ಕಲಬುರಗಿಯ ಸೇಡಂ ರಸ್ತೆಯ ಪಶು ಆಸ್ಪತ್ರೆ ಆವರಣದಲ್ಲಿನ ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ ಪ್ರಾದೇಶಿಕ ಕೇಂದ್ರ ಕಚೇರಿಯಲ್ಲಿ ನಿರುದ್ಯೋಗ ಯುವಕ, ಯುವತಿಯರಿಗೆ ಹಾಗೂ ರೈತಗೆ ಐದು ದಿನಗಳ ಕಾಲ ಕೋಳಿ ಸಾಕಾಣಿಕೆ ತರಬೇತಿ ನೀಡಲಾಗುತ್ತಿದ್ದು, ಇದಕ್ಕಾಗಿ ಕನಿಷ್ಠ 7ನೇ ತರಗತಿ ಪಾಸಾದ ಅಭ್ಯರ್ಥಿಗಳು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕೆಂದು ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳಿ ಪ್ರಾದೇಶಿಕ ಕೇಂದ್ರ ಕಲಬುರಗಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಭ್ಯರ್ಥಿಗಳ ವಯೋಮಿತಿ 18 ವರ್ಷ ಮೇಲ್ಪಟ್ಟಿರಬೇಕು.  ಕನಿಷ್ಠ 7ನೇ ತರಗತಿ ಪಾಸಾದ ಅಂಕಪಟ್ಟಿ ಅಥವಾ ವರ್ಗಾವಣೆ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರದ ಝೆರಾಕ್ಸ್ ಪ್ರತಿ, ಮೂಲ ವಾಸಸ್ಥಳ ಪ್ರಮಾಣಪತ್ರದೊಂದಿಗೆ ಇತ್ತೀಚಿನ 2 ಭಾವಚಿತ್ರಗಳನ್ನು ಲಗತ್ತಿಸಿ ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ, ಪ್ರಾದೇಶಿಕ ಕೇಂದ್ರ, ಪಶು ಆಸ್ಪತ್ರೆ ಕಾಂಪೌಂಡ್, ಸೇಡಂ ರಸ್ತೆ ಕಲಬುರಗಿ ಕಚೇರಿಯಲ್ಲಿ ಪ್ರತಿದಿನ ಬೆಳಿಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು.

ಈ ತರಬೇತಿಯನ್ನು ಇದೇ ಅಕ್ಟೋಬರ್ 26 ರಿಂದ 30 ರವರೆಗೆ ನೀಡಲಾಗುತ್ತದೆ. ಮೀಸಲಾತಿ ಹಾಗೂ ಮೊದಲು ಹೆಸರು ನೊಂದಾಯಿಸಿಕೊಂಡ ಆಧಾರದ ಮೇರೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.  ಒಬ್ಬರಿಗೆ ಒಂದು ಬಾರಿ ಮಾತ್ರ ತರಬೇತಿ ಪಡೆಯಲು ಅವಕಾಶ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-241256 ಗೆ ಸಂಪರ್ಕಿಸಲು ಕೋರಲಾಗಿದೆ.

ಪಶುಪಾಲಕರ ಸಹಾಯವಾಣಿ

ರಾಜ್ಯದ ಪಶುಸಂಗೋಪನಾ ಚಟುವಟಿಕೆಗಳಲ್ಲಿ ನಿರತರಾಗಿರುವ ರೈತರಿಗಾಗಿ ಸರ್ಕಾರವು ಉಚಿತವಾಗಿ ಪಶುಪಾಲನಾ ಸಹಾಯವಾಣಿ ಆರಂಭಿಸಿದೆ. ರೈತರು 8277 100 200 ಕ್ಕೆ ದಿನದ 24 ಗಂಟೆ ಕರೆ ಮಾಡಿ ಸಹಾಯವಾಣಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪಶುವೈದ್ಯರು ಮತ್ತು ಇತರೆ ವಿಷಯ ತಜ್ಞರಿಂದ ಅಗತ್ಯ ಮಾಹಿತಿ ಪಡೆಯಬಹುದು.

ಇದನ್ನೂ ಓದಿ : ಪಿಎಂ ಕಿಸಾನ್ ಯೋಜನೆಯ 10ನೇ ಕಂತಿನ ಲಿಸ್ಟ್ ನಲ್ಲಿ ನಿಮ್ಮ ಹೆಸರು ಮೊಬೈಲ್ ನಲ್ಲಿಯೇ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಸಹಾಯವಾಣಿ ಮೂಲಕ ರೈತರಿಗೆ ಲಭ್ಯವಿರುವ ತಾಂತ್ರಿಕ ಸೇವೆಗಳ ಬಗ್ಗೆ ಮಾಹಿತಿ ನೀಡಲಾಗುವುದು. ಹೈನುಗಾರಿಕೆ, ಕುರಿ ಮತ್ತು ಮೇಕೆ, ಮೊಲ ಸಾಕಾಣಿಕೆ, ಕೋಳಿ ಸಾಕಾಣಿಕೆ ಕುರಿತಂತೆ ಇಲಾಖೆಯ ತರಬೇತಿ ಕೇಂದ್ರಗಳಲ್ಲಿ ನಡೆಯುವ ತರಬೇತಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಗುವುದು. ದೇಶೀ ಹಾಗೂ ವಿದೇಶಿ ಜಾನುವಾರುಗಳ ತಳಿಗಳ ಬಗ್ಗೆ ಮಾಹಿತಿ ನೀಡಲಾಗುವುದು. ಪಶುಸಂಗೋಪನಾ ಚಟುವಟಿಕೆಗಳಿಗೆ ವಿವಿಧ ಬ್ಯಾಂಕುಗಳಿಂದ ದೊರೆಯಬಹುದಾದ ಸಾಲಸೌಲಭ್ಯ ಕುರಿತು ಮಾಹಿತಿ ನೀಡಲಾಗುವುದು. ಯಶಸ್ವಿ ಹೈನುಗಾರಿಕೆಗೆ ಅಗತ್ಯವಿರುವ ಮೇವಿನ ಬೆಳೆಗಳ ಬಗ್ಗೆ ಮಾಹಿತಿ ನೀಡಲಾಗುವುದು. ತುರ್ತು ಪಶುವೈದ್ಯ ಸೇವೆಗಾಗಿ ಒಳಬರುವ ಕರೆಗಳನ್ನು ಹತ್ತಿರದ ಇಲಾಖಾ ತಾಂತ್ರಿಕ ಸಿಬ್ಬಂದಿ ಅತವಾ ಅಧಿಕಾರಿಗಳಿಗೆ ವರ್ಗಾಯಿಸಿ ಅಗತ್ಯ ಸೇವೆ ದೊರೆಯುವಂತೆ ಸಹಕರಿಸಲಾಗುವುದು.

Leave a Reply

Your email address will not be published. Required fields are marked *