ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಆರಂಭ

Written by Ramlinganna

Updated on:

Gruha lakshmi scheme registration ಮಹಿಳೆಯರನ್ನು ಆರ್ಥಿಕವಾಗಿ ಸಶಕ್ತರನ್ನಾಗಿ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಮಾಸಿಕ 2 ಸಾವಿರ ರೂಪಾಯಿ ಒದಗಿಸುವ ಗೃಹಲಕ್ಷ್ಮೀ ಯೋಜನೆಯೂ ಒಂದಾಗಿದೆ.

ಈ ಯೋಜನೆಯಡಿಯಲ್ಲಿ ನೋಂದಣಿ ಈಗಾಗಲೇ ಆರಂಭವಾಗಿದೆ. ಅರ್ಹ ಫಲಾನುಭವಿಗಳು ನೋಂದಣಿ ಮಾಡಿಕೊಂಡು ಇದರ ಲಾಭ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಮನವಿ ಮಾಡಿದ್ದಾರೆ.

ಗ್ರಾಮೀಣ ಪ್ರದೇಶಗಳಲ್ಲಿ ಫಲಾನುಭವಿಗಳು ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ  ಫಲಾನುಭವಿಗಳು ಕರ್ನಾಟಕ ಒನ್ ಕೇಂದ್ರಗಳಲ್ಲಿ ಉಚಿತವಾಗಿ ಗೃಹಲಕ್ಷ್ಮೀಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೇಂದ್ರದಲ್ಲಿ ಯಾವುದೇ ಸೇವಾ ಶುಲ್ಕ ನೀಡಬೇಕಿಲ್ಲ. ಇನ್ನೂ ಅರ್ಜಿ ಸಲ್ಲಿಕೆಗೆ ಯಾವುದೇ ಕಾಲಮಿತಿ ಇಲ್ಲ. ಹೀಗಾಗಿ ಫಲಾನುಭವಿಗಳು ನೋಂದಣಿ ಮಾಡಲು ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಗೃಹಲಕ್ಷ್ಮೀಗೆ ಯಾರು ಅರ್ಹರು

ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಲಾಗಿರುವ ಮಹಿಳೆ ಇದಕ್ಕೆ ಅರ್ಹರಾಗಿರುತ್ತಾರೆ. ಆದರೆ ಫಲಾನುಭವಿು ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿ.ಎಸ್.ಟಿ ಪಾವತಿದಾರರಾಗಿದ್ದಲ್ಲಿ ಯೋಜನೆ ವ್ಯಾಪ್ತಿಗೆ ಬರುವುದಿಲ್ಲ. ಇನ್ನೂ ಲಿಂಗತ್ವ ಅಲ್ಪಸಂಖ್ಯಾತರು ಯೋಜನೆಯ ಲಾಭ ಪಡೆಯಲು ಅರ್ಹರಾಗಿದ್ದಾರೆ.

Gruha lakshmi scheme registration ನೋಂದಣಿ ಪ್ರಕ್ರಿಯೆ ಹೇಗಿರುತ್ತದೆ?

ಫಲಾನುಭವಿ ನೋಂದಣಿ ಪ್ರಕ್ರಿಯೆ ಎರಡು ವಿಧಾನದ ಮೂಲಕ ಮಾಡಲಾಗುತ್ತಿದೆ. ಮೊದಲನೆಯದಾಗಿ ಈಗಾಗಲೇ ಪಡಿತರ ಚೀಟಿಯಲ್ಲಿ ಗುರುತಿಸಲಾಗಿರು ಪ್ರತಿಯೊಬ್ಬ ಯಜಮಾನಿ ಮಹಿಳೆಯ ಮೊಬೈಲ್ ಸಂಖ್ಯೆಗೆ ನೋಂದಣಿ ದಿನಾಂಕ, ಸಮಯ ಹಾಗೂ ನೋಂದಣಿ ಕೇಂದ್ರದ ವಿವರಗಳನ್ನು ಎಸ್.ಎಂ.ಎಸ್ ಮೂಲಕ ತಿಳಿಸಾಗುತ್ತದೆ. ಅಥವಾ ಟೋಲ್ ಫ್ರೀ ಸಂಖ್ಯೆ 1902 ಗೆ ಕಾಲ್ ಮಾಡಿ ಅಥವಾ8147500500 ಮೊಬೈಲ್ ಸಂಖ್ಯೆಗೆ ಎಸ್.ಎಂಎಸ್ ಮೂಲಕ ಸಂದೇಶ ಕಳುಹಿಸಿ ನೋಂದಣಿ ಕುರಿತು ಮಾಹಿತಿ ಪಡೆಯಬಹುದು.

