ತೋಟಗಾರಿಕೆ ಮಾಡುತ್ತಿರುವ ಹಾಗೂ ತೋಟಗಾರಿಕೆಯಲ್ಲಿ ಆಸಕ್ತಿಯಿರುವ ರೈತರಿಗೆ ಭರ್ಜರಿ ಗುಡ್ ನ್ಯೂಸ್ ಇಲ್ಲಿದೆ. ಹನಿ ನೀರಾವರಿ ಅಳವಡಿಕೆಗೆ ಶೇ 75 ರಿಂದ 90 ರಷ್ಟು ಸಹಾಯಧನ ನೀಡಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಹೌದು, 2022-23ನೇ ಸಾಲಿನ ತೋಟಗಾರಿಕೆ ಇಲಾಖೆ ವತಿಯಿಂದ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ರೈತರು ತಮ್ಮ ಜಮೀನಿನಲ್ಲಿ ಹನಿ ನೀರಾವರಿ ಅಳವಡಿಕೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಯಾವ ರೈತರಿಗೆ ಎಷ್ಟು ಸಹಾಯಧನ ನೀಡಲಾಗುವುದು?
ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಹನಿ ನೀರಾವರಿ ಅಳವಡಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಗರಿಷ್ಟ 2 ಹೆಕ್ಟೇರ್ ಪ್ರದೇಶಕ್ಕೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು. ಸಾಮಾನ್ಯ ರೈತರಿಗೆ ಗರಿಷ್ಟ 2 ಹೆಕ್ಟೇರ್ ಪ್ರದೇಶಕ್ಕೆ ಶೇ. 75 ರಷ್ಟು ಸಹಾಯಧನ ನೀಡಲಾಗುವುದು. ಒಂದು ವೇಳೆ ರೈತರು 2 ಹೆಕ್ಟೇರ್ ಗಿಂತ ಹೆಚ್ಚಿನ ಜಮೀನು ಇದ್ದವರಿಗೂ ಸಹಾಯಧನ ನೀಡಲಾಗುತ್ತಿದೆ. 2ಹೆಕ್ಟೇರ್ ಗಿಂತ 5 ಹೆಕ್ಟೇರ್ವರಿಗೆ ಜಮೀನು ಇರುವ ರೈತರಿಗೆ ಶೇ. 45 ರಷ್ಟು ಸಹಾಯಧನ ನೀಡಲಾಗುವುದು. ತೋಟಗಾರಿಕೆ ಬೆಳೆಗೆ ಗರಿಷ್ಟ 5 ಹೆಕ್ಟೇರ್ ವರಿಗೆ ಸಹಾಯಧನ ನೀಡಲಾಗುವುದು. ಅದೇ ರೀತಿ ತರಕಾರಿ ಮತ್ತು ಹೂ ಬೆಳೆಗಳಿಗೆ ಗರಿಷ್ಟ 2 ಹೆಕ್ಟೇರ್ ವರೆಗೆ ಸಹಾಯಧನ ನೀಡಲಾಗುವುದು.
ಯಾವ ರೈತರು ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಅರ್ಹರು?
ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಸಹಾಯಧನ ಪಡೆಯಲು ಈ ಹಿಂದೆ ಸೌಲಭ್ಯ ಪಡೆಯದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಈಗಾಗಲೇ ತೋಟಗಾರಿಕೆ ಇಲಾಖೆಯಿಂದ ಸೌಲಭ್ಯ ಪಡೆದಿದ್ದರೆ ಹಿರಿತನದ ಆಧಾರದ ಮೇಲೆ ಹೊಸದಾಗಿ ಅರ್ಜಿ ಸಲ್ಲಿಸಿದ ಈ ಮೊದಲು ಸೌಲಭ್ಯ ಪಡೆಯದ ರೈತರಿಗೆ ಸಹಾಯಧನ ನೀಡಲಾಗುವುದು.
ಯಾವ ಯಾವ ದಾಖಲೆ ಬೇಕು?
ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ಸೌಲಭ್ಯ ಪಡೆಯುವ ರೈತರಿಗೆ ಆಧಾರ್ ಕಾರ್ಡ್ ಇರಬೇಕು. ಜಮೀನಿನ ಪಹಣಿ ಪತ್ರ ಇರಬೇಕು. ಚುನಾವಣಾ ಗುರುತಿನ ಚೀಟಿ ಇರಬೇಕು. ಪಡಿತರ ಚೀಟಿ ಇರಬೇಕು. ಬ್ಯಾಂಕ್ ಪಾಸ್ ಬುಕ್ ಝರಾಕ್ಸ್ ಪ್ರತಿ ಇರಬೇಕು. ಇತ್ತೀಚಿನ ಪಾಸ್ ಪೋರ್ಟ್ ಸೈಜಿನ ಫೋಟೊಗಳಿರಬೇಕು. ಪರಿಶಿಷ್ಟ ಜಾತಿ ಮತ್ತುಪರಿಶಿಷ್ಟ ಪಂಗಡದವರಾಗಿದ್ದರೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಇರಬೇಕು. ತೋಟಗಾರಿಕೆ ಇಲಾಖೆಯಿಂದ ಅರ್ಜಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಇನ್ನಿತರ ಮಾಹಿತಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು.
ಹನಿ ನೀರಾವರಿ ಯೋಜನೆಯಡಿ ಸಹಾಯಧನ ಪಡೆಯಲು ಇಚ್ಚಿಸುವ ರೈತರು ದರಪಟ್ಟಿಯನ್ನು ಹನಿ ನೀರಾವರಿ ಉಪಕರಣಗಳನ್ನು ಅಳವಡಿಸುವ ಇಲಾಖಾ ಅನುಮೋದಿತ ಕಂಪನಿಯವರಿಂದ ಮಾತ್ರ ಪಡೆಯಬೇಕು. ಸಹಾಯಧನ ಪಡೆಯುವ ರೈತರು ರೈತರ ವತಿಂಕೆಯನ್ನು ಸಂಬಂಧಿತ ಹನಿ ನೀರಾವರಿ ಕಂಪನಿ, ಸಂಸ್ಥೆಯವರ ಬ್ಯಾಂಕ್ ಖಾತೆಗೆ ಜಮೆ ಮಾಡಿರುವ ಬಗ್ಗೆ ಡಿಜಿಟಲ್ ಪೇಮೆಂಟ್ ಡಿಟೇಲ್ಸ್ ಯುಟಿಆರ್ ನಂಬರ್ ಮತ್ತು ಬ್ಯಾಂಕ್ ಪಾಸ್ ಬುಕ್ ಝರಾಕ್ಸ್ ಪ್ರತಿಯನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.
ಇದನ್ನೂ ಓದಿ: ಈ ರೈತರಿಗೆ ಪಿಎಂ ಕಿಸಾನ್ ಯೋಜನೆಯಡಿ ಪ್ರತಿ ವರ್ಷ 10 ಸಾವಿರ ರೂಪಾಯಿ ಜಮೆ ಲಿಸ್ಟ್ ನಲ್ಲಿ ನಿಮ್ಮ ಹೆಸರು ಚೆಕ್ ಮಾಡಿ
ಹನಿ ನೀರಾವರಿ ಅಳವಡಿಕೆಗೆ ಚಾಮರಾಜನಗರ ಜಿಲ್ಲೆಯ ರೈತರಿಂದ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ಅಗತ್ಯ ದಾಖಲೆಗಳನ್ನು ಆಯಾ ತಾಲೂಕಿನ ತೋಟಗಾರಿಕೆ ಇಲಾಖೆಯ ಕಚೇರಿಗೆ ಸಲ್ಲಿಸಿ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇತರ ಜಿಲ್ಲೆಯ ರೈತರು ತಮ್ಮಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲೂಕು ತೋಟಗಾರಿಕೆ ಇಲಾಖೆಯ ಕಚೇರಿಗೆ ಸಂಪರ್ಕಿಸಬಹುದು. ಅಲ್ಲಿ ವಿಚಾರಿಸಿ ಅರ್ಜಿ ಕರೆದಿದ್ದರೆ ಇತರ ಜಿಲ್ಲೆಯ ರೈತರು ಆಯಾ ತಾಲೂಕಿನ ತೋಟಗಾರಿಕೆ ಇಲಾಖೆಯಲ್ಲಿ ಅರ್ಜಿ ಪಡೆದು ಹನಿ ನೀರಾವರಿ ಸಹಾಯಧನಕ್ಕೆ ಅರ್ಜಿ ಸಲ್ಲಿಸಬಹುದು.
ಹಿರಿತನದ ಲಭ್ಯತೆಯ ಆಧಾರದ ಮೇಲೆ ರೈತರಿಗೆ ಸಹಾಯಧನದಲ್ಲಿ ಹನಿನೀರಾವರಿ ಘಟಕ ನೀಡಲಾಗುವುದು. ಆದ್ದರಿಂದ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸುವ ಕುರಿತು ವಿಚಾರಿಸಿ ಅರ್ಜಿ ಸಲ್ಲಿಸಬಹುದು.