subsidy under Ganga Kalyana Yojana 2022-23ನೇ ಸಾಲಿನ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿಯಲ್ಲಿ ಅರ್ಹ ರೈತರಿಗೆ 3.50 ಲಕ್ಷ ರೂಪಾಯಿಯವರೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ವತಿಯಿಂದ ಬೆಸ್ತ, ಅಂಬಿಗ/ಅಂಬಿ, ಗಂಗಾಮತ, ಕಬ್ಬಲಿಗ, ಕೋಲಿ, ಮೊಗವೀರ ಮತ್ತು ಇದರ ಉಪ ಜಾತಿಗಳಿಗೆ ಒಳಪಡುವ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆನ್ಲೈನ್ ಮೂಲಕ ಆಹ್ವಾನಿಸಲಾಗಿದೆ. ಫಲಾಫೇಕ್ಷಿಗಳು ನವೆಂಬರ್ 9 ರವರೆಗೆ ಸೇವಾ ಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
subsidy under Ganga Kalyana Yojana ಗಂಗಾ ಕಲ್ಯಾಣ ನೀರಾವರಿಯೋಜನೆಯಡಿ ಅರ್ಜಿ ಸಲ್ಲಿಸಲು ಅರ್ಹತೆಗಳು
ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಅರ್ಜಿ ಸಲ್ಲಿಸಲು ರೈತರಿಗೆ ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು. ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೆ ಇರುವ ಸಣ್ಣ ಮತ್ತು ಅತೀ ಸಣ್ಣ ರೈತರಾಗಿರಬೇಕು. ವಾರ್ಷಿಕ ವರಮಾನ 98 ಸಾವಿರ ಮಿತಿಯಲ್ಲಿರಬೇಕು. ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷಗಳು ಹಾಗೂ ಗರಿಷ್ಠ 60 ವರ್ಷಗಳ ಮಿತಿಯೊಳಗಿರಬೇಕು. ಅರ್ಜಿದಾರರು ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ 2 ಎಕರೆ ಜಮೀನು ಹೊಂದಿರಬೇಕು.ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು.
ಇದನ್ನೂ ಓದಿ : ಮೊಬೈಲ್ ನಂಬರ್ ಹಾಕಿ ನಿಮ್ಮ ಪಿಎಂ ಕಿಸಾನ್ ಯೋಜನೆ ಹಣ ಜಮೆ ಸ್ಟೇಟಸ್ ಚೆಕ್ ಮಾಡಿ
ಉಳಿದ 24 ಜಿಲ್ಲೆಗಳಿಗೆ ವೈಯಕ್ತಿಕ ನೀರಾವರಿ ಕೊಳವೆ ಬಾವಿಗಳಿಗೆ ಘಟಕ ವೆಚ್ಚ 2 ಲಕ್ಷ ರೂಪಾಯಿ ಸಹಾಯಧನ ನಿಗಧಿಪಡಿಸಿದೆ.ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಿಗೆ ಘಟಕ ವೆಚ್ಚ 3.50 ಲಕ್ಷಗಳ (ವಿದ್ಯುದೀಕರಣ ಸೇರಿದಂತೆ) ಸಹಾಯಧನ ನೀಡಲಾಗುವುದು. ವೈಯಕ್ತಿಕ ನೀರಾವರಿ ಕೊಳವೆ ಬಾವಿ ಘಟಕಕ್ಕೆ ನಿಗಧಿಪಡಿಸಿದ ಘಟಕ ವೆಚ್ಚದಲ್ಲಿ ಕರಾವಳಿ ಹಾಗೂ ಮಲೆನಾಡು ಪ್ರದೇಶದ ಜಿಲ್ಲೆಗಳಲ್ಲಿ ತೆರೆದ ಬಾವಿ ಮೂಲಕ ನೀರಾವರಿ ಸೌಲಭ್ಯ ಒದಗಿಸಲು ಅವಕಾಶ ಇರುತ್ತದೆ.
ಸಾಮಾನ್ಯ ಅರ್ಹತೆಗಳು ಮತ್ತು ನಿಬಂಧನೆಗಳು
ಅರ್ಜಿದಾರರು ಕರ್ನಾಟಕ ರಾಜ್ಯದ ಕಾಯಂ ನಿವಾಸಿಯಾಗಿರಬೇಕು. ಆಧಾರ್ ಕಾರ್ಡ್ ಹೊಂದಿರುವುದು ಕಡ್ಡಾಯವಾಗಿದೆ. ಅರ್ಜಿದಾರರ ಹೆಸರು, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಬ್ಯಾಂಕ್ ಪಾಸ್ ಬುಕ್ ಖಾತೆಗಳಲ್ಲಿ ಹೊಂದಾಣಿಕೆ ಆಗಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ನಿಗಮದ ಯಾವುದೇ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು.ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.
ಕೊಳವೆ ಬಾವಿ ಕೊರೆಯಲು ಮತ್ತು ಪಂಪ್ ಸೆಟ್ ಅಳವಡಿಸಲು ಸೇರಿ ತಗಲುವ ವೆಚ್ಚವು ಸಹಾಯಧನ ಮೊತ್ತವನ್ನು ಮೀರಿದಲ್ಲಿ ಹೆಚ್ಚುವರಿ ಮೊತ್ತವನ್ನು ಫಲಾನುಭವಿಯು ತನ್ನ ಸ್ವಂತ ಮೂಲ ಅಥವಾ ನಿಗಮದಿಂದ ನೀಡಲಾಗುವ ಅವಧಿ ಸಾಲದ ಮೂಲಕ ಭರಿಸಲಾಗುವುದು. ವಿದ್ಯುದೀಕರಣ ಮಾಡಲು ಈಗಿರುವಂತೆ 50 ಸಾವಿರ ರೂಪಾಯಿಗಳನ್ನು ಸಂಬಂಧಪಟ್ಟ ಎಸ್ಕಾಗಳಿಗೆ ಪಾವತಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಜಿಲ್ಲೆಗಳಲ್ಲಿರುವ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ನಿಯಮಿತ, ಡಿ. ದೇವರಾಜ ಅರಸು ಹಿದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಸಂಪರ್ಕಿಸಬೇಕು. ಇನ್ನೂ ಹೆಚ್ಚಿನ ಮಾಹಿತಿಗಾಗಿ ಈ
https://ambigaradevelopment.karnataka.gov.in/
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಪೇಜ್ ಓಪನ್ ಆಗುತ್ತದೆ. ಅಲ್ಲಿಎಲ್ಲಾ ಮಾಹಿತಿ ಪಡೆಯಬಹುದು.