prize for 1st class pass ಪ್ರಥಮ ದರ್ಜೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೌದು, 2023ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ, ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಅಗ್ರಿಕಲ್ಚರ್, ಇಂಜಿನಿಯರಿಂಗ್, ವೆಟರನರಿ, ಮೆಡಿಶನ್ ನಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಈಗಾಗಲೇ ವಿವಿಧ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಈ ಪ್ರೋತ್ಸಾಹಧನಕ್ಕಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ ಎಂದು ಇಲಾಖೆ ತಿಳಿಸಿದೆ. ಆನ್ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಲು ಮಾತ್ರ ಅವಕಾಶವಿದೆ.
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವಾಗ ಕಾಲೇಜಿನ ಹೆಸರು ಇಲ್ಲದೆ ಹೋದಲ್ಲಿ, ಕಾಲೇಜಿನ ಹೆಸರನ್ನು ಇಲಾಖಾ ವೆಬ್ಸೈಟ್ ನಲ್ಲಿ ಸೇರಿಸಲು ಸಂಬಂಧಪಟ್ಟ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಲು ಸೂಚಿಸಲಾಗಿದೆ.
prize for 1st class pass ಯಾವ ವಿದ್ಯಾರ್ಥಿಗೆ ಎಷ್ಟು ಪ್ರೋತ್ಸಾಹ ಧನ ಸಿಗಲಿದೆ?
ದ್ವಿತೀಯ ಪಿಯುಸಿ ಮತ್ತು ಮೂರು ವರ್ಷದ ಪಾಲಿಟೆಕ್ನಿಕ್ ಡಿಪ್ಲೋಮಾ ದಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ 20 ಸಾವಿರ ರೂಪಾಯಿ ಪ್ರೋತ್ಸಾಹ ಧನ ಸಿಗಲಿದೆ.
ಇದನ್ನೂ ಓದಿ : ಪಿಎಂ ಕಿಸಾನ್ 14ನೇ ಕಂತು ಈ ದಿನ ಬಿಡುಗಡೆ : ಲಿಸ್ಚ್ ನಲ್ಲಿ ನಿಮ್ಮ ಹೆಸರು ಮೊಬೈಲ್ ನಲ್ಲೇ ಚೆಕ್ ಮಾಡಿ
ಪದವಿಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ 25 ಸಾವಿರ ರೂಪಾಯಿ ಪ್ರೋತ್ಸಾಹ ಧನ ಸಿಗಲಿದೆ. ಅದೇ ರೀತಿ ಸ್ನಾತಕೋತ್ತರಪದವಿಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾದ ಅಭ್ಯರ್ಥಿಗಳಿಗೆ 30 ಸಾವಿರ ರೂಪಾಯಿ ಸಿಗಲಿದೆ.
ಅಗ್ರಿಕಲ್ಚರ್, ಇಂಜಿನಿಯರಿಂಗ್, ವೆರಟನರಿ, ಮೆಡಿಷನ್ ವಿದ್ಯಾರ್ಥಿಗಳಿಗೆ 35 ಸಾವಿರ ರೂಪಾಯಿ ಪ್ರೋತ್ಸಾಹ ಧನ ಸಿಗಲಿದೆ.
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಯಾವ ಯಾವ ದಾಖಲೆ ಬೇಕಾಗುತ್ತದೆ?
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ಬಳಿ ಪ್ರಥಮ ದರ್ಜೆಯಲ್ಲಿ ಪಾಸಾದ ಅಂಕಪಟ್ಟಿ ಇರಬೇಕು. ಆಧಾರ್ ಕಾರ್ಡ್ ಇರಬೇಕು. ಬ್ಯಾಂಕ್ ಪಾಸ್ ಬುಕ್ ಪ್ರತಿಯನ್ನು ಆನ್ಲೈನ್ ನಲ್ಲಿ ಅಪ್ಲೋಡ್ ಮಾಡಬೇಕಾಗುತ್ತದೆ.
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ?
ಪ್ರಥಮ ದರ್ದೆಯಲ್ಲಿ ಪಾಸಾದ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಈ
https://sw.kar.nic.in/swprizemoney/Home.aspx?ReturnUrl=%2fswprizemoney%2f
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಸಮಾಜ ಕಲ್ಯಾಣ ಇಲಾಖೆಯ ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಕಾಣುವ ಆನ್ಲೈನ್ ನಲ್ಲಿ ಅರ್ಜಿ /Online Application (passed in 2023 only) ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ನಂತರ ನೀವು ಪಾಸಾದ ವರ್ಷ, ಜಾತಿ, ನಿಮ್ಮ ಹೆಸರು, ತಂದೆಯ ಹೆಸರು ಸೇರಿದಂತೆ ಇನ್ನಿತರ ಮಾಹಿತಿಗಳನ್ನು ಭರ್ತಿ ಮಾಡಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅರ್ಜಿ ಸ್ಟೇಟಸ್ ಸಹ ಚೆಕ್ ಮಾಡಬಹುದು. ಅರ್ಜಿ ತುಂಬುವಾಗ ಏನಾದರೂ ತಪ್ಪಾಗಿದ್ದರೆ ಸರಿಪಡಿಸಲು ಅವಕಾಶವಿದೆ.
ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ಅಂದರೆ ಪ್ರಿಂಟ್ ತೆಗೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ 24 ^ 7 ಸಹಾಯವಾಣಿ 9482300400ಗೆ ಸಂಪರ್ಕಿಸಲು ಕೋರಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಎಸ್ಎಸ್ಎಲ್ಸಿ ಯಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾದ ಅಭ್ಯರ್ಥಿಗಳಿಗೂ ಪ್ರೋತ್ಸಾಹ ಧನ ಸಿಗಲಿದೆ. ಇದರೊಂದಿಗೆ ಆನ್ಲೈನ್ ಮೂಲಕ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೂ ಅರ್ಜಿ ಸಲ್ಲಿಸಬಹುದು.