ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.
ಆಸಕ್ತಿಯುಳ್ಳ ಅಭ್ಯರ್ಥಿಗಳು ಯಾವುದೇ ಪದವಿ ವಿಭಾಗದಲ್ಲಿ ತೇರ್ಗಡೆ ಹೊಂದಿದ ಯುವಕ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹಾಸನ ದೂರವಾಣಿ ಸಂಖ್ಯೆ 08172 296374, 9449692691, 9901312488 ರವರನ್ನು ಕಚೇರಿ ವೇಳೆಯಲ್ಲಿ ಮಾತ್ರ ಸಂಪರ್ಕಿಸಬಹುದು.