ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

Written by Ramlinganna

Published on:

ಬಾಗಲಕೋಟೆ, ಚಿತ್ರದುರ್ಗ, ಧಾರವಾಡ, ಗದಗ ಜಿಲ್ಲೆ ಸೇರಿದಂತೆ ಇತರ ಜಿಲ್ಲೆಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹೌದು, ಬಾಗಲಕೋಟೆ ತಾಲೂಕಿನಲ್ಲಿ 2023 ರ ಮಾರ್ಚ್ ಅಂತ್ಯಕ್ಕೆ ವಯೋ ನಿವೃತ್ತಿ ಕಾರಣ ಖಾಲಿಯಾಗಿರುವ ಹುದ್ದೆಗಳು ಹಾಗೂ ಹೊಸದಾಗಿ ಮಂಜೂರಾಗಿರುವ ಕೇಂದ್ರಗಳು ಸೇರಿ 22 ಅಂಗನವಾಡಿ ಕಾರ್ಯಕರ್ತೆ ಹಾಗೂ 44 ಸಹಾಯಕಿಯರ ಹುದ್ದೆಗಳ ಭರ್ತಿ ಮಾಡಿಕೊಳ್ಳಲಾಗುತ್ತಿದೆ.

ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಗತ್ಯ ದಾಖಲೆಗಳೊಂದಿಗೆ ಏಪ್ರೀಲ್ 24 ರ ಒಳಗೆ ಅರ್ಜಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ, ಹುನಗುಂದ ಇವರೆಗೆ ಖುದ್ದಾಗಿ ಸಲ್ಲಿಸಬೇಕು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08351 295080 ಗೆ ಸಂಪರ್ಕಿಸುವಂತೆ ಹುನಗುಂದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಾಗಲಕೋಟೆ ಜಿಲ್ಲೆಯ ಬಾದಾಮಿ ಮತ್ತು ಮುಧೋಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಮಾರ್ಚ್ 2023 ರ ಅಂತ್ಯಕ್ಕೆ ವೋಯ ನಿವೃತ್ತಿಯಿಂದ ಖಾಲಿಯಾಗಿರುವ ಹುದ್ದೆಗಳು ಸೇರಿ ಖಾಲಿಯಿರುವ ಹಾಗೂ ಹೊಸದಾಗಿ ಮಂಜೂರಾದ ಕೇಂದ್ರಗಳ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮಹಿಳಾ ಮತ್ತು ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ : ವಿವಿಧ ಜಿಲ್ಲೆಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ

ಬಾದಾಮಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ 32 ಅಂಗನವಾಡಿ ಕಾರ್ಯಕರ್ತೆ ಹಾಗೂ 84 ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮುಧೋಳ ತಾಲೂಕಿನ 38 ಅಂಗನವಾಡಿ ಕಾರ್ಯಕರ್ತೆ, 66 ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ಇರುವುದಿಲ್ಲ.ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಬಾದಾಮಿ 08357 295009, ಮುಧೋಳ 08350280162 ಇವರನ್ನು ಸಂಪರ್ಕಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಚಿತ್ರದುರ್ಗ ಜಿಲ್ಲೆಯಿಂದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ, ಚಳ್ಳಕೇರೆ ಹಾಗೂ ಹಿರಿಯೂರು ತಾಲೂಕಿನ ಶಿಶು ಅಭಿವೃದ್ಧಇ ಯೋಜನೆಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹೊಸದುರ್ಗ ತಾಲೂಕಿನಲ್ಲಿ 7 ಅಂಗನವಾಡಿ ಕಾರ್ಯಕರ್ತೆ, 4 ಮಿನಿ ಅಂಗನವಾಡಿ ಕಾರ್ಯಕರ್ತೆ 12 ಸಹಾಯಕಿ ಹುದ್ದೆಗಳು ಖಾಲಿಯಿವೆ.

