ಸ್ವಯಂ ಉದ್ಯೋಗಕ್ಕಾಗಿ 2 ಲಕ್ಷ ರೂಪಾಯಿಯವರೆಗೆ ಶೇ. 15 ರಷ್ಟು ಸಹಾಯಧನದಲ್ಲಿ ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನ

Written by By: janajagran

Published on:

ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಸ್ವಯಂ ಉದ್ಯೋಗ ಕೈಗೊಳ್ಳಲು ಆಸಕ್ತಿಯಿರುವವರಿಗಾಗಿ 2 ಲಕ್ಷ ರೂಪಾಯಿಯವರೆಗೆ ಶೇ. 15 ರಷ್ಟು ಸಹಾಯಧನದಲ್ಲಿ ಸಾಲಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರಿವು ಶೈಕ್ಷಣಿಕ ಸಾಲ ಯೋಜನೆಯಡಿಯಲ್ಲಿ 2021-22ನೇ ಸಾಲಿನಲ್ಲಿ ಸೌಲಭ್ಯ ಪಡೆಯ ಬಯಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಆಯಾ ಜಿಲ್ಲೆಯ ನಿಗಮದ ಜಿಲ್ಲಾ ವ್ಯವಸ್ಥಾಪಕರು, ಕಚೇರಿ ಹಾಗೂ ನಿಗಮದ ವೆಬ್ ಸೈಟ್ ನ್ನ ಸಂಪರ್ಕಿಸಿ ಅರ್ಜಿ ನಮೂನೆಯನ್ನು ಪಡೆದುಕೊಳ್ಳಬಹುದು.

ಈ ಯೋಜನೆ ಸೌಲಭ್ಯ ಪಡೆಯಲು ಸ್ವಯಂ ಉದ್ಯೋಗಕ್ಕಾಗಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ 2 ಲಕ್ಷ ರೂಪಾಯಿಯವರೆಗೆ ಆರ್ಥಿಕ ನೆರವು ನೀಡಲಾಗುವುದು.  ಇದರಲ್ಲಿ ಶೇ. 15 ರಷ್ಟು ಸಹಾಯಧನ ನೀಡಲಾಗುವುದು. ಉಳಿಕೆ ಮೊತ್ತ ವಾರ್ಷಿಕ ಶೇ. 4 ರ ಬಡ್ಡಿದರದಲ್ಲಿ ಸಾಲ ನೀಡಲಾಗುವುದು. ಹಿಂದುಳಿದ ವರ್ಗಗಳ ಪ್ರವರ್ಗ 1, 2ಎ, 3ಎ ಮತ್ತು 3 ಬಿಗೆ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇತರ ಉಪ ಸಮುದಾಯಗಳು ಹೊರತುಪಡಿಸಿ) ಸೇರಿದವರಾಗಿರಬೇಕು.  ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 40 ಸಾವಿರ, ಪಟ್ಟಣ ಪ್ರದೇಶಗಳಿಗೆ ಶೇ. 55 ಸಾವಿರ ರೂಪಾಯಿಗಳೊಳಗೆ ಇರಬೇಕು. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು. ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಚಾಲ್ತಿಯಲ್ಲಿರುವ ಜಾತಿ ಆದಾಯ ಪ್ರಮಾಣ ಪತ್ರ ಹೊಂದಿರಬೇಕು.

ಇದನ್ನೂ ಓದಿ : ಮೊಬೈಲ್ ನಲ್ಲಿಯೇ ಪಿಎಂ ಕಿಸಾನ್ ಯೋಜನೆಯ ಸ್ಟೇಟಸ್ ಚೆಕ್ ಮಾಡಿ

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸಾಲ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಸಾಲ ಸೌಲಭ್ಯ ಪಡೆಯಲಿಚ್ಚಿಸುವ ಹಿಂದುಳಿದ ವರ್ಗದ ಅರ್ಜಿದಾರರು ನಿಗಮದ ವೆಬ್ ಸೈಟ್ https://dbcdc.karnataka.gov.in/ ನಲ್ಲಿ ಸಂಪರ್ಕಿಸಲು ಕೋರಲಾಗದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ 080 2237 4832 ಗೆ ಸಂಪರ್ಕಿಸಲು ಕೋರಲಾಗಿದೆ.  10-01-2022 ರೊಳಗೆ ಅರ್ಜಿ ಸಲ್ಲಿಸಬೇಕು.

Leave a comment