ಕೃಷಿ ಹೊಂಡ, ಪಾಲಿ ಹೌಸ್ ನಿರ್ಮಾಣಕ್ಕೆ ಸಹಾಯಧನ ನೀಡಲು ಅರ್ಜಿ ಆಹ್ವಾನ

Written by Ramlinganna

Published on:

ತೋಟಗಾರಿಕೆ ಇಲಾಖೆಯ ವತಿಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಸಹಾಯಧನ ನೀಡಲು ವಿವಿಧ ಜಿಲ್ಲೆಗಳ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಹೌದು, 2023-24ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಕೃಷಿ ಹೊಂಡ, ಪಾಲಿ ಹೌಸ್ ಸೇರಿದಂತೆ ಇತರ ಕೃಷಿ ಚಟುವಟಿಕೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತೋಟಗಾರಿಕೆ ಇಲಾಖೆಯ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಕಾರ್ಯಕ್ರಮಗಳಾದ ಪ್ರದೇಶ ವಿಸ್ತರಣೆ ಮಾವು, ಸೀಬೆ, ಗುಲಾಬಿ, ಸುಗಂಧರಾಜ, ಇತೆರ ಹೂ, ಹೈಬ್ರಿಡ್ ತರಕಾರಿ, ಮಾವು ಪುನಶ್ಚೇತನ, ಪ್ಲಾಸ್ಟಿಕ್ ಹೊದಿಕೆ, ಕೃಷಿ ಹೊಂಡ, ಸಮುದಾಯ ಕೃಷಿ ಹೊಂಡ, ಪ್ಯಾಕ್ ಹೌಸ್, ಈರುಳ್ಳಿ ಶೇಖರಣಾ ಘಟಕ, ಪಾಲಿ ಹೌಸ್, ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ಆಗಸ್ಟ್ 19 ರೊಳಗಾಗಿ ಇದೇ ಕಚೇರಿಗೆ ಅರ್ಜಿ ಸಲ್ಲಿಸಬಹುದು.

ಗುರಿಗಿಂತ ಹೆಚ್ಚಿನ ಅರ್ಜಿಗಳು ಸ್ವೀಕೃತಗೊಂಡಲ್ಲಿ ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು.

ಕೃಷಿ ಹೊಂಡಕ್ಕಾಗಿ ರೈತರಿಂದ ಅರ್ಜಿ ಆಹ್ವಾನ

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ 2023-24ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ವತಿಯಿಂದ ಜಿಲ್ಲೆಯ ಎಲ್ಲಾ ತಾಲೂಕುಗಳ ಗ್ರಾಮೀಣ ಭಾಗದಲ್ಲಿ ಮಾವು, ತೆಂಗು, ಪೇರಲ, ದ್ರಾಕ್ಷಿ, ದಾಳಿಂಬೆ, ಬಾಳೆ, ಪಪ್ಪಾಯ, ನಿಂಬೆ, ಸೀತಾಫಲ, ಅಂಜೂರ, ನೇರಳೆ, ಬಾರೆ, ಡ್ರ್ಯಾಗನ್ ಹಣ್ಣು, ಗೋಡಂಬಿ, ವೀಳ್ಯದೆಲೆ, ಹುಣಸೆ, ಕರಿಬೇವು, ಬೆಳೆಗಳ,  ಪ್ರದೇಶ ವಿಸ್ತರಣೆಗೆ, ಹನಿ ನೀರಾವರಿ ತಾಕುಗಳ ಕಂದಕಗಳನ್ನು ತೆಗೆಯಲು ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ : Annabhagya ದ ಹಣ ಈ ತಿಂಗಳ ಈ ಲಿಸ್ಟ್ ನಲ್ಲಿರುವವರಿಗೆ ಜಮೆ: ಲಿಸ್ಟ್ ನಲ್ಲಿ ನಿಮ್ಮ ಹೆಸರು ಚೆಕ್ ಮಾಡಿ

