ತಾಡಪತ್ರಿ ವಿತರಣೆಗೆ ರೈತರಿಂದ ಅರ್ಜಿ ಆಹ್ವಾನ

Written by By: janajagran

Published on:

ಹಾವೇರಿ ತಾಲೂಕಿನ ಗುತ್ತಲ ರೈತ ಸಂಪರ್ಕ ಕೇಂದ್ರಗಳ ಮೂಲಕ 2021-22ನೇ ಸಾಲಿನ ಕೃಷಿ ಇಲಾಖೆಯ ರಿಯಾಯ್ತಿ ದರದಲ್ಲಿ ರೈತರಿಗೆ ತಾಡಪತ್ರಿಗಳನ್ನು ವಿತರಿಸಲ ತೀರ್ಮಾನಿಸಿದ್ದು, ಸದುಪಯೋಗ  ಪಡಿಸಿಕೊಳ್ಳುವಂತೆ ಕೃಷಿ ಅಧಿಕಾರಿ ಪುಟ್ಟರಾಜ ಹಾವನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಡಪತ್ರಿಗಳನ್ನು ಪಡೆಯಲಿಚ್ಚಿಸುವ ರೈತರು ಆಧಾರ್ ಕಾರ್ಡ್, ಜಮೀನಿನ ಉತಾರ, ಬ್ಯಾಂಕ್ ಪಾಸ್ ಬುಕ್ ನ ಝರಾಕ್ಸ್ ಪ್ರತಿಯೊಂದಿಗೆ ಅರ್ಜಿಗಳನ್ನು ಪಟ್ಟಣದ ರೈತ ಸಂಪರ್ಕ ಕೇಂದ್ರಗಳಲ್ಲಿ ಸೆಪ್ಟೆಂಬರ್ 18 ರೊಳಗೆ  ಸಲ್ಲಿಸಬೇಕು. ರೈತರು ಸದರಿ ಯೋಜನೆಯಡಿ ಸವಲತ್ತು  ಪಡೆಯಬಹುದು. ಈ ಹಿಂದೆ ತಾಡಪತ್ರಿಗಳನ್ನು ಪಡೆದ ರೈತ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅವಕಾಶವಿಲ್ಲ.

ಇದನ್ನೂ ಓದಿ:ನಿಮ್ಮ ಜಮೀನಿಗೆ ಹೋಗುವ ಕಾಲುದಾರಿ, ಎತ್ತಿನಬಂಡಿ ಹೋಗುವ ದಾರಿ, ಕೆರೆಕಟ್ಟೆ, ನಿಮ್ಮ ಸರ್ವೆನಂಬರ್ ನೋಡಬೇಕೆ… ಇಲ್ಲಿದೆ ಮಾಹಿತಿ

ತಾಡಪತ್ರಿಗಳನ್ನು ಲಾಟರಿ ಎತ್ತುವ ಮೂಲಕ ಆಯ್ಕೆ ನಡೆಸಲಾಗುವುದು. ಆಯ್ಕೆಯಾದ ರೈತ ಫಲಾನುಭವಿಗಳಿಗೆ ಸೆಪ್ಟೆಂಬರ್ 23  ರಿಂದ ಸೆಪ್ಟೆಂಬರ್ 30 ರವರೆಗೆ ಹಂಚಿಕೆ ಮಾಡಲಾಗುವುದು. ಹಂಚಿಕೆಮಾಡುವ ಕೊನೆಯ ದಿನಾಂಕದೊಳಗೆ ಫಲಾನುಭವಿಗಳು ತಮ್ಮ ತಾಡಪತ್ರಿಗಳನ್ನು ತೆಗೆದುಕೊಂಡು ಹೋಗತಕ್ಕದ್ದು, ಇಲ್ಲವಾದಲ್ಲಿ ಅವಶ್ಯಕತೆ ಇಧ್ದ ರೈತರಿಗೆ ಹಂಚಿಕೆ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೈತರ ಬೆಳೆಗಳಿಗೆ ಮಳೆ, ಗಾಳಿ ಕಾಪಾಡಲು ರೈತರಿಗೆ ತಾಡಪತ್ರಿಯ ಅವಶ್ಯಕತೆಯಿರುತ್ತದೆ. ಅಷ್ಟೇ ಅಲ್ಲ, ಬೆಳೆಗಳ ರಾಶಿ ಸಮಯದಲ್ಲಿಯೂ ಸಹ ತಾಡಪತ್ರಿ ಬಳಕೆ ಮಾಡಲಾಗುತ್ತದೆ. ಸಹಾಯಧನದಲ್ಲಿ ವಿತರಿಸಲಾಗುವ ಈ ತಾಡಪತ್ರಿಗಳನ್ನು ರೈತರು ಸದುಪಯೋಗ ಪಡೆದುಕೊಳ್ಳಬಹುದು ಎಂದು ತಿಳಿಸಲಾಗಿದೆ.