ಚಳ್ಳಕೇರಿ ತಾಲೂಕಿನಲ್ಲಿ 42 ಅಂಗನವಾಡಿ ಕಾರ್ಯಕರ್ತೆ, 70 ಸಹಾಯಕಿ ಹುದ್ದೆಗಳು ಖಾಲಿಯಿವೆ. ಹಿರಿಯೂರು ತಾಲೂಕಿನಲ್ಲಿ 5 ಅಂಗನವಾಡಿ ಕಾರ್ಯಕರ್ತೆ, 1 ಮಿನಿ ಅಂಗನವಾಡಿ ಕಾರ್ಯಕರ್ತೆ 33 ಸಹಾಯಕಿ ಹುದ್ದೆಗಳು ಖಾಲಿಯಿವೆ. ಅರ್ಹ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ : ಈ ಜಿಲ್ಲೆಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ. ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಹೊಸದುರ್ಗ ತಾಲೂಕಿನಲ್ಲಿ ಅರ್ಜಿ ಸಲ್ಲಿಸಲು ಏಪ್ರೀಲ್ 26 ಸಂಜೆ. 5.30 ಹಾಗೂ ಚಳ್ಳಕೇರೆ ಮತ್ತು ಹಿರೆಯೂರು ತಾಲೂಕಿನಲ್ಲಿ ಅಱ್ಜಿ ಸಲ್ಲಿಸಲು ಏಪ್ರೀಲ್ 27 ಕೊನೆಯ ದಿನವಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಹೊಸದುರ್ಗ ದೂರವಾಣಿ ಸಂಖ್ಯೆ 08199 200018, ಚಳ್ಳಕೆರೆ ದೂರವಾಣಿ ಸಂಖ್ಯೆ 08195 200042, ಹಿರಿಯೂರು ಶಿಶುಅಭಿವೃದ್ಧಿ ಯೋಜನಾ ಅಭಿವೃದ್ಧಿ ಅಧಿಕಾರಿ ಕಚೇರಿ ದೂರವಾಣಿ ಸಂಖ್ಯೆ 08193 263512 ಗೆ ಕರೆ ಮಾಡಬಹುದು.

ಧಾರವಾಡ ಜಿಲ್ಲೆಯಿಂದ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಧಾರವಾಡ ಶಿಶು ಅಭಿವೃದ್ಧಿ ಯೋಜನೆ ಕಲಘಟಗಿ ವ್ಯಾಪ್ತಿಯ 2022-23ನೇ ಸಾಲಿನ ಖಾಲಿಯಿರುವ 11 ಅಂಗನವಾಡಿ ಕಾರ್ಯಕರ್ತೆ ಹಾಗೂ 26 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆಯ್ಕೆ ಮಾಡಲು ಸ್ಥಳೀಯ ಅರ್ಹ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಕಲಘಟಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಅರ್ಜಿ ಪಡೆದು ಏಪ್ರೀಲ್ 25 ರೊಳಗಾಗಿ ಕಲಘಟಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ  08370 284532 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಗದಗ ಜಿಲ್ಲೆಯಿಂದಲೂ ಅರ್ಜಿ ಆಹ್ವಾನ

ಗದಗ ಜಿಲ್ಲೆಯ ರೋಣ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ 2022-23ನೇ ಸಾಲಿನಲ್ಲಿ ಖಾಲಿಯಿರುವ 25 ಅಂಗನವಾಡಿ ಕಾರ್ಯಕರ್ತೆ ಹಾಗೂ 45 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ : 200 ಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿಗಳನ್ನು ರೋಣ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಪಡೆದು ಏಪ್ರೀಲ್ 28 ರೊಳಗೆ ಸಲ್ಲಿಸಬೇಕು. ನಿಗದಿತ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಹಳೇ ಪುರಸಭೆ ಕಟ್ಟಡ, ಹುಬ್ಬಳ್ಳಿ ರಸ್ತೆ, ರೋಣ ಇವರನ್ನು ಸಂಪರ್ಕಿಸಬೇಕೆಂದು ಪ್ರಕಟಣೆಯಲ್ಲಿತಿಳಿಸಲಾಗಿದೆ.

Leave a comment