ಮಣ್ಣು ಸಂರಕ್ಷಣಾ ಕಾಮಗಾರಿಗಳಾದ ಕೃಷಿ ಹೊಂಡಗಳನ್ನು ಕೈಗೊಳ್ಳಲು ಜಿಲ್ಲೆಯ ರೈತ ಬಾಂಧವರಿಗೆ ಉತ್ತಮ ಅವಕಾಶವಿದೆ. ಗದಗ ಜಿಲ್ಲೆಯ ಎಲ್ಲಾ ತಾಲೂಕುಗಳ ಆಸಕ್ತ ರೈತ ಬಾಂಧವರು ಅರ್ಜಿ ಸಲ್ಲಿಸಲು ಸಮೀಪದ ಗ್ರಾಮ ಪಂಚಾಯತ್ ಅಥವಾ ತೋಟಗಾರಿಕೆ ಕಚೇರಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಚಾಮರಾಜನಗರ ಜಿಲ್ಲೆಯ ರೈತರಿಂದಲೂ ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆಯ ವತಿಯಿಂದ 2023-24ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ತೋಟಗಾರಿಕೆ ಬೆಳಗಳ ವಿಸ್ತರಣೆ ಹಾಗೂ ಕೃಷಿ ಹೊಂಡ ನಿರ್ಮಾಣಕ್ಕೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಕೃಷಿ ಹೊಂಡ ನಿರ್ಮಾಣಕ್ಕೆ 75 ಸಾವಿರ ರೂಪಾಯಿ ಸಹಾಯಧನ ನೀಡಲಾಗುವುದು. ಈರುಳ್ಳಿ ಶೇಖರಣಾ ಘಟಕಕ್ಕೆ 87500 ರೂಪಾಯಿ ಸಹಾಯಧನ ನೀಡಲಾಗುವುದು.

ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆ ಬೇಕು?

ತೋಟಗಾರಿಕೆ ಇಲಾಖೆಯಿಂದ ಕರೆಯಲಾದ ಕೃಷಿ ಹೊಂಡ ನಿರ್ಮಾಣಕ್ಕೆ ಸಹಾಯಧನ ನೀಡಲು ರೈತರು ಆಧಾರ್ ಕಾರ್ಡ್ ಸಲ್ಲಿಸಬೇಕು. ಬ್ಯಾಂಕ್ ಪಾಸ್ ಬುಕ್ ಹೊಂದಿರಬೇಕು. ಜಮೀನಿನ ಪಹಣಿ ಸಲ್ಲಿಸಬೇಕು. ಇತ್ತೀಚಿನ ಫೋಟೋ, ಪರಿಶಿಷ್ಟ ಜಾತಿ, ಪರಿಶಿಷ್ಟಪಂಗಡದವರಾಗಿದ್ದರೆ ಜಾತಿ ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕು.

ಲಭ್ಯತೆಯ ಆಧಾರದ ಮೇಲೆ ಸಹಾಯಧನ ನೀಡಲಾಗುವುದು. ಒಂದೇ ಘಟಕಕ್ಕೆ ಹೆಚ್ಚಿನ ಅರ್ಜಿಗಳು ಬಂದಾಗ ಹಿರಿತನ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.ಹಾಗಾಗಿ ರೈತರು ಕೂಡಲೇ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಇಲಾಖೆ ಅಥವಾ ಕೃಷಿ ಇಲಾಖೆಗೆ ಸಂಪರ್ಕಿಸಬಹುದು.

ಗೋಡಂಬಿ ಬೆಳೆಯಲು ಸಹಾಯಧನ ನೀಡಲು ರೈತರಿಂದ ಅರ್ಜಿ ಆಹ್ವಾನ

ಗದಗ ಜಿಲ್ಲೆಯಲ್ಲಿ ಗೋಡಂಬಿ ಬೆಳೆಗೆ ಪ್ರೋತ್ಸಾಹಿಸಲು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಉಚಿತವಾಗಿ ಗೋಡಂಬಿ ಗಿಡಗಳನ್ನು ವಿತರಿಸಲಾಗುವುದು.ಸಹಾಯಧನ ಪಡೆಯಲು ನಿಗದಿತ ಅರ್ಜಿ ನಮೂನೆ, ಪಹಣಿ ಪತ್ರಿಕೆ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್ ನೊಂದಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ 84314 78855 ಗೆ ಸಂಪರ್ಕಿಸಲು ಕೋರಲಾಗಿದೆ.

Leave a Comment