ತಾಡಪತ್ರಿ ಪಡೆಯಲು ಯಾವ ಯಾವ ದಾಖಲೆ ಬೇಕು

ಅರ್ಜಿಯೊಂದಿಗೆ ರೈತರು ಆಧಾರ್ ಕಾರ್ಡ್ ಪ್ರತಿ ಸಲ್ಲಿಸಬೇಕು. ಖಾತೆ ಉತಾರ, ಬ್ಯಾಂಕ್ ಪಾಸ್ ಬುಕ್ ನಕಲು ಪ್ರತಿ ಸಲ್ಲಿಸಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿದ್ದರೆ ಜಾತಿ, ಆದಾಯ ಪ್ರಮಾಣ ಪತ್ರದ ನಕಲು ಪ್ರತಿಗಳನ್ನು ಸಲ್ಲಿಸಬೇಕು. ಈ ಹಿಂದೆ ತಾಡಪತ್ರಿಗಳನ್ನು ಪಡೆದ ರೈತರಿಗೆ ಈ ಸೌಲಭ್ಯ ಈಗ ಸಿಗುವುದಿಲ್ಲ. ಹೊಸ ರೈತರಿಗೆ ಸೌಲಭ್ಯ ನೀಡಲಾಗುವುದು.

ಟಾರ್ಪಲಿನ್ ಅವಶ್ಯಕತೆ (why Tarpaulin need)

ರೈತರಿಗೆ ಮಳೆ, ಗಾಳಿ, ಧೂಳಿನಿಂದ ರಾಶಿ ಮಾಡಿದ ಬೆಳೆ ಹಾಗೂ ದವಸಧಾನ್ಯಗಳನ್ನು ರಕ್ಷಿಸಿಕೊಳ್ಳಲು ಟಾರ್ಪಲಿನ್ ತುಂಬಾ ಅವಶ್ಯಕತೆಯಿರುತ್ತದೆ. ಅಕಾಲಿಕವಾಗಿ ಸುರಿದ  ಮಳೆ, ಸುಳಿಗಾಳಿಯಿಂದಾಗಿ ದವಸ ಧಾನ್ಯ ಹಾಳಾಗುತ್ತಿರುತ್ತದೆ. ರಾಶಿ ಮಾಡಲು ಸಹಿತ ತಾಡಪತ್ರಿ ಉಪಯೋಗಿಸಬಹುದು. ಹೆಸರು, ಉದ್ದು ಬೆಳೆಯನ್ನು ರಸ್ತೆಯ ಮೇಲೆಯೇ ರಾಶಿ ಮಾಡುತ್ತಿರುತ್ತಾರೆ. ಇದರಿಂದಾಗಿ ಅವಘಡ ಸಂಭವಿಸುವ ಸಾಧ್ಯತೆಯಿರುತ್ತದೆ.

ಬೆಳೆಗಳನ್ನು ಬಿಸಿಲಿಗೆ ಒಣಗಿಸಲು ಸಹ ತಾಡಪತ್ರಿಯ ಅವಶ್ಯಕತೆ ಹೆಚ್ಚಿರುತ್ತದೆ. ಹಾಗಾಗಿ ಸರ್ಕಾರದಿಂದ ಸಿಗುವ ಸೌಲಭ್ಯದಲ್ಲಿ ತಾಡಪತ್ರಿ ಪಡೆದುಕೊಂಡರೆ ನಿಮ್ಮ ದವಸಧಾನ್ಯಗಳ ರಕ್ಷಣೆಗೂ ಸಹಾಯವಾಗುತ್ತದೆ.

Leave a comment