ಇದನ್ನೂ ಓದಿ : ಅನ್ನಭಾಗ್ಯದ ಹಣ ಯಾರಿಗೆ ಎಷ್ಚು ಜಮೆಯಾಗಿದೆ? ಅನ್ನಭಾಗ್ಚದ ಸ್ಟೇಟಸ್ ಮೊಬೈಲ್ ನಲ್ಲೇ ಚೆಕ್ ಮಾಡಿ

ಒಂದು ವೇಳೆ ನಿಗದಿಪಡಿಸಿದ ದಿನಾಂಕ ಮತ್ತು ಸಮಯದಂದು ಗ್ರಾಮ ಒನ್, ಬಾಪೂಜಿ ಕೇಂದ್ರ, ಕರ್ನಾಟಕ ಒನ್ ಕೇಂದ್ರಗಳಿಗೆ ಹೋಗಲು ಸಾಧ್ಯವಾಗದೆ ಇದ್ದಲ್ಲಿ ಅದೇ ಸೇವಾ ಕೇಂದ್ರಗಳಿಗೆ ಮುಂದಿನ ಯಾವುದೇ ದಿನಾಂಕದಂದು ಸಂಜೆ 5 ರಿಂದ 7 ಗಂಟೆಯವರೆಗೆ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದು.

ನೋಂದಣಿಗೆ ಯಾವ ದಾಖಲೆ ಬೇಕು?

ಗೃಹಲಕ್ಷ್ಮೀ ಯೋಜನೆಯಡಿ ನೋಂದಾಯಿಸಿಕೊಳ್ಳಲು ಪಡಿತರ ಚೀಟಿ ಸಂಖ್ಯೆ ಇರಬೇಕು. ಫಲಾನುಭವಿ ಮತ್ತು ಪತಿಯ ಆಧಾರ್ ಕಾರ್ಡ್ ಸಂಖ್ಯೆ ಇರಬೇಕು. ಬ್ಯಾಂಕ್ ಪಾಸ್ ಬುಕ್ ಇರಬೇಕು. ನೋಂದಣಿ ಕೇಂದ್ರಕ್ಕೆ ಎಲ್ಲಾ ಮಾಹಿತಿಗಳೊಂದಿಗೆ ಹಾಜರಾಗಬೇಕು.

ಗ್ರಾಮ ಒನ್, ಬಾಪೂಜಿ ಕೇಂದ್ರ, ಕರ್ನಾಟಕ ಒನ್ ಕೇಂದ್ರಗಳಲ್ಲಿ ನೋಂದಾಯಿಸಿಕೊಂಡಾಗ ಮಂಜೂರಾತಿ ಪತ್ರ ಸ್ಥಳದಲ್ಲಿಯೇ ನೀಡಲಾಗುತ್ತದೆ. ಪ್ರಜಾಪ್ರತಿನಿಧಿ ಮೂಲಕ ನೋಂದಾಯಿಸಿಕೊಂಡಲ್ಲಿ ಮಂಜೂರಾತಿ ಪತ್ರ ತದನಂತರ ಮನೆಗ ತಲುಪಿಸಲಾಗುತ್ತದೆ. ಇದಲ್ಲದೆ ನೋಂದಣಿ ನಂತರ ಮೊಬೈಲ್ ಸಂಖ್ಯೆಗೆ ಎಸ್.ಎಂ.ಎಸ್ ಮೂಲಕ ಮಂಜೂರಾತಿ ಬಗ್ಗೆ ಸಂದೇಶ ಸಹ ಬರಲಿದೆ. ನೋಂದಣಿ ನಂತರ ಆಧಾರ್ ಜೋಡಣೆಯಾಗಿರುವ ಫಲಾನುಭವಿಯ ಖಾತೆಗೆ ಡಿಬಿಟಿ ಮತ್ತು ಆಧಾರ್ ಜೋಡಣೆಯಾಗದ ಬ್ಯಾಂಕ್ ಖಾತೆಗೆ ಆರ್.ಟಿ.ಜಿಎಸ್. ಮೂಲಕ ಪ್ರತಿ ತಿಂಗಳು 2 ಸಾವಿರ ರೂಪಾಯಿಯನ್ನು ಜಮೆ ಮಾಡಲಾಗುತ್ತದೆ. ನೋಂದಣಿಗೆ ಯಾವುದೇ  ಗಡುವು ನೀಡಿಲ್ಲ. ಹಾಗಾಗಿ ಫಲಾನುಭವಿಗಳು ನೋಂದಣಿ ಮಾಡಿಸಲು ತಮಗೆ ಸಂದೇಶ ಬಂದ ನಂತರ ಗ್ರಾಮೀಣ ಪ್ರದೇಶದವರೂ ಪ್ರಜಾ ಪ್ರತಿನಿಧಿಗಳು ನೋಂದಣಿಗೆ ಬರುವಾಗ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಸಹಾಯವಾಣಿಗೆ ಕರೆ ಮಾಡಬಹುದು.

ಸ್ವಯಂ ನೋಂದಣಿಗೆ ಅವಕಾಶವಿಲ್ಲ ಎಂಬುದನ್ನು ನೆನಪಿಟ್ಟುಕೊಳ್ಳಬೇಕು.

Leave a Comment